ಬಾಲಿವುಡ್‌ ನಲ್ಲಿ ಧೂಳ್‌ ಎಬ್ಬಸಲು ರೆಡಿಯಾದ್ರು ಆಕ್ಷನ್‌ ಪ್ರಿನ್ಸ್….!

ಬಾಲಿವುಡ್​ :

   ಧ್ರುವ ಸರ್ಜಾ, ಕನ್ನಡ ಚಿತ್ರರಂಗದ ಬಹುಬೇಡಿಕೆ ನಟ. ತನ್ನದೇ ಫ್ಯಾನ್​ ಬೇಸ್​ ಹೊಂದಿರುವ ಆ್ಯಕ್ಷನ್​ ಪ್ರಿನ್ಸ್​​ ಮುಖ್ಯಭೂಮಿಕೆಯ ಮುಂದಿನ ಸಿನಿಮಾಗಳ ಮೇಲೆ ಸಾಕಷ್ಟು ನಿರೀಕ್ಷೆಗಳಿವೆ. ಪ್ರಸ್ತುತ ‘ಕೆ.ಡಿ’ ಮತ್ತು ‘ಮಾರ್ಟಿನ್’​​ ಸಲುವಾಗಿ ಸುದ್ದಿಯಲ್ಲಿದ್ದಾರೆ.

   ಇದೀಗ ಅಭಿಮಾನಿಗಳಿಗೆ ಮತ್ತೊಂದು ಗುಡ್​ ನ್ಯೂಸ್ ಸಿಕ್ಕಿದೆ. ಸ್ಯಾಂಡಲ್​ವುಡ್​ನಲ್ಲಿ ಬೇಡಿಕೆ ಹೊಂದಿರುವ ಧ್ರುವ ಬಾಲಿವುಡ್ ಪ್ರವೇಶಿಸೋ ಬಗ್ಗೆ ಚಿತ್ರರಂಗದಲ್ಲಿ ಚರ್ಚೆ ನಡೆಯುತ್ತಿದೆ. ವರದಿಗಳ ಪ್ರಕಾರ, ಬಾಲಿವುಡ್​ ಸೂಪರ್ ಸ್ಟಾರ್ ಹೃತಿಕ್ ರೋಷನ್ ಮುಖ್ಯಭೂಮಿಕೆಯ ‘ವಾರ್ 2’ ಚಿತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. 

    ಬಾಲಿವುಡ್​ನ ಮುಂದಿನ ಆ್ಯಕ್ಷನ್ ಥ್ರಿಲ್ಲರ್ ವಾರ್ 2ನಲ್ಲಿ ಧ್ರುವ ಸರ್ಜಾ ಅವರಿಗೆ ಪಾತ್ರವನ್ನು ಆಫರ್ ಮಾಡಲಾಗಿದೆ ಎಂದು ಸಾಮಾಜಿಕ ಮಾಧ್ಯಮದಲ್ಲಿ ಸುದ್ದಿಗಳು ಹರಿದಾಡುತ್ತಿವೆ. ನಿರ್ದೇಶಕ ಅಯಾನ್ ಮುಖರ್ಜಿ 2019ರ ‘ವಾರ್’ ಸಿನಿಮಾದ ಸೀಕ್ವೆಲ್​ನಲ್ಲಿ ಬ್ಯುಸಿಯಾಗಿದ್ದಾರೆ.

    ಚಿತ್ರದಲ್ಲಿ ಹೃತಿಕ್ ರೋಷನ್, ಜಾನ್ ಅಬ್ರಹಾಂ, ಜೂನಿಯರ್ ಎನ್​​​ಟಿಆರ್, ಕಿಯಾರಾ ಅಡ್ವಾಣಿ ಮತ್ತು ಶಬಿ ಅಹ್ಲುವಾಲಿಯಾದಂತಹ ಖ್ಯಾತನಾಮರು ಕಾಣಿಸಿಕೊಳ್ಳಲಿದ್ದಾರೆ. ಇದೇ ಚಿತ್ರದಲ್ಲಿ ಧ್ರುವ ಸರ್ಜಾ ಹೃತಿಕ್ ರೋಷನ್ ಅವರ ಸಹೋದರನ ಪಾತ್ರವನ್ನು ನಿರ್ವಹಿಸೋ ಸಾಧ್ಯತೆ ಇದೆ. ಆದರೆ, ಈ ಬಗ್ಗೆ ಯಾವುದೇ ಅಧಿಕೃತ ಘೋಷಣೆ ಹೊರಬಿದ್ದಿಲ್ಲ. ಅಧಿಕೃತ ಮಾಹಿತಿ ಕೊಡುವಂತೆ ಆ್ಯಕ್ಷನ್​ ಪ್ರಿನ್ಸ್ ಅಭಿಮಾನಿಗಳು ಒತ್ತಾಯಿಸುತ್ತಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿ

Recent Articles

spot_img

Related Stories

Share via
Copy link
Powered by Social Snap