ಶಿವಮೊಗ್ಗ:
ರಾಜ್ಯದ ಸರ್ಕಾರಿ ಶಾಲಾ ಮಕ್ಕಳಿಗೆ ಸಿಹಿಸುದ್ದಿ ಎನ್ನುವಂತೆ ನವೆಂಬರ್.23 ರಿಂದ ಮೊಟ್ಟೆ ಜೊತೆಗೆ ವಿಶೇಷ ಪೌಷ್ಠಿಕಾಂಶವುಳ್ಳ ಆಹಾರ ನೀಡೋದಕ್ಕೆ ತೀರ್ಮಾನಿಸಲಾಗಿದೆ ಅಂತ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ರಾಜ್ಯದ ಸರ್ಕಾರಿ ಮಕ್ಕಳಿಗೆ ಉತ್ತಮ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಆಹಾರವನ್ನು ಶಾಲೆಗಳಲ್ಲಿ ನೀಡಬೇಕು ಎಂಬುದು ಸಿಎಂ ಸಿದ್ಧರಾಮಯ್ಯ ಅವರ ಸೂಚನೆಯಾಗಿದೆ.
ರಾಜ್ಯದಲ್ಲಿ ಬರಗಾಲ ತಾಂಡವವಾಡುತ್ತಿದೆ. ಈ ಸಂದರ್ಭದಲ್ಲಿ ಜಿಲ್ಲೆಯಲ್ಲಿ ನೀರಿನ ಹಾಹಾಕಾರ ಉಂಟಾಗುವ ಸಾಧ್ಯತೆ ಇದ್ದು, ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕೈಗೊಳ್ಳಲಾಗುತ್ತಿದೆ ಅಂತ ಹೇಳಿದರು.
ಅಂದಹಾಗೇ ರಾಜ್ಯದ ಸರ್ಕಾರಿ ಶಾಲಾ ಮಕ್ಕಳಿಗೆ ಈಗಾಗಲೇ ಮೊಚ್ಚೆ ನೀಡಲಾಗುತ್ತಿತ್ತು. ವಾರಕ್ಕೆ ಒಂದು ಕೊಡುತ್ತಿದ್ದಂತ ಮೊಟ್ಟೆಯನ್ನು ಎರಡು ಮಾಡಲಾಗಿದೆ. ಮೊಟ್ಟೆ ತಿನ್ನದ ಮಕ್ಕಳಿಗೆ ಶೇಂಕಾ ಚಿಕ್ಕಿ ಅಥವಾ ಬಾಳೆಹಣ್ಣು ನೀಡಲಾಗುತ್ತಿದೆ. ಇದರ ಜೊತೆಗೆ ನವೆಂಬರ್.23ರಿಂದ ವಿಶೇಷ ಪೌಷ್ಠಿಕಾಂಶವುಳ್ಳ ಆಹಾರವನ್ನು ಕೂಡ ಸರ್ಕಾರಿ ಶಾಲಾ ಮಕ್ಕಳಿಗೆ ನೀಡಲಿದೆ. ಈ ಮೂಲಕ ಸರ್ಕಾರಿ ಶಾಲಾ ಮಕ್ಕಳಿಗೆ ಸಿಹಿಸುದ್ದಿಯನ್ನು ನೀಡಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ