ಬೆಂಗಳೂರು:
ಇನ್ನುಮುಂದೆ ಕಾಲೇಜುಗಳಿಗೆ ಚೆಕ್ಕರ್ ಹಾಕಿ ವಿದ್ಯಾರ್ಥಿಗಳು ಆಧಾರ್ ಕಾರ್ಡ್ ಮಾಡಿಸಿಕೊಳ್ಳಲು ಹೋಗಬೇಕಿಲ್ಲ. ಕಾಲೇಜಿನಲ್ಲಿಯೇ ಆಧಾರ್ ಅಪ್‌ಡೇಟ್ ಹಾಗೂ ನೋಂದಣಿ ಕ್ಯಾಂಪ್ ಗಳನ್ನು ನಡೆಸುವಂತೆ ಕಾಲೇಜು ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ.
ಹೊಸ ಮೊಬೈಲ್ ಸಂಪರ್ಕ, ಬ್ಯಾಂಕ್ ಖಾತೆ, ಚಾಲನಾ ಪರವಾನಗಿ, ವಿದ್ಯಾರ್ಥಿ ವೇತನ, ಫೆಲೋಶಿಪ್, ಬೋರ್ಡ್ ಅಥವಾ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಬರೆಯಲು, ಪಾಸ್‌ಪೋರ್ಟ್ ಸೇರಿದಂತೆ ಅನೇಕ ಕಾರ್ಯಗಳಿಗೆ ಎಲ್ಲರಿಗೂ ಆಧಾರ್ ಕಾರ್ಡ್ ಅನಿವಾರ್ಯವಾಗಿದೆ.
ರಾಜ್ಯದ ಎಲ್ಲಾ ಸರ್ಕಾರಿ ಪ್ರಥಮ ದರ್ಜೆ ಹಾಗೂ ಖಾಸಗಿ ಅನುದಾನಿತ ಪದವಿ ಕಾಲೇಜುಗಳಲ್ಲಿ ಆಧಾರ್ ನೋಂದಣಿ ಕ್ಯಾಂಪ್ ಗಳನ್ನು ಆಯೋಜಿಸಲಾಗುತ್ತದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ