ಕೊಡಗು:
ಇಲ್ಲಿನ ಶ್ರೀಮಂಗಲ ವನ್ಯಜೀವಿ ಅಭಯಾರಣ್ಯ ವ್ಯಾಪ್ತಿಯಲ್ಲಿ ಸೋಮವಾರ ಕಾಡಾನೆ ದಾಳಿಗೆ 50 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
‘ಮಡಿಕೇರಿ ವನ್ಯಜೀವಿ ವಿಭಾಗದ ಶ್ರೀಮಂಗಲ ವನ್ಯಜೀವಿ ಅಭಯಾರಣ್ಯ ವ್ಯಾಪ್ತಿಯಲ್ಲಿ ಆನೆ ದಾಳಿಯಿಂದ ವ್ಯಕ್ತಿಯೊಬ್ಬರು ಸಾವಿಗೀಡಾಗಿರುವ ಬಗ್ಗೆ ನಮಗೆ ಮಾಹಿತಿ ಬಂದಿದೆ. ನಮ್ಮ ಅಧಿಕಾರಿಗಳು ಘಟನೆ ಬಗ್ಗೆ ಪರಿಶೀಲನೆ ನಡೆಸುತ್ತಿದ್ದಾರೆ’ ಎಂದು ಹಿರಿಯ ಅರಣ್ಯಾಧಿಕಾರಿ ತಿಳಿಸಿದ್ದಾರೆ.
ಘಟನೆಯ ನಂತರ ಸ್ಥಳೀಯ ನಿವಾಸಿಗಳಲ್ಲಿ ಭಯ ಆವರಿಸಿದ್ದು, ಆನೆಗಳ ಹಾವಳಿ ಹೆಚ್ಚುತ್ತಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿ
![](https://prajapragathi.com/wp-content/uploads/2024/01/dead-body.gif)