ತೆಲಂಗಾಣ :
ಪ್ಯಾನ್ ಇಂಡಿಯಾ ಸ್ಟಾರ್ ಪ್ರಭಾಸ್ ಸದ್ಯ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಇತ್ತೀಚೆಗೆ ಪ್ರಭಾಸ್ ಅವರ ಒಂದು ಆಧಾರ್ ಕಾರ್ಡ್ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಪ್ಯಾನ್ ಇಂಡಿಯಾ ಸ್ಟಾರ್ ಪ್ರಭಾಸ್ ಅವರಿಗೆ ಯಾವುದೇ ಹೊಸ ಪರಿಚಯಗಳ ಅಗತ್ಯವಿಲ್ಲ.
ಅದರಲ್ಲಿ ಉಪ್ಪಲಪಾಟಿ ವೆಂಕಟ ಸೂರ್ಯನಾರಾಯಣ ಪ್ರಭಾಸ್ ಎಂದು ಹೆಸರಿಡಲಾಗಿದೆ. ಹುಟ್ಟಿದ ದಿನಾಂಕ 23/10/1979 ಎಂದು ಇದೆ. ಅಭಿಮಾನಿಗಳು ಪ್ರಭಾಸ್ ಅವರ ಆಧಾರ್ ಕಾರ್ಡ್ ಅನ್ನು ಸಿಕ್ಕಾಪಟ್ಟೆ ವೈರಲ್ ಮಾಡುತ್ತಿದ್ದಾರೆ.
‘ಬಾಹುಬಲಿ’ ಮೂಲಕ ಪ್ಯಾನ್-ಇಂಡಿಯಾ ಮಟ್ಟದಲ್ಲಿ ಜನಪ್ರಿಯತೆ ಗಳಿಸಿರುವ ಪ್ರಭಾಸ್ ಇತ್ತೀಚೆಗೆ ಆದಿಪುರುಷ ಚಿತ್ರದಲ್ಲಿ ಕಾಣಿಸಿಕೊಂಡಿದ್ದರು. ಈ ಚಿತ್ರ ನಿರೀಕ್ಷಿತ ಮಟ್ಟದಲ್ಲಿ ಪ್ರಭಾವ ಬೀರಲು ಸಾಧ್ಯವಾಗಲಿಲ್ಲ. ಇದೀಗ ಪ್ರಭಾಸ್ ಮುಂಬರುವ ಸಿನಿಮಾ ಸಲಾರ್ ಮೇಲೆ ಜನರ ನಿರೀಕ್ಷೆ ಹೆಚ್ಚಿದೆ. ಪ್ರಭಾಸ್ ಅಭಿನಯದ ‘ಸಲಾರ್’ ಸಿನಿಮಾವನ್ನು ಸೆಪ್ಟೆಂಬರ್ ನಿಂದ ನವೆಂಬರ್ ಗೆ ಮುಂದೂಡಲಾಗಿದೆ.
ಅಶ್ವಿನ್ ನಿರ್ದೇಶನದ ‘ಕಲ್ಕಿ 2898 ಎಡಿ’ಯಂತಹ ಬಿಗ್ ಬಜೆಟ್ ಚಿತ್ರಗಳಲ್ಲಿ ನಟಿಸುತ್ತಿದ್ದಾರೆ. 500 ಕೋಟಿ ಬಜೆಟ್‌ನಲ್ಲಿ ಈ ಸಿನಿಮಾ ತಯಾರಾಗುತ್ತಿದೆ. ಅಮಿತಾಭ್ ಬಚ್ಚನ್, ಕಮಲ್ ಹಾಸನ್ ಮುಂತಾದ ನಟರು ಈ ಚಿತ್ರದಲ್ಲಿ ನಟಿಸಲಿದ್ದಾರೆ. ಹೀಗಾಗಿ ಈ ಸಿನಿಮಾ ಮೇಲೆ ಭಾರೀ ನಿರೀಕ್ಷೆಗಳಿವೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ