ನವದೆಹಲಿ:
ಉತ್ತರ ಪ್ರದೇಶದ ಅಲಿಘಡ ಮುಸ್ಲಿಂ ವಿಶ್ವವಿದ್ಯಾನಿಲಯ ಅಲ್ಪಸಂಖ್ಯಾತ ಸ್ಥಾನಮಾನ ಪಡೆಯಲು ಅರ್ಹವಾಗಿದೆ ಎಂದು ಸುಪ್ರೀಂ ಕೋರ್ಟ್ ಇಂದು ಮಹತ್ವದ ತೀರ್ಪು ನೀಡಿದೆ. ಆ ಮೂಲಕ AMU ಕೇಂದ್ರೀಯ ವಿಶ್ವವಿದ್ಯಾನಿಲಯವಾಗಿರುವುದರಿಂದ ಅದನ್ನು ಅಲ್ಪಸಂಖ್ಯಾತ ಸಂಸ್ಥೆ ಎಂದು ಪರಿಗಣಿಸಲಾಗುವುದಿಲ್ಲ ಎಂದು 1967 ರಲ್ಲಿ ತಾನೇ ನೀಡಿದ್ದ ತೀರ್ಪನ್ನು ಅದು ತಳ್ಳಿಹಾಕಿತು.
ಅಲಿಘಡ ವಿಶ್ವ ವಿದ್ಯಾನಿಲಯಕ್ಕೆ ಅಲ್ಪ ಸಂಖ್ಯಾತ ಸ್ಥಾನಮಾನ ಕಲ್ಪಿಸುವ ವಿಚಾರಕ್ಕೆ ಸಂಬಂಧಿಸಿದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್‌ನ ಏಳು ನ್ಯಾಯಾಧೀಶರ ಪೀಠವು 4:3 ರ ಬಹುಮತದಿಂದ ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯ (AMU) ಭಾರತದ ಸಂವಿಧಾನದ 30 ನೇ ವಿಧಿಯ ಅಡಿಯಲ್ಲಿ ಅಲ್ಪಸಂಖ್ಯಾತ ಸ್ಥಾನಮಾನಕ್ಕೆ ಅರ್ಹವಾಗಿದೆ ಎಂದು ತೀರ್ಪು ನೀಡಿದೆ.
ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ಹಾಗೂ ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ, ಜೆಬಿ ಪರ್ದಿವಾಲಾ, ಮನೋಜ್ ಮಿಶ್ರಾ ಅವರು ಅಲ್ಪ ಸಂಖ್ಯಾತ ಸ್ಥಾನಮಾನ ಕಲ್ಪಿಸುವ ಪರ ತೀರ್ಪು ನೀಡಿದ್ದರು. ನ್ಯಾಯಮೂರ್ತಿಗಳಾದ ಸೂರ್ಯಕಾಂತ್, ದೀಪಂಕರ್ ದತ್ತಾ ಮತ್ತು ಸತೀಶ್ ಚಂದ್ರ ಶರ್ಮಾ ಅವರು ಪ್ರತ್ಯೇಕ ಭಿನ್ನಾಭಿಪ್ರಾಯ ತೀರ್ಪು ನೀಡಿದ್ದಾರೆ ಎಂದು ನ್ಯಾಯಮೂರ್ತಿ ಚಂದ್ರಚೂಡ್ ಹೇಳಿದರು.
1967 ರಲ್ಲಿ, ಎಸ್ ಅಜೀಜ್ ಬಾಷಾ ವಿರುದ್ಧ ಯೂನಿಯನ್ ಆಫ್ ಇಂಡಿಯಾ ಪ್ರಕರಣದಲ್ಲಿ, ಐವರು ನ್ಯಾಯಾಧೀಶರ ಸಂವಿಧಾನ ಪೀಠವು AMU ಅಲ್ಪಸಂಖ್ಯಾತ ಸಂಸ್ಥೆ ಅಲ್ಲ ಎಂದು ಹೇಳಿತು. AMU ಅನ್ನು ಮುಸ್ಲಿಂ ಸಮುದಾಯದಿಂದ ಸ್ಥಾಪಿಸಲಾಗಿಲ್ಲ ಅಥವಾ ನಿರ್ವಹಿಸಲಾಗಿಲ್ಲ. 1981 ರಲ್ಲಿ AMU ಕಾಯಿದೆಯ ತಿದ್ದುಪಡಿಯು ವಿಶ್ವವಿದ್ಯಾನಿಲಯವನ್ನು “ಭಾರತದ ಮುಸ್ಲಿಮರಿಂದ ಸ್ಥಾಪಿಸಲಾಗಿದೆ” ಎಂದು ಘೋಷಿಸಿತ್ತು. 2005ರಲ್ಲಿ, ವಿಶ್ವವಿದ್ಯಾನಿಲಯವು ಅಲ್ಪಸಂಖ್ಯಾತ ಸ್ಥಾನಮಾನವನ್ನು ಪಡೆದುಕೊಳ್ಳುತ್ತದೆ. ಮುಸ್ಲಿಂ ವಿದ್ಯಾರ್ಥಿಗಳಿಗೆ ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಲ್ಲಿ 50% ಸೀಟುಗಳನ್ನು ಕಾಯ್ದಿರಿಸಿತು.
ಅಲಹಾಬಾದ್ ಉಚ್ಚ ನ್ಯಾಯಾಲಯವು ಮೀಸಲಾತಿ ನೀತಿ ಮತ್ತು 1981 ರ ತಿದ್ದುಪಡಿಯನ್ನು ರದ್ದುಗೊಳಿಸಿ AMU ಅಲ್ಪಸಂಖ್ಯಾತ ಸಂಸ್ಥೆಯಲ್ಲ ಎಂದು ಹೇಳಿತ್ತು. ಈ ತೀರ್ಪನ್ನು ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಲಾಯಿತು. 2019 ರಲ್ಲಿ ಎಸ್. ಅಜೀಜ್ ಬಾಷಾ ವರ್ಸಸ್ ಕೇಂದ್ರ ಸರ್ಕಾರ ತೀರ್ಪು ಮರುಪರಿಶೀಲನೆಯ ಅಗತ್ಯವಿದೆಯೇ ಎಂದು ನಿರ್ಧರಿಸಲು ಪ್ರಕರಣವನ್ನು ಸಪ್ತ ಸದಸ್ಯ ಪೀಠಕ್ಕೆ ಪ್ರಕರಣವನ್ನು ಹಸ್ತಾಂತರಿಸಲಾಯಿತು.
ಅಲಿಘಡ ಮುಸ್ಲಿಮ್ ವಿಶ್ವವಿದ್ಯಾಲಯಕ್ಕೆ ಅಲ್ಪಸಂಖ್ಯಾತ ಸ್ಥಾನಮಾನ ನೀಡಬೇಕು ಅನ್ನೋ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರದ ವಿವರಣೆ ಪಡೆದಿತ್ತು. ಈ ವೇಳೆ ಸರ್ಕಾರದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಸುಪ್ರೀಂ ಕೋರ್ಟ್‌ಗೆ ಕೆಲ ದಾಖಲೆ ಸಲ್ಲಿಸಿದ್ದರು. ಸ್ವಾತಂತ್ರ್ಯ ಪೂರ್ವದಲ್ಲಿ ಆರಂಭಗೊಂಡ ಅಲಿಘಡ ಮುಸ್ಲಿಮ್ ಯೂನಿವರ್ಸಿಟಿ, ಅಲ್ಪಸಂಖ್ಯಾತರ ವಿಶ್ವವಿದ್ಯಾಲಯವಾಗಿ ನಡೆದುಕೊಂಡು ಬಂದಿಲ್ಲ.