ಬೆಂಗಳೂರು
ಬಿಎಸ್ಸಿ ನರ್ಸಿಂಗ್ ಕೋರ್ಸ್ ಸೀಟು ಹಂಚಿಕೆ ಕುರಿತಂತೆ ವಿಧಾನ ಪರಿಷತ್ ಸದಸ್ಯರಾದ ಎಸ್.ವಿ.ಸಂಕನೂರ್ ಅವರು ನಿಯಮ 330 ಅಡಿ ಪ್ರಸ್ತಾಪಿಸಿದ ಸೂಚನೆಗೆ ಉತ್ತರಿಸಿದ ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು, ಸರ್ಕಾರದ ಆದೇಶದಂತೆ ಬಿಎಸ್ಸಿ ನರ್ಸಿಂಗ್ ಸೀಟುಗಳನ್ನು ಕೆಇಎ -ಸಿಇಟಿ ಮೂಲಕವೇ ಹಂಚಿಕೆ ಮಾಡಲಾಗುತ್ತಿದೆ.
ಪ್ರಸ್ತುತ ವರ್ಷದಲ್ಲಿ ಒಟ್ಟು 33,000 ನರ್ಸಿಂಗ್ ಸೀಟುಗಳಿದ್ದು, ಪರೀಕ್ಷೆಗೆ ಹಾಜರಾದ ಅಭ್ಯರ್ಥಿಗಳ ಪೈಕಿ ಒಟ್ಟು 1,75,682 ವಿದ್ಯಾರ್ಥಿಗಳು ಅರ್ಹತೆ ಪಡೆದಿರುತ್ತಾರೆ ಎಂದರು