ಮಂಗಳೂರು
ಮೂವರು ವಿದ್ಯಾರ್ಥಿನಿಯರ ಮೇಲೆ ದುಷ್ಕರ್ಮಿಗಳು ಆ್ಯಸಿಡ್ ದಾಳಿ ನಡೆಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬದಲ್ಲಿ ನಡೆದಿದೆ. ದ್ವಿತೀಯ ಪಿಯುಸಿ ಅಲೀನಾ ಸಿಬಿ, ಅರ್ಚನಾ, ಅಮೃತ ಎಂಬ ವಿದ್ಯಾರ್ಥಿನಿಯರ ಮೇಲೆ ಆ್ಯಸಿಡ್ ದಾಳಿ ನಡೆದಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಕಡಬ ಸರ್ಕಾರಿ ಕಾಲೇಜಿನಲ್ಲಿ ಈ ಘಟನೆ ನಡೆದಿದೆ. ಮೂವರು ವಿದ್ಯಾರ್ಥಿನಿಯರು ಶಾಲಾ ವರಾಂಡದಲ್ಲಿ ಪರೀಕ್ಷಾ ತಯಾರಿ ನಡೆಸುವ ವೇಳೆ ಮಾಸ್ಕ್ ಹಾಗೂ ಹ್ಯಾಟ್ ಧರಿಸಿ ಬಂದ ಕಿರಾತಕ ಏಕಾಏಕಿ ವಿದ್ಯಾರ್ಥಿನಿಯರ ಮೇಲೆ ಆ್ಯಸಿಡ್ ಎರಚಿ ಪರಾರಿಯಾಗಿದ್ದಾನೆ.
ಘಟನೆಯಲ್ಲಿ ಮೂವರು ವಿದ್ಯಾರ್ಥಿನಿಯರ ಮುಖಕ್ಕೆ ಗಂಭೀರ ಗಾಯಗಳಾಗಿದ್ದು, ಕಡಬ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆ ಗಾಗಿ ಮಂಗಳೂರಿಗೆ ರವಾನಿಸಲಾಗಿದೆ. ಕಡಬ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆಸಿದ್ದು, ಆರೋಪಿ ಕೇರಳ ಮೂಲದವನಾಗಿದ್ದು, ಆರೋಪಿಯನ್ನು ಬಂಧಿಸಲಾಗಿದೆ ಎನ್ನುವ ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿ