IPL 2022  ಆರ್‌ಸಿಬಿ, ಸಿಎಸ್‌ಕೆ ಗೆಲುವಿನ ನಂತರ ಅಂಕಪಟ್ಟಿ ಹೇಗಿದೆ!

IPL2022 :

ಭಾನುವಾರ ಐಪಿಎಲ್ ಅಂಗಳದಲ್ಲಿ ಎರಡು ಮುಖಾಮುಖಿ ನಡೆಸಿದೆ. ಮೊದಲ ಮುಖಾಮುಖಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಸನ್‌ರೈಸರ್ಸ್ ಹೈದರಾಬಾದ್ ತಂಡಗಳು ಮುಖಾಮುಖಿಯಾಗಿದ್ದರೆ ಎರಡನೇ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಮುಖಾಮುಖಿಯಾಗಿದೆ.

ಈ ಪಂದ್ಯಗಳಲ್ಲಿ ಮೊದಲ ಮುಖಾಮುಖಿಯಲ್ಲಿ ಆರ್‌ಸಿಬಿ ತಂಡ ಅಮೋಘ ಗೆಲುವು ಸಾಧಿಸಿದ್ದರೆ ಎರಡನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ ಅದ್ಭುತ ಗೆಲುವು ದಾಖಲಿಸಿದೆ.

ಈ ಎರಡು ಪಂದ್ಯಗಳ ಫಲಿತಾಂಶ ಆರ್‌ಸಿಬಿ ಅಭಿಮಾನಿಗಳಿಗೆ ಹೆಚ್ಚು ಖುಷಿ ನೀಡುವಂತಿದೆ. ಪ್ಲೇಆಫ್ ಹಂತಕ್ಕೇರಲು ಆರ್‌ಸಿಬಿಗೆ ಪೂರಕವಾಗುವಂತಾ ಫಲಿತಾಂಶಗಳು ಎರಡೂ ಪಂದ್ಯದಲ್ಲಿಯೂ ಬಂದಿದೆ. ಅಲ್ಲದೆ ನೆಟ್ ರನ್‌ರೇಟ್‌ಅನ್ನು ಕೂಡಆರ್‌ಸಿಬಿಗೆ ಈ ಪಂದ್ಯದಲ್ಲಿ ಉತ್ತಮ ಪಡಿಸಿಕೊಳ್ಳಲು ಯಶಸ್ವಿಯಾಗಿದೆ.

ಹಿಂದಿಯಲ್ಲಿ 400 ಕೋಟಿ ರೂ. ಬಾಚಿದ ‘ಕೆಜಿಎಫ್​ 2’; ವಿಶ್ವಾದ್ಯಂತ ಯಶ್​ ಚಿತ್ರ ಗಳಿಸಿದ್ದು 1100 ಪ್ಲಸ್​ ಕೋಟಿ

ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧಧ ಪಂದ್ಯದಲ್ಲಿ ಆರ್‌ಸಿಬಿ ಮೊದಲಿಗೆ ಬ್ಯಾಟಿಂಗ್ ಮಾಡಿ ಫಾಫ್ ಡು ಪ್ಲೆಸಿಸ್, ರಜತ್ ಪಾಟೀದಾರ್, ಗ್ಲೆನ್ ಮ್ಯಾಕ್ಸ್‌ವೆಲ್ ಹಾಗೂ ದಿನೇಶ್ ಕಾರ್ತಿಕ್ ಅವರ ಅಮೋಘ ಬ್ಯಾಟಿಂಗ್‌ನಿಂದಾಗಿ ಭರ್ಜರಿ ಪ್ರದರ್ಶನ ನೀಡಿತ್ತು. ನಿಗದಿತ 20 ಓವರ್‌ಗಳಲ್ಲಿ ಆರ್‌ಸಿಬಿ 3 ವಿಕೆಟ್ ಕಳೆದುಕೊಂಡು 192 ರನ್‌ಗಳಿಸಿತ್ತು.

ಇದನ್ನು ಬೆನ್ನಟ್ಟಿದ ಸನ್‌ರೈಸರ್ಸ್ ಹೈದರಾಬಾದ್ ತಂಡ ಸಂಪೂರ್ಣವಾಗಿ ಮುಗ್ಗರಿಸಿತು. ರಾಹುಲ್ ತ್ರಿಪಾಠಿ ಹೊರತುಪಡಿಸಿದರೆ ಉಳಿದ ಯಾವ ಆಟಗಾರ ಕೂಡ ಆರ್‌ಸಿಬಿ ವಿರುದ್ಧ ಈ ಪಂದ್ಯದಲ್ಲಿ ಉತ್ತಮ ಪ್ರದರ್ಶನ ನೀಡಲು ವಿಫಲವಾದರು. ಇದರ ಪರಿಣಾಮವಾಗಿ ಎಸ್‌ಆರ್‌ಹೆಚ್ ತಂಡ 125 ರನ್‌ಗಳಿಗೆ ಆಲೌಟ್ ಆಯಿತು. ಈ ಮೂಲಕ ಆರ್‌ಸಿಬಿ ತಂಡ ನಿಗದಿತ 20 ಓವರ್‌ಗಳಲ್ಲಿ 67 ರನ್‌ಗಳ ಗೆಲುವು ದಾಖಸಿದೆ.

ಸಿಐಡಿ ಕುದುರೆ ಕಣ್ಣಿನಂತೆ ಹಗರಣವನ್ನು ನೋಡುತ್ತಿದೆ : ಪ್ರಿಯಾಂಕ್ ಖರ್ಗೆ

ಪಾಯಿಂಟ್ಸ್ ಟೇಬಲ್

ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಗೆದ್ದಿರುವ ಆರ್‌ಸಿಬಿ ಆಡಿರುವ 12 ಪಂದ್ಯಗಳ ಪೈಕಿ 7ನೇ ಗೆಲುವು ಸಂಪಾದಿಸಿದೆ. ಈ ಮೂಲಕ ಅಂಕಪಟ್ಟಿಯಲ್ಲಿ 14 ಅಂಕಗಳನ್ನು ಸಂಪಾದಿಸಿದೆ. ಭೀರೀ ಕುಸಿದಿದ್ದ ರನ್‌ರೇಟ್ ಪ್ರಮಾಣವನ್ನು ಕೂಡ ಒಂದು ಹಂತಕ್ಕೆ ಉತ್ತಮ ಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದು -0.115 ನೆಟ್ ರನ್‌ರೇಟ್ ಹೊಂದಿದೆ. ಈ ಮೂಲಕ ಅಂಕಪಟ್ಟಿಯಲ್ಲಿ 4ನೇ ಸ್ಥಾನದಲ್ಲಿ ಭದ್ರವಾಗಿದೆ. ಆರ್‌ಸಿಬಿ ವಿರುದ್ಧ ಸೋಲು ಅನುಭವಿಸಿರುವ ಎಸ್‌ಆರ್‌ಹೆಚ್ ತಂಡ ಅಂಕಪಟ್ಟಿಯಲ್ಲಿ 6ನೇ ಸ್ಥಾನಕ್ಕೆ ಕುಸಿದಿದೆ.

ಮತ್ತೊಂದೆಡೆ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಡೆಲ್ಲಿ ಕ್ಯಾಫಿಟಲ್ಸ್ ತಂಡದ ಫಲಿತಾಂಶ ಕೂಡ ಆರ್‌ಸಿಬಿ ತಂಡಕ್ಕೆ ಪೂರಕವಾಗಿಯೇ ಬಂದಿದೆ. ಈಗಾಗಲೇ ಪ್ಲೇಆಫ್ ಹಂತಕ್ಕೆರುವ ಸ್ಪರ್ಧೆಯಿಂದ ಬಹುತೇಕ ಹೊರಬಿದ್ದಿರುವ ಸಿಎಸ್‌ಕೆ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೂ ಪ್ಲೇ ಆಫ್ ಹಾದಿ ದುರ್ಗಮವಾಗುವಂತೆ ಮಾಡಿದೆ. ಆಡಿರುವ 11 ಪಂದ್ಯಗಳ ಪೈಕಿ ಡೆಲ್ಲಿ ಕ್ಯಾಪಿಟಲ್ಸ 5 ಗೆಲುವು ಹಾಗೂ 6 ಸೋಲು ಅನುಭವಿಸಿದ್ದು 10 ಅಂಕಗಳನ್ನು ಖಾತೆಯಲ್ಲಿ ಹೊಂದಿದೆ. ಇತ್ತ ಚೆನ್ನೈ ಸೂಪರ್ ಕಿಂಗ್ಸ್ ತಂಡ 4ನೇ ಗೆಲುವು ಸಂಪಾದಿಸಿದ್ದು 8 ಅಂಕಗಳನ್ನು ಹೊಂದಿದೆ. ಈ ಮೂಲಕ ಅಂಕಪಟ್ಟಿಯಲ್ಲಿ 8ನೆ ಸ್ಥಾನ ಪಡೆದುಕೊಂಡಿದೆ.

ಬೆಲೆ ಏರಿಕೆಯಿಂದ ತತ್ತರಿಸಿರುವ ಗ್ರಾಹಕರಿಗೆ ಬಿಗ್ ಶಾಕ್ : 100 ರೂ. ಗಡಿ ದಾಟಿದ ಕೆಜಿ ಟೊಮೆಟೊ ಬೆಲೆ!

ಆರೆಂಜ್ ಕ್ಯಾಪ್

ಟೂರ್ನಿಯಲ್ಲಿ ಅಮೋಘ ಫಾರ್ಮ್‌ನಲ್ಲಿರುವ ರಾಜಸ್ಥಾನ್ ರಾಯಲ್ಸ್ ತಂಡದ ಆರಂಭಿಕ ಆಟಗಾರ ಜೋಸ್ ಬಟ್ಲರ್ ಮೂರು ಶತಕದ ಮೂಲಕ ಅತಿ ಹೆಚ್ಚು ರನ್‌ಗಳಿಸಿದ ಆಟಗಾರರ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿ ಮುಂದುವರಿದಿದ್ದಾರೆ. 11 ಪಂದ್ಯಗಳಲ್ಲಿ ಬಟ್ಲರ್ 618 ರನ್‌ಗಳಿಸಿ ಅಗ್ರಸ್ಥಾನದಲ್ಲಿದ್ದಾರೆ. ಇದು ಮೂರು ಶತಕ ಹಾಗೂ ಮೂರು ಅರ್ಧ ಶತಕಗಳನ್ನು ಒಳಗೊಂಡಿದೆ.

ಎರಡನೇ ಸ್ಥಾನದಲ್ಲಿ ಲಕ್ನೋ ಸೂಪರ್ ಕೈಂಟ್ಸ್ ನಾಯಕ ಕೆ.ಎಲ್ ರಾಹುಲ್ ಇದ್ದು 451 ರನ್‌ಗಳಿಸಿದ್ದಾರೆ. ನಂತರದಲ್ಲಿ ಸ್ಥಾನದಲ್ಲಿ ಆರ್‌ಸಿಬಿ ನಾಯಕ ಫಾಫ್ ಡು ಪ್ಲೆಸಿಸ್ ಇದ್ದು 389 ರನ್‌ಗಳನ್ನು ಗಳಿಸಿದ್ದಾರೆ. ಎಸ್‌ಆರ್‌ಹೆಚ್ ಪಂದ್ಯದಲ್ಲಿ ಫಾಫ್ ಗಳಿಸಿದ 73 ರನ್‌ಗಳಿಸಿದ್ದು ಆರೆಂಜ್ ಕ್ಯಾಪ್‌ ಪಟ್ಟಿಯಲ್ಲಿಯೂ ಉತ್ತಮ ಸ್ಥಾನ ಪಡೆಯುವಂತೆ ಮಾಡಿದೆ. ನಂತರ ಶಿಖರ್ ಧವನ್ 381 ರನ್‌ ಹಾಗೂ, ಡೇವಿಡ್ ವಾರ್ನರ್ 375 ರನ್‌ಗಳ ಮೂಲಕ ನಾಲ್ಕು ಹಾಗೂ ಐದನೇ ಸ್ಥಾನದಲ್ಲಿದ್ದಾರೆ.

ರಾಜ್ಯದಲ್ಲಿ ಕೋವಿಡ್​ ಹೆಚ್ಚಳ: ಸಕ್ರಿಯ ಪ್ರಕರಣಗಳಲ್ಲಿ ಕರ್ನಾಟಕಕ್ಕೆ ನಾಲ್ಕನೇ ಸ್ಥಾನ

ಪರ್ಪಲ್ ಕ್ಯಾಪ್‌

ಪರ್ಪಲ್‌ಕ್ಯಾಪ್ ಪಟ್ಟಿಯಲ್ಲಿ ರಾಜಸ್ಥಾನ್ ರಾಯಲ್ಸ್ ತಂಡದ ಯುಜುವೇಂದ್ರ ಚಾಹಲ್‌ಗೆ ಆರ್‌ಸಿಬಿ ತಂಡದ ವನಿಂದು ಹಸರಂಗಾ ಅವರಿಂದ ತೀವ್ರ ಪೈಪೋಟಿ ಎದುರಾಗಿದೆ. ಎಸ್‌ಆರ್‌ಹೆಚ್ ವಿರುದ್ಧದ ಪಂದ್ಯದಲ್ಲಿ ಐದು ವಿಕೆಟ್‌ಗಳ ಗೊಂಚಲು ಕಬಳಿಸುವ ಮೂಲಕ ಹಸರಂಗಾ 21 ವಿಕೆಟ್‌ಗಳನ್ನು ಪಡೆದಿದ್ದು ಅಂಕಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೇರಿದ್ದಾರೆ. ಮೊದಲ ಸ್ಥಾನದಲ್ಲಿರುವ ಚಾಹಲ್ ಖಾತೆಯಲ್ಲಿ 22 ವಿಕೆಟ್‌ಗಳಿವೆ. ಮೂರನೇ ಸ್ಥಾನದಲ್ಲಿ ಕಗಿಸೋ ರಬಾಡ, ನಾಲ್ಕನೇ ಸ್ಥಾನದಲ್ಲಿ ಕುಲ್‌ದೀಪ್ ಯಾದವ್ ಹಾಗೂ ನಂತರ ಟಿ ನಟರಾಜನ್ ಇದ್ದಾರೆ

      ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link