ಮುಂಬೈ:
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಭಾಗವಹಿಸಿದ್ದ ‘ಮಹಾರಾಷ್ಟ್ರ ಭೂಷಣ’ ಪ್ರಶಸ್ತಿ ಪ್ರದಾನ ಸಮಾರಂಭದ ವೇಳೆ ಬಿಸಿಲಿನ ತಾಪದಿಂದ 14 ಮಂದಿ ಸಾವನ್ನಪ್ಪಿದ ಬಗ್ಗೆ ನ್ಯಾಯಾಂಗ ತನಿಖೆ ನಡೆಸಬೇಕು ಎಂದು ಎನ್‌ಸಿಪಿ ನಾಯಕ ಅಜಿತ್ ಪವಾರ್ ಗುರುವಾರ ಒತ್ತಾಯಿಸಿದ್ದಾರೆ.
ಈ ಮಧ್ಯೆ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು 14 ಜನರ ಸಾವಿನ ತನಿಖೆಗೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ(ಕಂದಾಯ) ನಿತಿನ್ ಕೀರ್ ಅವರ ಏಕಸದಸ್ಯ ಸಮಿತಿ ರಚಿಸಿದ್ದು, ಇದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿರುವ ಮಹಾರಾಷ್ಟ್ರ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಅಜಿತ್ ಪವಾರ್ ಅವರು, ನ್ಯಾಯಾಂಗ ತನಿಖೆಗೆ ಆಗ್ರಹಿಸಿದ್ದಾರೆ.