‘ಉಭಯ ಸದನ’ಗಳಲ್ಲಿ ‘ಮೇಕೆದಾಟು ಯೋಜನೆ’ ಕುರಿತ ನಿರ್ಣಯಕ್ಕೆ ಧ್ವನಿಮತದ ಅಂಗೀಕಾರ 

ಬೆಂಗಳೂರು:

ತಮಿಳುನಾಡು ಸರ್ಕಾರ  ವಿರೋಧಿಸಿದ ವಿಧಾನಸಭೆಯಲ್ಲಿ ಮಂಡಿಸಿದ್ದ ನಿರ್ಣಯಕ್ಕೆ ಪ್ರತಿಯಾಗಿ, ರಾಜ್ಯ ಸರ್ಕಾರದಿಂದ   ನಿನ್ನೆ ಮೇಕೆದಾಟು ಯೋಜನೆಗೆ  ಆಗ್ರಹಿಸಿ, ಖಂಡನಾ ನಿರ್ಣಯವನ್ನು ಮಂಡಿಸಲಾಗಿತ್ತು.

ಈ ನಿರ್ಣಯಕ್ಕೆ ಎಲ್ಲಾ ಪಕ್ಷಗಳಿಂದ ಸರ್ವಾನುಮತದಿಂದ ಅಂಗೀಕಾರ ದೊರೆತಿತ್ತು. ಈ ಬಳಿಕ ಇಂದು ಪರಿಷತ್ ನಲ್ಲಿಯೂ ಮಂಡನೆಯಾದಂತ ನಿರ್ಣಯಕ್ಕೆ ಸರ್ವಾನುಮತದ ಅಂಗೀಕಾರ ದೊರೆತಿದೆ.

ತಮಿಳುನಾಡು ವಿರುದ್ಧದ ಖಂಡನಾ ನಿರ್ಣಯಕ್ಕೆ, ನಿನ್ನೆ ವಿಧಾನಸಭೆಯಲ್ಲಿ ರಾಜ್ಯ ಸರ್ಕಾರದಿಂದ ನಿರ್ಣಯ ಮಂಡಿಸಲಾಗಿತ್ತು. ಕೆಲ ಸಣ್ಣ ತಿದ್ದುಪಡಿಯ ನಂತ್ರ, ಸರ್ವಾನುಮತದಿಂದ ಅಂಗೀಕಾರ ಕೂಡ ದೊರೆತಿತ್ತು.

ಸ್ವಗ್ರಾಮದಲ್ಲಿ ಸಿದ್ದರಾಮಯ್ಯ ‘ವೀರ ‘ಕುಣಿತ ..

ನಿರ್ಣಯದ ಬಗ್ಗೆ ಪ್ರತಿಪಕ್ಷಗಳು ಕೇಳಿದ್ದಂತ ಪ್ರಶ್ನೆಗೆ ಉತ್ತರಿಸಿದ್ದಂತ ಸಿಎಂ ಬಸವರಾಜ ಬೊಮ್ಮಾಯಿಯವರು, ಕರ್ನಾಟಕ ರಾಜ್ಯವು ಯೋಜಿಸಿರುವ ಮೇಕೆದಾಟು ಕುಡಿಯುವ ನೀರು ಮತ್ತು ಸಮತೋಲನ ಜಲಾಶಯ ಯೋಜನೆಯನ್ನು ವಿರೋಧಿಸಿ, ದಿನಾಂಶ 21 03, 2022 ರಂದು ತಮಿಳುನಾಡು ವಿಧಾನ ಸಭೆಯು ಸಭ್ಯವಲ್ಲದ ಭಾಷೆಯಲ್ಲಿ ಅಂಗೀಕರಿಸಿದ ಒಕ್ಕೂಟ ವಿರೋಧಿ ಮತ್ತು ಸಮರ್ಥನೀಯವಲ್ಲದ ನಿರ್ಣಯವನ್ನು ಮತ್ತು ತಮಿಳುನಾಡು ರಾಜ್ಯವು ತನ್ನ ಪ್ರಾದೇಶಿಕ ವ್ಯಾಪ್ತಿಯಲ್ಲಿ ಏಕಪಕ್ಷೀಯವಾಗಿ ಯೋಜಿಸಿರುವ ಕಾನೂನುಬಾಹಿರ ಯೋಜನೆಗಳನ್ನು ಸಹ ಈ ಸದನವು ಗಣನೆಗೆ ತೆಗೆದುಕೊಂಡಿರುತ್ತದೆ.

ಗೌರವಾನ್ವಿತ ಸರ್ವೋಚ್ಚ ನ್ಯಾಯಾಲಯವು ಕಾವೇರಿ ಜಲ ವಿವಾದ ನ್ಯಾಯಾಧಿಕರಣದ ತೀರ್ಪನ್ನು ಮಾರ್ಪಡಿಸಿ ಸಾಮಾನ್ಯ ಜಲ ವರ್ಷದಲ್ಲಿ ಬಿಳಿಗುಂಡ್ಲುವಿನಲ್ಲಿ 177.25 30 ನೀರಿನ ಪ್ರಮಾಣವನ್ನು ಖಚಿತಪಡಿಸುವಂತ ನಿಗದಿಪಡಿಸಿದೆ.

ವೇಗ ಪಡೆದ ಸೇತುವೆ ಕಾಮಗಾರಿ

ಮಾನ್ಯ ಸರ್ವೋಚ್ಚ ನ್ಯಾಯಾಲಯವು ಹಂಚಿಕೆ ಮಾಡಿರುವಂತೆ ಬೆಂಗಳೂರು ಮೆಟ್ರೋಪಾಲಿಟನ್ ನಗರದ ಕುಡಿಯುವ ನೀರಿನ ಅಗತ್ಯತೆಗೆ 24 ಟಿಎಂಸಿ  ನೀರನ್ನು ಸುಸ್ಥಿರಗೊಳಿಸಲು ಹಾಗೂ ತತ್ಪರಿಮಾಣವಾಗಿ ಜಲವಿದ್ಯುತ್ ಉತ್ಪಾದನೆಗೆ ಅಂತರ್-ರಾಜ್ಯ ನದಿ ಕಾವೇರಿಗೆ ಅಡ್ಡಲಾಗಿ ಮೇಕೆದಾಟು ಕುಡಿಯುವ ನೀರು ಮತ್ತು ಸಮತೋಲನ ಜಲಾಶಯ ಯೋಜನೆಯನ್ನು ಯೋಜಿಸಲಾಗಿದೆ. ಸದರಿ ಯಾವುದೇ ಭಾದಕ ಅಥವಾ ಹಾನಿಯಾಗುವುದಿಲ್ಲ. ಯೋಜನೆಯಿಂದ ತಮಿಳುನಾಡು ರಾಜ್ಯಕ್ಕೆ ಯಾವುದೇ ಭಾಧಕ ಅಥವಾ ಹಾನಿಯಾಗುವುದಿಲ್ಲ.

ಮೇಕೆದಾಟು ಕುಡಿಯುವ ನೀರು ಮತ್ತು ಸಮತೋಲನ ಜಲಾಶಯ ಯೋಜನೆಯನ್ನು ನಿರ್ಮಿಸಲು ಕರ್ನಾಟಕ ರಾಜ್ಯವು ತನ್ನ ಸಾಂವಿಧಾನಿಕ ಅಧಿಕಾರ ವ್ಯಾಪ್ತಿಯನ್ನು ಹೊಂದಿದೆ. ರಾಷ್ಟ್ರೀಯ ಜಲನೀತಿಯೂ ಸಹ ಕುಡಿಯುವ ನೀರಿಗೆ ಪ್ರಥಮ ಆದ್ಯತೆಯನ್ನು ನೀಡುತ್ತದೆ. ಈ ಕುಡಿಯುವ ನೀರಿನ ಯೋಜನೆಯಿಂದ ನ್ಯಾಯಾಧಿಕರಣದ ಆದೇಶವನ್ನು ಯಾವುದೇ ರೀತಿಯಲ್ಲಿ ಉಲ್ಲಂಘಿಸುವುದಿಲ್ಲ ಎಂದಿದ್ದರು.

ಬಾಡಿಗೆ ಮನೆಯಲ್ಲಿ ʻವೇಶ್ಯಾವಾಟಿಕೆʼ ನಡೆಸುತ್ತಿರುವುದು ಮಾಲೀಕನಿಗೆ ಅರಿವಿಲ್ಲದಿದ್ದರೆ ಆತ ಅಪರಾಧಿಯಲ್ಲ: ಹೈಕೋರ್ಟ್ ಮಹತ್ವದ ಆದೇಶ

ಈ ಬಳಿಕ, ಇಂದು ಕಾನೂನು ಸಚಿವ ಜೆಸಿ ಮಾಧುಸ್ವಾಮಿಯವರು, ವಿಧಾನ ಪರಿಷತ್ತಿನಲ್ಲಿಯೂ ಮೇಕೆದಾಟು ಯೋಜನೆಯ ಖಂಡನಾ ನಿರ್ಣಯವನ್ನು ಮಂಡಿಸಿದರು. ಈ ನಿರ್ಣಯಕ್ಕೆ ಎಲ್ಲಾ ಪಕ್ಷಗಳಿಂದ ಅಂಗೀಕಾರದ ಮುದ್ರೆಯನ್ನು ಒತ್ತಲಾಗಿದೆ. ಈ ಮೂಲಕ ಉಭಯ ಸದನಗಳಲ್ಲಿಯೂ ಮೇಕೆದಾಟು ಯೋಜನೆಯ ಖಂಡನಾ ನಿರ್ಣಯ ಅಂಗೀಕಾರ ಪಡೆದಿದೆ.

      ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap