ಹರಿಹರ : ಅಪಘಾತ ; ಮಹಿಳಾ‌ ಪಿಎಸ್‌ಐ ಸೇರಿ 6 ಮಂದಿಗೆ ಗಂಭೀರ ಗಾಯ!!

ದಾವಣಗೆರೆ :

      ಜಿಲ್ಲೆಯ ಹರಿಹರ ಸಮೀಪದ‌ ರಾಷ್ಟ್ರೀಯ ಹೆದ್ದಾರಿ ನಾಲ್ಕರಲ್ಲಿ ಇಂದು ಮುಂಜಾನೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಬೆಂಗಳೂರಿನ ಮಾಗಡಿ ಪೊಲೀಸ್ ಠಾಣೆಯ ಮಹಿಳಾ ಸಬ್ ಇನ್ಸ್ ಪೆಕ್ಟರ್ ಸುಧಾ ಸೇರಿದಂತೆ 6 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ.

     ಪ್ರಕರಣವೊಂದರ ವಿಚಾರಣೆ ಸಂಭಂದ ಆರೋಪಿಯೊಂದಿಗೆ ಬೆಂಗಳೂರಿನಿಂದ ಬೆಳಗಾವಿಗೆ ಖಾಸಗಿ ವಾಹನದಲ್ಲಿ ತೆರಳುತ್ತಿದ್ದಾಗ ಹರಿಹರ ಸಮೀಪ  ಲಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದಾಗ ಈ ದುರಂತ ಸಂಭವಿಸಿದೆ.

     ಎಲ್ಲ ಗಾಯಾಳುಗಳನ್ನು ದಾವಣಗೆರೆಯ ಎಸ್ ಎಸ್ ವೈಧ್ಯಕೀಯ ಮಹಾವಿದ್ಯಾಲಯಕ್ಕೆ ಸೇರಿಸಲಾಗಿದ್ದು, ಚಾಲಕನ ಸ್ಥಿತಿ ಚಿಂತಾಜನಕವಾಗಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap