ಎಲ್ಲರೂ ಕಾಲೇಜಿಗೆ ಜಾಬ್​ಗಾಗಿ ಬರುತ್ತಾರೆ, ನೀವು ಹಿಜಾಬ್​ಗಾಗಿ ಬರುತ್ತೀದ್ದೀರಾ?: ಸಂಸದ ಪ್ರತಾಪ್​ ಸಿಂಹ

ಮೈಸೂರು:ಎಲ್ಲರೂ ಕಾಲೇಜಿಗೆ ಜಾಬ್​ಗಾಗಿ ಬರುತ್ತಾರೆ, ನೀವು ಹಿಜಾಬ್​ಗಾಗಿ ಬರುತ್ತೀದ್ದೀರಾ?: ಸಂಸದ ಪ್ರತಾಪ್​ ಸಿಂಹ

         ಸಮವಸ್ತ್ರ ಎನ್ನುವುದು ಬರೀ ಬಣ್ಣದ ಉಡುಪಲ್ಲ, ಅದು ಎಲ್ಲ ಮಕ್ಕಳು ಸಮಾನರು ಎಂದು ಸಾರುವ ವಸ್ತ್ರ ಸಂಹಿತೆ ಎಂದು ಸಂಸದ ಪ್ರತಾಪ್​ ಸಿಂಹ ಅವರು ಹೇಳಿದರು.

ರಾಜ್ಯದಲ್ಲಿ ನಡೆಯುತ್ತಿರುವ ಹಿಜಾಬ್ ವಿವಾದ ವಿಚಾರವಾಗಿ ಇಂದು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು ಎಲ್ಲ ರೀತಿಯ ಒತ್ತಡ, ಆಕ್ರಮಣ, ಟೀಕಾಪ್ರಹಾರದ ನಡುವೆಯೂ ಸಮವಸ್ತ್ರ ಕಡ್ಡಾಯಕ್ಕೆ ಸರ್ಕಾರ ಬದ್ಧವಾಗಿರೋದು ಒಳ್ಳೆಯ ಸಂದೇಶ ಎಂದು ಹೇಳಿದರು.

          ಹಿಜಾಬ್​​ಗಾಗಿ ಇಷ್ಟು ಹಠ ಹಿಡಿದು ಯಾಕಾಗಿ ವಿದ್ಯಾರ್ಥಿಗಳು ಕೂತಿದ್ದಾರೆ? ಸಮವಸ್ತ್ರ ಎನ್ನುವುದು ಬರೀ ಬಣ್ಣದ ಉಡುಪಲ್ಲ, ಅದು ಎಲ್ಲ ಮಕ್ಕಳು ಸಮಾನರು ಎಂದು ಸಾರುವ ವಸ್ತ್ರ ಸಂಹಿತೆಯಾಗಿದೆ. ಎಲ್ಲರೂ ಕಾಲೇಜಿಗೆ ಜಾಬ್​ಗಾಗಿ ಬರುತ್ತಾರೆ. ನೀವು ಹಿಜಾಬ್​ಗಾಗಿ ಬರುತ್ತೀದ್ದೀರಾ? ಎಂದು ಪ್ರತಿಭಟನಾ ವಿದ್ಯಾರ್ಥಿಗಳನ್ನು ಪ್ರಶ್ನಿಸಿದರು.

ಹಿಜಾಬ್ ಹಾಕಿಕೊಂಡು, ಟೋಪಿ ಹಾಕಿಕೊಂಡು ನೀವು ಕಲಿಯಬೇಕು ಎಂದಾದರೆ, ಮದರಾಸಗೆ ಹೋಗಿ. ಮದರಸದಲ್ಲಿ ನಿಮ್ಮ ಪ್ರತ್ಯೇಕ ಭಾವನೆ ಕಾಪಾಡಿ ಕೊಳ್ಳಬಹುದು. ಸರ್ಕಾರಿ ಶಾಲೆಗಳಲ್ಲಿ ಈ ಪ್ರತ್ಯೇಕತೆ ಸಾಧ್ಯವಿಲ್ಲ. ಇದು ಬ್ರಿಟಿಷರ ಭಾರತವಲ್ಲ.

ಇದು ಭರತ ಖಂಡ. ಹಿಂದೂ ಧರ್ಮದ ಬುನಾದಿ ಮೇಲೆ ಇರುವ ದೇಶವಿದು. ಇಲ್ಲಿ ಗಣಪತಿ ಪೂಜೆ, ಶಾರದೆ ಪೂಜೆ, ಹೆಣ್ಣು ಮಕ್ಕಳ ಕುಂಕುಮ‌ ಸಂಸ್ಕೃತಿಯ ಭಾಗ. ಇದನ್ನು ಯಾರೂ ಪ್ರಶ್ನಿಸುವಂತಿಲ್ಲ ಎಂದರು.

ಇಸ್ಲಾಂ, ಕ್ರಿಶ್ಚಿಯನ್ ಮರುಭೂಮಿಯಲ್ಲಿ ಹುಟ್ಟಿ ನೆಲೆಗಾಗಿ ಹುಡುಕಿಕೊಂಡು ಇಲ್ಲಿಗೆ ಬಂದಿವೆ. ಇಲ್ಲಿಗೆ ಬಂದ ಮೇಲೆ ಹಿಂದು ಸಂಸ್ಕೃತಿಯನ್ನು ಒಪ್ಪಿಕೊಳ್ಳಬೇಕು. ಕ್ರಿಶ್ಚಿಯನ್, ಇಸ್ಲಾಂ ಧರ್ಮದ ಏರಿಕೆ ಇಲ್ಲಿ ನಡೆಯುವುದಿಲ್ಲ. ಈ ನೆಲದ ಸಂಸ್ಕೃತಿಯನ್ನು ಕ್ರಿಶ್ಚಿಯನ್, ಇಸ್ಲಾಂ ಧರ್ಮಗಳು ಒಪ್ಪಿಕೊಳ್ಳಬೇಕು ಎಂದು ಪ್ರತಾಪ್​ ಸಿಂಹ ಹೇಳಿದರು.

ಹಿಜಾಬ್​ ವಿವಾದ ಸಮರ್ಥಿಸಿಕೊಂಡ ಸಿದ್ದರಾಮಯ್ಯಗೆ ತಿರುಗೇಟು ನೀಡಿದ ಪ್ರತಾಪ್​ ಸಿಂಹ, ಸಿದ್ದ’ರಾಮ’ಯ್ಯ, ಸಿದ್ದ’ರಹೀಮ’ಯ್ಯ ಆಗ್ತಾರೆ. ಸಿದ್ದರಾಮಯ್ಯ ಅವರನ್ನು ಗಂಭೀರವಾಗಿ ಪರಿಗಣಿಸಬೇಡಿ.

ಗೋರಿಪಾಳ್ಯದ ಜಮೀರ್ ಅಹಮದ್ ಈಗ ಸಿದ್ದರಾಮಯ್ಯ ಅವರನ್ನು ಚಾಮರಾಜ ಪೇಟೆಗೆ ಕರೆಯುತ್ತಿದ್ದಾರೆ. ರಾಜಕೀಯಕ್ಕಾಗಿ ಸಿದ್ದರಾಮಯ್ಯ ತಮ್ಮ ಹೆಸರನ್ನೇ ಬದಲಿಸಿಕೊಳ್ಳುತ್ತಾರೆ. ಅವರ ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸಬೇಡಿ ಎಂದರು.

                ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link