ರಾಮನಗರ:
ರಾಮನಗರ ತಾಲೂಕಿನ ಜಯಪುರ ಗೇಟ್ ಬಳಿ ಅಪಘಾತ ಸಂಭವಿಸಿದ್ದು ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೂವರು ಒಂದೇ ಬೈಕ್ ನಲ್ಲಿ ಬೆಂಗಳೂರಿನಿಂದ ಮೈಸೂರಿಗೆ ತೆರಳುತ್ತಿದ್ದಾಗ ರಸ್ತೆ ಪಕ್ಕ ಕೆಟ್ಟು ನಿಂತಿದ್ದ ಕಾರಿಗೆ ಡಿಕ್ಕಿ ಹೊಡೆದು ನೆಲಕ್ಕೆ ಅಪ್ಪಳಿಸಿದ್ದಾರೆ. ಈ ವೇಳೆ ಮತ್ತೊಂದು ಕಾರು ಅವರ ಮೇಲೆ ಹರಿದು ಮೃತಪಟ್ಟಿದ್ದಾರೆ.
ಅಪಘಾತದ ಸ್ಥಳಕ್ಕೆ ಆಗಮಿಸಿದ ರಾಮನಗರ ಸಂಚಾರಿ ಠಾಣಾ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
