ಶಿರಸಿ:
ಉತ್ತರ ಕನ್ನಡ ಮಾಜಿ ಸಂಸದ ಅನಂತಕುಮಾರ ಹೆಗಡೆ ಅವರ ಮನೆಯಲ್ಲಿ ಅಗ್ನಿ ಅವಘಡ ಸಂಭವಿಸಿರುವ ಘಟನೆ ಮಂಗಳವಾರ ನಡೆದಿದೆ.
ಶಿರಸಿಯ ಕೆ.ಎಚ್.ಬಿ. ಕಾಲೋನಿಯಲ್ಲಿರುವ ಅನಂತಕುಮಾರ್ ಹೆಗಡೆಯವರ ಮನೆಯೊಳಗಿನ ಜಿಮ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ತಗುಲಿರಬಹುದು ಎಂದು ಅಂದಾಜಿಸಲಾಗಿದೆ.
ಬೆಂಕಿಯಿಂದ ಜಿಮ್‌ನಲ್ಲಿ ಇದ್ದ ಉಪಕರಣಗಳು ಹಲವು ಸುಟ್ಟು ಹಾನಿಯಾಗಿದೆ. ಅಗ್ನಿಶಾಮಕ ದಳದ ಸಿಬ್ಬಂದಿ ಸಕಾಲಕ್ಕೆ ಬಂದು ಹೆಚ್ಚಿನ ಅನಾಹುತ ತಡೆದಿದ್ದಾರೆ. ಮಾಜಿ ಸಂಸದ ಮತ್ತು ಅವರ ಕುಟುಂಬದವರು ಮನೆಯಲ್ಲಿ ಇಲ್ಲದ ಸಂದರ್ಭದಲ್ಲಿ ಘಟನೆ ನಡೆದಿದ್ದು, ಮನೆಯ ಕಾವಲುಗಾರರಿಂದ ಘಟನೆ ಬೆಳಕಿಗೆ ಬಂದಿದೆ.