ಹೈದರಾಬಾದ್:
ಹಂಗಾಮಿ ಸ್ಪೀಕರ್ ಅಕ್ಬರುದ್ದೀನ್ ಓವೈಸಿ ಅವರ ಅಧ್ಯಕ್ಷತೆಯಲ್ಲಿ ಪ್ರಮಾಣ ವಚನ ಸ್ವೀಕರಿಸಲು ಬಿಜೆಪಿ ಶಾಸಕರು ನಿರಾಕರಿಸಿದ್ದು, ಸದನದಿಂದ ಹೊರನಡೆದಿದ್ದಾರೆ. ನಾವು ತೆಲಂಗಾಣದಲ್ಲಿ 8 ಸ್ಥಾನಗಳನ್ನು ಗೆದ್ದಿದ್ದೇವೆ.
ಹಿರಿಯ ನಾಯಕರನ್ನು ಹಂಗಾಮಿ ಸ್ಪೀಕರ್ ಆಗಿ ನೇಮಿಸುವುದು ಸಂಪ್ರದಾಯ. ಆದರೆ, ಎಐಎಂಐಎಂ ಜೊತೆಗಿನ ಹೊಂದಾಣಿಕೆಯಿಂದಾಗಿ ಕಾಂಗ್ರೆಸ್ ಅಕ್ಬರುದ್ದೀನ್ ಓವೈಸಿ ಅವರನ್ನು ಹಂಗಾಮಿ ಸ್ಪೀಕರ್ ಆಗಿ ನೇಮಿಸಿದೆ. ಇದಕ್ಕೆ ನಾವು ಆಕ್ಷೇಪಿಸುತ್ತೇವೆ. ಈ ಕುರಿತು ರಾಜ್ಯಪಾಲರಿಗೆ ಮಾಹಿತಿ ನೀಡುತ್ತೇವೆ’ ಎಂದು ತೆಲಂಗಾಣ ಬಿಜೆಪಿ ಅಧ್ಯಕ್ಷ ಹಾಗೂ ಕೇಂದ್ರ ಸಚಿವ ಜಿ. ಕಿಶನ್ ರೆಡ್ಡಿ ಹೇಳಿದ್ದಾರೆ.
ಕಳೆದ ತಿಂಗಳ ವಿಧಾನಸಭಾ ಚುನಾವಣೆಯಲ್ಲಿ ಗೋಶಾಮಹಲ್‌ನಿಂದ ಗೆದ್ದಿದ್ದ ಬಿಜೆಪಿ ಶಾಸಕ ಟಿ ರಾಜಾ ಸಿಂಗ್ ಅವರು ಎಐಎಂಐಎಂ ಮುಂದೆ “ಜೀವಂತ ಇರುವವರೆಗೂ” ಪ್ರಮಾಣವಚನ ಸ್ವೀಕರಿಸುವುದಿಲ್ಲ ಎಂದು ವೀಡಿಯೊ ಸಂದೇಶದಲ್ಲಿ ಹೇಳಿದ್ದಾರೆ. ಪೂರ್ಣಾವಧಿ ಸ್ಪೀಕರ್ ನೇಮಕವಾದ ಬಳಿಕವಷ್ಟೇ ಪ್ರಮಾಣ ವಚನ ಸ್ವೀಕರಿಸುವುದಾಗಿ ಹೇಳಿದರು.