ಕೈಗಾರಿಕೆಗಳ ಸ್ಥಾಪನೆಗಾಗಿ ರಾಜ್ಯಾದ್ಯಂತ 50 ಸಾವಿರ ಎಕೆರೆ ಭೂ ಸ್ವಾಧೀನ : ಸಚಿವ ನಿರಾಣಿ

ಬೆಂಗಳೂರು:

* ಉದ್ಯಮಿಗಳಿಗೆ ತತ್‍ಕ್ಷಣವೇ ಭೂ ಮಂಜೂರು ಹಾಗೂ ವಿಶ್ವ ದರ್ಜೆಯ ಮೂಲಭೂತ ಸೌಕರ್ಯ
* ಜಾಗತಿಕ ಹೂಡಿಕೆದಾರರ ಸಮಾವೇಶದಿಂದ ಹೆಚ್ಚಿನ ಉದ್ಯೋಗ ಸೃಷ್ಟಿ
* ಜಿಲ್ಲಾ ಮಟ್ಟದಲ್ಲಿ ಒಂದು ಜಿಲ್ಲೆಗೆ ಒಂದು ಉತ್ಪನ್ನ ನೀತಿ ಜಾರಿ
* ಕೈಗಾರಿಕೆಗಳಿಗೆ ಹಿಂದೆಂದಿಗಿಂತಲೂ ಸರ್ಕಾರದಿಂದ ಹೆಚ್ಚಿನ ಪ್ರೋತ್ಸಾಹ

ಬೆಂಗಳೂರು,ಮೇ7- ರಾಜ್ಯದಲ್ಲಿ ಕೈಗಾರಿಕೆಗಳನ್ನು ಸ್ಥಾಪನೆ ಮಾಡಲು ಮುಂದೆ ಬರುವ ಉದ್ಯಮಿಗಳಿಗೆ ತತ್‍ಕ್ಷಣವೇ ಭೂ ಮಂಜೂರು ಮಾಡಲು ಅನುಕೂಲವಾಗುವಂತೆ ರಾಜ್ಯಾದ್ಯಂತ 50 ಸಾವಿರ ಎಕರೆ ಜಮೀನನ್ನು ಭೂ ಸ್ವಾಧೀನಪಡಿಸಿಕೊಳ್ಳಲಾಗಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ಆರ್.ನಿರಾಣಿ ಹೇಳಿದ್ದಾರೆ.ಶನಿವಾರ ನಗರದ ಖಾಸಗಿ ಹೋಟೆಲ್‍ನಲ್ಲಿ ನಡೆದ ಭಾರತೀಯ ಉತ್ಪಾದನಾ ಪ್ರದರ್ಶನದ ಕರ್ಟನ್ ರೈಸರ್ ಉದ್ಘಾಟಿಸಿ ಅವರು ಮಾತನಾಡಿದರು.

ಹೇಳಿಕೆಗೆ ತಕ್ಕಂತೆ ದಾಖಲೆ, ಪುರಾವೆಗಳನ್ನು ಒದಗಿಸುವುದು ಕರ್ತವ್ಯ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಇದೇ ವರ್ಷದ ನವೆಂಬರ್ 2ರಿಂದ 4ರವರೆಗೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನಡೆಯಲಿರುವ 2022ರ ಜಾಗತಿಕ ಹೂಡಿಕೆದಾರರ ಸಮಾವೇಶ ನಡೆಯಲಿದೆ. ದೇಶ-ವಿದೇಶಗಳಿಂದ ಉದ್ಯಮಿಗಳು ಆಗಮಿಸಲಿದ್ದುಘಿ, ಇದಕ್ಕಾಗಿಯೇ ರಾಜ್ಯಾದ್ಯಂತ ನಾವು ನಮ್ಮ ಇಲಾಖೆಯಿಂದ 50 ಸಾವಿರ ಎಕರೆ ಜಮೀನನ್ನು ಭೂ ಸ್ವಾಧೀನ ಪಡಿಸಿಕೊಂಡಿದ್ದೇವೆ ಎಂದು ತಿಳಿಸಿದರು.

ರಾಜ್ಯದಲ್ಲಿ ಬಂಡವಾಳ ಹೂಡಿಕೆ ಮಾಡುವ ಉದ್ದಯಮಿಗಳಿಗೆ ತತಕ್ಷಣವೇ ಭೂಮಿ, ನೀರು, ರಸ್ತೆ, ಸೇರಿದಂತೆ ವಿಶ್ವ ದರ್ಜೆಯ ಮೂಲಭೂತ ಸೌಕರ್ಯಗಳನ್ನು ಒದಗಿಸಿಕೊಡಲಾಗುವುದು. ಕೈಗಾರಿಕೆಗಳು ಹೆಚ್ಚು ಹೆಚ್ಚು ಸ್ಥಾಪನೆಯಾದರೆ ಉದ್ಯೋಗಗಳು ಸೃಷ್ಟಿಯಾಗಲಿವೆ. ಇದರಿಂದ ಸ್ಥಳೀಯರಿಗೆ ಉದ್ಯೋಗ ಸಿಗುವುದರ ಜೊತೆಗೆ ನಿರುದ್ಯೋಗ ನಿವಾರಣೆಯಾಗಲಿದೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದರು.

ಬೆಲೆ ಏರಿಕೆಯಿಂದ ತತ್ತರಿಸಿರುವ ಗ್ರಾಹಕರಿಗೆ ಬಿಗ್ ಶಾಕ್ : 100 ರೂ. ಗಡಿ ದಾಟಿದ ಕೆಜಿ ಟೊಮೆಟೊ ಬೆಲೆ!

ಕೇಂದ್ರ ಸರ್ಕಾರದ ಬಹುನಿರೀಕ್ಷಿತ ಆತ್ಮನಿರ್ಭರ ಭಾರತ ಯೋಜನೆಗೆ ಅನುಗುಣವಾಗಿ ರಾಜ್ಯದ 2 ಮತ್ತು 3ನೇ ಹಂತದ ನಗರಗಳಲ್ಲಿ ಕೈಗಾರಿಕೆಗಳ ಸ್ಥಾಪನೆಗೆ ಉತ್ತೇಜಿಸುವುದರ ಜೊತೆಗೆ ಶೀಘ್ರದಲ್ಲೇ ರಾಜ್ಯ ಸರ್ಕಾರವು ಒಂದು ಜಿಲ್ಲೆ ಒಂದು ಉತ್ಪನ್ನ ನೀತಿಯನ್ನು ಜಾರಿಗೆ ತರಲಿದೆ ಎಂದು ಹೇಳಿದರು.

ಒಂದು ಜಿಲ್ಲೆ ಒಂದು ಉತ್ಪಾದನೆ ನೀತಿಯಿಂದ ಪ್ರತಿ ಜಿಲ್ಲೆಗೆ ಒಂದು ಉತ್ಪನ್ನವನ್ನು ಗುರುತಿಸಲಾಗುತ್ತದೆ. ಈ ಉತ್ಪನ್ನಗಳೊಂದಿಗೆ ತೊಡಗಿಸಿಕೊಂಡಿರುವ ಉದ್ಯಮಿಗಳು ಯೋಜನಾ ವೆಚ್ಚದ 35 ಪ್ರತಿಶತದಷ್ಟು ಕ್ರೆಡಿಟ್-ಲಿಂಕ್ಡ್ ಕ್ಯಾಪಿಟಲ್ ಸಬ್ಸಿಡಿಯನ್ನು ಪ್ರತಿ ಯೂನಿಟ್‍ಗೆ ಗರಿಷ್ಠ 10 ಲಕ್ಷ ರೂಪಾಯಿ ಪಡೆಯಬಹುದು ಎಂದು ಸಲಹೆ ಮಾಡಿದರು.

ರಾಜ್ಯದಲ್ಲಿ ಕೋವಿಡ್​ ಹೆಚ್ಚಳ: ಸಕ್ರಿಯ ಪ್ರಕರಣಗಳಲ್ಲಿ ಕರ್ನಾಟಕಕ್ಕೆ ನಾಲ್ಕನೇ ಸ್ಥಾನ

ರಾಜ್ಯದಾದ್ಯಂತ ಸಮತೋಲಿತ ಕೈಗಾರಿಕೀಕರಣವನ್ನು ಉತ್ತೇಜಿಸಿಸಲು ನಾವು ತೆಗೆದುಕೊಂಡಿರುವ ಮತ್ತೊಂದು ಪ್ರಮುಖ ನಿರ್ಧಾರವೆಂದರೆ ಉತ್ಪನ್ನ ನಿರ್ದಿಷ್ಟ ಕೈಗಾರಿಕಾ ಕ್ಲಸ್ಟರ್. ಈ ಯೋಜನೆ ಮೂಲಕ ಹಲವು ಕೈಗಾರಿಕಾ ಸಮೂಹಗಳನ್ನು ಗುರುತಿಸಲಾಗಿದ್ದು, ಪ್ರತಿ ಕ್ಲಸ್ಟರ್‍ ಗೆ
ಆಯಾ ಉತ್ಪನ್ನ ವಲಯಕ್ಕೆ ನಿರ್ದಿಷ್ಟವಾದ ವಿಶೇಷ ಪ್ರೊತ್ಸಾಹ ಮತ್ತು ರಿಯಾಯಿತಿಗಳನ್ನು ಘೋಷಿಸಲಾಗಿದೆ ಎಂದು ತಿಳಿಸಿದರು.

ಕೊಪ್ಪಳದಲ್ಲಿ ಟಾಯ್‍ ಕ್ಲಸ್ಟರ್ ಈಗಾಗಲೇ ಕಾರ್ಯಾಚರಣೆ ಆರಂಭಿಸಿದ್ದು, ಉದ್ದಿಮೆ ಬೆಂಬಲಿತ ಸೇವೆಗಳನ್ನು ಕ್ಲಸ್ಟರ್ ಒಳಗೊಂಡಿದೆ. ಅಲ್ಲಿನ ಉದ್ಯೋಗಿಗಳಿಗೆ ಅನುಕೂಲವಾಗುವಂತೆ ಸಾಮಾಜಿಕ ಮೂಲಸೌಕರ್ಯ ಮತ್ತು ವಸತಿ ಸೌಕರ್ಯಗಳನ್ನು ಹೊಂದಿದೆ ಎಂದು ನಿರಾಣಿ ವಿವರಿಸಿದರು.

ಲಂಚ: ವಾಣಿಜ್ಯ ತೆರಿಗೆ ಇಲಾಖೆ ಎಸಿ ಬಂಧನ

3 ಬಿಲಿಯನ್ ಡಾಲರ್ ಮೊತ್ತದ ದೇಶದ ಮೊಟ್ಟ ಮೊದಲ ಸೆಮಿಕಂಡಕ್ಟರ್ ಪ್ಲಾಂಟ್ ನಿರ್ಮಾಣ ಸಂಬಂಧ ರಾಜ್ಯ ಸರ್ಕಾರ ಹಾಗೂ ಐಎಸ್‍ಎಂಸಿ ಅನಲಾಗ್ Á್ಯಬ್ ಪ್ರೈವೇಟ್‍ಲಿಮಿಟೆಡ್ ನಡುವೆ ಕಳೆದ ವಾರ ಒಪ್ಪಂದ ಏರ್ಪಟ್ಟಿದೆ. ಇದರಿಂದ ಒಟ್ಟು 1500 ಜನರಿಗೆ ಉದ್ಯೋಗ ಸಿಗಲಿದೆ. ಜೊತೆಗೆ ರಾಜ್ಯ ಉನ್ನತ ಮಟ್ಟದ ಒಪ್ಪಿಗೆ ನೀಡಿಕೆ ಸಮಿತಿಯ 58ನೇ ಸಭೆಯಲ್ಲಿ ಒಟ್ಟು 11,513 ಕೋಟಿ ರೂ.ಗಳ 10 ಯೋಜನೆಗಳಿಗೆ ಅನುಮೋದನೆ ನೀಡಲಾಗಿದ್ದು, ಇದರಿಂದ 46,984 ಉದ್ಯೋಗ ಸೃಷ್ಟಿಯಾಗುವ ನಿರೀಕ್ಷೆ ಇದೆ ಎಂದು ವಿವರಿಸಿದರು.

ತುಮಕೂರು ಮೆಷಿನ್ ಟೂಲ್ ಪಾರ್ಕ್ ಮತ್ತು ಜಪಾನೀಸ್ ಇಂಡಸ್ಟ್ರಿಯಲ್ ಟೌನ್‍ಶಿಪ್‍ನಲ್ಲಿ 2 ಲಕ್ಷಕ್ಕೂ ಹೆಚ್ಚು ಉದ್ಯೋಗಗಳನ್ನು ಸೃಷ್ಟಿಸುವ 6.5 ಬಿಲಿಯನ್ ಹೂಡಿಕೆ ಆಕರ್ಷಿಸುವ ಗುರಿ ಹೊಂದಿವೆ ಎಂದರು.ರಾಜ್ಯದಲ್ಲಿ ಬಂಡವಾಳ ಹೂಡಿಕೆಯನ್ನು ಉತ್ತೇಜಿಸಲು ಪಾರದರ್ಶಕ ಮತ್ತು ಸುಸ್ಥಿರ ನೀತಿ ನಿಯಮಗಳ ಜಾರಿ ಮೂಲಕ ಮೂಲಕ ಕರ್ನಾಟಕ ಸರ್ಕಾರವು ಆರ್ಥಿಕ ಕ್ಷೇತ್ರಗಳಲ್ಲಿ ಸದಾ ಒಂದು ಹೆಜ್ಜೆ ಮುಂದಿದೆ.

ವಾಯುಭಾರ ಕುಸಿತ ಚಂಡಮಾರುತವಾಗಿ ಬದಲಾಗುವ ಸಾಧ್ಯತೆ: ರಾಜ್ಯದ ಹಲವೆಡೆ ಯೆಲ್ಲೋ ಅಲರ್ಟ್

ನಾವು ವಿದೇಶಿ ನೇರ ಹೂಡಿಕೆಯಲ್ಲಿ ಒಟ್ಟು ಶೇ.42 ರಷ್ಟು ಹೂಡಿಕೆಯನ್ನು ಆಕರ್ಷಿಸುವ ಮೂಲಕ ಕರ್ನಾಟಕ ದೇಶದಲ್ಲೇ ಮೊದಲ ಸ್ಥಾನದಲ್ಲಿದೆ. 2021-2022ರ ಹಣಕಾಸು ವರ್ಷದಲ್ಲಿ ಸತತ ಎರಡು ತ್ರೈಮಾಸಿಕಗಳಲ್ಲಿ, ಕರ್ನಾಟಕವು ದೇಶದಲ್ಲೇ ಅತಿ ಹೆಚ್ಚು ವಿದೇಶಿ ನೇರ ಬಂಡವಾಳ ಆಕರ್ಷಿಸಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಕೇಂದ್ರ ಸಣ್ಣ ಮತ್ತು ಮಧ್ಯಮ ಕೈಗಾರಿಕಾ ಸಚಿವ ನಾರಾಯ ರಾಣೆ, ಏಸ್ ಮ್ಯಾನ್ಯುಕ್ಚರಿಂಗ್ ಸಿಸ್ಟಮ್ಸ್ ಲಿಮಿಟೆಡ್‍ನ ವ್ಯವಸ್ಥಾಪಕ ನಿರ್ದೇಶಕರಾದ ಪಿ.ರಾಮದಾಸ್, ಸ್ಯಾಸ್‍ಮೋಸ್ ಹೆಇಟಿ ಟೆಕ್ನಾಲಜೀಸ್ ಲಿಮಿಟೆಡ್‍ನ ಸಂಸ್ಥಾಪಕ ಹೆಚ್‍ಜಿ.ಚಂದ್ರಶೇಖರ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

 ಹುಬ್ಬಳ್ಳಿ ಸರ್ಕಿಟ್ ಹೌಸ್ ನಲ್ಲಿ  ಮಾಧ್ಯಮಗಳ ಜೊತೆ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ..!

     ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link