ಮಂಗಳೂರು:

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಬಾಂಬರ್ ಆದಿತ್ಯರಾವ್ಗೆ ದಕ್ಷಿಣ ಕನ್ನಡ ಜಿಲ್ಲಾ ನಾಲ್ಕನೇ ಹೆಚ್ಚುವರಿ ನ್ಯಾಯಾಲಯವು 20 ವರ್ಷ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.ಇದರ ಜೊತೆ 10 ಸಾವಿರ ರೂ.
ದಂಡನೂ ನ್ಯಾಯಾಲಯ ವಿಧಿಸಿದೆ.ಸ್ಫೋಟಕ ತಡೆ ಕಾಯ್ದೆಯಡಿ 5 ವರ್ಷ ಹಾಗೂ ಯುಎಪಿಎ ಕಾಯ್ದೆಯಡಿ 20 ವರ್ಷ ಶಿಕ್ಷೆ ವಿಧಿಸಿ ನ್ಯಾಯಾಲಯ ತೀರ್ಪು ನೀಡಿದೆ.2020ರ ಜನವರಿ 20ರಂದು ಬೆಳಗ್ಗೆ ರಿಕ್ಷಾವೊಂದರಲ್ಲಿ ಚಾಲಕ ಸೇರಿದಂತೆ ಇಬ್ಬರು ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದರು.
ಆ ಪೈಕಿ ಆದಿತ್ಯ ರಾವ್ ಆಟೋ ರಿಕ್ಷಾದಿಂದ ಇಳಿದು ಸ್ಫೋಟಕ ತುಂಬಿದ ಬ್ಯಾಗನ್ನು ನಿರ್ಗಮನ ದ್ವಾರದ ಸಮೀಪದ ಟಿಕೆಟ್ ಕೌಂಟರ್ ಬಳಿಯಿರುವ ಆಸನದ ಮೇಲಿರಿಸಿ ಅಲ್ಲಿಂದ ಕಾಲ್ಕಿತ್ತಿರುವುದು ಸಿಸಿ ಕ್ಯಾಮರಾದಲ್ಲಿ ದಾಖಲಾಗಿತ್ತು.
ರಾಜ್ಯದ ಪದವಿ, ನರ್ಸಿಂಗ್, ಪಿಜಿ ವಿದ್ಯಾರ್ಥಿಗಳಿಗೂ ಟ್ವಿನ್ನಿಂಗ್ ಯೋಜನೆ ವಿಸ್ತರಣೆ
ಆ ಬಳಿಕ ಆರೋಪಿ ಆದಿತ್ಯ ರಾವ್ ಬೆಂಗಳೂರಿಗೆ ತೆರಳಿ ರಾಜ್ಯ ಪೊಲೀಸ್ ಮಹಾ ನಿರ್ದೇಶಕರ ಕಚೇರಿಯಲ್ಲಿ ಶರಣಾಗಿದ್ದ. ಆತನನ್ನು ಹಲಸೂರು ಗೇಟ್ ಪೊಲೀಸ್ ಠಾಣೆಗೆ ಕರೆದೊಯ್ದು ವಿಚಾರಣೆ ನಡೆಸಲಾಗಿತ್ತು.
ನಂತರ ಮಂಗಳೂರು ಪೊಲೀಸ್ ತಂಡ ಬೆಂಗಳೂರಿಗೆ ತೆರಳಿ ಆತನನ್ನು ಬಂಧಿಸಿ ಮಂಗಳೂರಿಗೆ ಕರೆ ತಂದಿತ್ತು. ವಿಮಾನ ನಿಲ್ದಾಣದಲ್ಲಿ ಆತ ಇರಿಸಿ ಹೋಗಿದ್ದ ಬ್ಯಾಗಿನಲ್ಲಿ ಕಂಡು ಬಂದ ಶಂಕಾಸ್ಪದ ವಸ್ತುಗಳು ಸ್ಪೋಟಕಗಳಾಗಿತ್ತು ಎಂಬುದು ಎಫ್ ಎಸ್ಎಲ್ ಪರೀಕ್ಷೆಯಿಂದ ಸಾಬೀತಾಗಿತ್ತು.
ಆದಿತ್ಯ ರಾವ್ ವಿರುದ್ಧ 700 ಪುಟಗಳ ದೋಷಾರೋಪಣಾ ಪಟ್ಟಿಯನ್ನು ತನಿಖಾಧಿಕಾರಿಗಳು ಮಂಗಳೂರಿನ ಜೆಎಂಎಫ್ಸಿ ನ್ಯಾಯಾಲಯಕ್ಕೆ ಸಲ್ಲಿಸಿದ್ದರು.
ಆದಿತ್ಯ ರಾವ್ ವಿರುದ್ಧ ಕಾನೂನು ಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ) ಅನ್ವಯ ಪ್ರಕರಣ ದಾಖಲಿಸಿ ಆರೋಪ ಪಟ್ಟಿಯನ್ನು ಸಲ್ಲಿಸಲಾಗಿತ್ತು.
ಇದೀಗ ನ್ಯಾಯಾಲಯ ವಿಚಾರಣೆ ನಡೆಸಿ ಆತನನ್ನು ತಪ್ಪಿತಸ್ಥ ಎಂದು ತೀರ್ಪು ನೀಡಿ 20 ವರ್ಷ ಜೈಲು ಹಾಗೂ 10 ಸಾವಿರ ರೂ. ದಂಡ ವಿಧಿಸಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ







