ಪಕ್ಷೇತರನಾಗಿ ಕಣಕ್ಕಿಳಿಯಲಿರುವ ಅಖಂಡ ಶ್ರೀನಿವಾಸಮೂರ್ತಿ…

ಬೆಂಗಳೂರು

     ಪುಲಿಕೇಶಿನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಹಾಲಿ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಭಾನುವಾರ ರಾತ್ರಿ ಉತ್ತರ ಕನ್ನಡ ಜಿಲ್ಲೆ ಶಿರಸಿಯಲ್ಲಿ ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರನ್ನು ಭೇಟಿ ಮಾಡಿ ರಾಜೀನಾಮೆ ಪತ್ರ ಸಲ್ಲಿಸಿದರು.

      ಕಾಂಗ್ರೆಸ್‌ ಟಿಕೆಟ್ ಘೋಷಣೆಯಾಗದೇ ಇದ್ದರಿಂದ ಬೇಸರಗೊಂಡು ಶ್ರೀನಿವಾಸಮೂರ್ತಿ ಅಸಮಧಾನಗೊಂಡು ರಾಜೀನಾಮೆಯನ್ನು ನೀಡಿದ್ದಾರೆ. ಕಾಂಗ್ರೆಸ್ ಈಗಾಗಲೇ ಮೂರು ಪಟ್ಟಿಯನ್ನು ಬಿಡುಗಡೆ ಮಾಡಿದೆ. ಮೂರನೇ ಪಟ್ಟಿಯಲ್ಲಿ ಶ್ರೀನಿವಾಸಮೂರ್ತಿ ಹೆಸರನ್ನು ಬರಬಹುದು ಎನ್ನುವ ನಿರೀಕ್ಷೆಯಿತ್ತು. ಪುಲಿಕೇಶಿನಗರ ಕ್ಷೇತ್ರಕ್ಕೆ ಟಿಕೆಟ್ ಗೋಷಣೆ ಆಗಲೇ ಇಲ್ಲ. ಶ್ರೀನಿವಾಸಮೂರ್ತಿ ಬೆಂಬಲಿಗರೂ ದೇವಸ್ಥಾನಗಳಿಗೆ ತೆರಳಿ ವಿಶೇಷ ಪೂಜೆ ಕೂಡ ಮಾಡಿಸಿದ್ದರು. ಆದರೂ ಕಿಕೆಟ್ ಘೋಷಣೆಯಾಗದೇ ಪಕ್ಷ ತೊತೆಯಲು ಶ್ರೀನಿವಾಸಮೂರ್ತಿ ನಿರ್ಧಾರಿಸಿದ್ದಾರೆ.

      ಜೊತೆಗೆ ಪಕ್ಷದಲ್ಲಿ ಪುಲಿಕೇಶಿನಗರಕ್ಕೆ ಬೇರೆಯವರಿಗೆ ಟಿಕೆಟ್ ನೀಡುವ ಮಾತುಕತೆಗಳು ನಡೆಯುತ್ತಿರುವುದರಿಂದಲೂ ಅವರು ಬೇಸರಗೊಂಡಿದ್ದಾರೆ ಎನ್ನಲಾಗುತ್ತಿದೆ. ಸಿದ್ದರಾಮಯ್ಯ ಶ್ರೀನಿವಾಸ ಮೂರ್ತಿ ಪರ ಇದ್ದರೆ ಡಿಕೆ ಶಿವಕುಮಾರ್ ಬೇರೆ ಅಭ್ಯರ್ಥಿಗಳಿಗೆ ಟಿಕೆಟ್ ನೀಡಲು ಇಚ್ಚಿಸಿದ್ದಾರೆ ಎಂದು ತಿಳಿದು ಬಂದಿದೆ. ಇದೂ ಕೂಡ ಶ್ರೀನಿವಾಸಮೂರ್ತಿ ಪಕ್ಷ ಬಿಡುವುದಕ್ಕೆ ಕಾರಣ ಎನ್ನಲಾಗುತ್ತಿದೆ.

      ಡಿಜೆ ಹಳ್ಳಿ ಹಾಗೂ ಕೆಜಿ ಹಳ್ಳಿ ಗಲಭೆ ಪ್ರಕರಣದಲ್ಲಿ ಶ್ರೀನಿವಾಸ ಮೂರ್ತಿ ಭಾಗಿಯಾಗಿದ್ದಾರೆ ಎನ್ನುವ ವಿಚಾರಗಳು ದಟ್ಟವಾಗಿವೆ. ಈ ಆರೋಪಗಳನ್ನು ಮಾಡಿದ ಅಲ್ಪಸಂಖ್ಯಾತ ಮುಖಂಡರು ಶ್ರೀನಿವಾಸಮೂರ್ತಿಗೆ ಕಾಂಗ್ರೆಸ್ ಟಿಕೆಟ್ ನೀಡದಂತೆ ಕೈ ನಾಯಕರಿಗೆ ಒತ್ತಾಯಿಸಿದ್ದಾರೆ ಎನ್ನಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಪುಲಿಕೇಶಿನಗರ ಗೊಂದಲದಗೂಡಾಗಿದೆ. ಈ ಎಲ್ಲಾ ಅಸಮಧಾನಗಳಿಮದಾಗಿ ಶ್ರೀನಿವಾಸಮೂರ್ತಿ ರಾಜೀನಾಮೆ ನೀಡಿದ್ದಾರೆ. ಮತ್ತೆ ಜೆಡಿಎಸ್‌ ಹೋಗುವ ಸಾಧ್ಯತೆಗಳೂ ದಟ್ಟವಾಗಿವೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap