ಅಹ್ಮದಾಬಾದ್:
ನ. 19 ನಡೆಯುವ ವಿಶ್ವಕಪ್ ಕ್ರಿಕೆಟ್ ಕೂಟದ ಫೈನಲ್ ಪಂದ್ಯದ ಮೊದಲು ಭಾರತೀಯ ವಾಯುಪಡೆಯ ಸೂರ್ಯ ಕಿರಣ್ ಏರೋಬ್ಯಾಟಿಕ್ ತಂಡದಿಂದ ಏರ್‌ಶೋ ಪ್ರದರ್ಶನ ನಡೆ ಯಲಿದೆ ಎಂದು ಅಧಿಕೃತವಾಗಿ ಪ್ರಕಟಿಸಲಾಗಿದೆ.
ಮೊಟೆರಾದ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆ ಯಲಿರುವ ಅಂತಿಮ ಪಂದ್ಯ ಪ್ರಾರಂಭವಾಗುವ ಮೊದಲು ಸೂರ್ಯ ಕಿರಣ್ ಏರೋಬ್ಯಾಟಿಕ್ ತಂಡವು ಹತ್ತು ನಿಮಿಷಗಳ ಕಾಲ ಜನರನ್ನು ಆಕರ್ಷಿಸಲಿದೆ ಎಂದು ಗುಜರಾತ್‌ನ ಡಿಫೆನ್ಸ್ ಪಿಆರ್‌ಒ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಅಹ್ಮದಾಬಾದ್‌ನಲ್ಲಿ ನಡೆದ ವಿಶ್ವಕಪ್ ಉದ್ಘಾಟನಾ ಪಂದ್ಯವನ್ನು ಕೇಂದ್ರ ಗೃಹಸಚಿವ ಅಮಿತ್ ಶಾ ವೀಕ್ಷಿಸಿದ್ದರು. ಅದೇ ಮೈದಾನದಲ್ಲಿ ನಡೆಯುವ ಅಂತಿಮ ಪಂದ್ಯವನ್ನು ಪ್ರಧಾನಿ ನರೇಂದ್ರ ಮೋದಿ ವೀಕ್ಷಿಸುವ ಎಲ್ಲ ಸಾಧ್ಯತೆಗಳಿವೆ. ಅಷ್ಟು ಮಾತ್ರವಲ್ಲ 1983ರ ಏಕದಿನ ವಿಶ್ವಕಪ್ ಗೆದ್ದ ನಾಯಕ ಕಪಿಲ್ ದೇವ್, 2011ರ ವಿಶ್ವಕಪ್ ವಿಜೇತ ನಾಯಕ ಧೋನಿ ಅವರೂ ಪಾಲ್ಗೊಳ್ಳುವ ನಿರೀಕ್ಷೆಯಿದೆ. ಈಗಾಗಲೇ ಕೂಟವನ್ನು ಸಚಿನ್ ತೆಂಡುಲ್ಕರ್, ವಿಶ್ವವಿಖ್ಯಾತ ಫುಟ್‌ಬಾಲರ್ ಡೇವಿಡ್ ಬೆಕ್‌ಹ್ಯಾಮ್, ಖ್ಯಾತ ಸಿನೆಮಾ ತಾರೆಯರು ವೀಕ್ಷಿಸಿದ್ದಾರೆ.