ತೆಲಂಗಾಣ :
ನಟ ಅಲ್ಲು ಅರ್ಜುನ್ ಅವರನ್ನು ಚೀಕಟಪಲ್ಲಿ ಪೊಲೀಸರು ಬಂಧಿಸಿದ್ದಾರೆ. ಕೆಲ ದಿನಗಳ ಹಿಂದೆ ‘ಪುಷ್ಪ 2’ ಸಿನಿಮಾ ಬಿಡುಗಡೆ ವೇಳೆ ಅಲ್ಲು ಅರ್ಜುನ್ ಸಂಧ್ಯಾ ಚಿತ್ರಮಂದಿರಕ್ಕೆ ಭೇಟಿ ನೀಡಿದ್ದರು. ಈ ವೇಳೆ ನಡೆದ ಕಾಲ್ತುಳಿತದಲ್ಲಿ ಒಬ್ಬ ಮಹಿಳೆ ನಿಧನ ಹೊಂದಿದ್ದರು. ಅವರ ಪುತ್ರ ತೀವ್ರವಾಗಿ ಗಾಯಗೊಂಡಿದ್ದರು. ಈ ಘಟನೆ ಕುರಿತಂತೆ ನಟ ಅಲ್ಲು ಅರ್ಜುನ್ ಹಾಗೂ ಇನ್ನೂ ಇತರರ ವಿರುದ್ಧ ದೂರು ದಾಖಲಾಗಿತ್ತು. ಇದೀಗ ನಟ ಅಲ್ಲು ಅರ್ಜುನ್ ಹಾಗೂ ಅವರ ಬಾಡಿಗಾರ್ಡ್ ಇನ್ನಿತರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಪ್ರಕರಣ ಕುರಿತು ಈ ಮೊದಲೇ ಹೈದರಾಬಾದ್, ಚೀಕಟಪಲ್ಲಿ ಪೊಲೀಸರು ನೊಟೀಸ್ ನೀಡಿದ್ದರು. ಆದರೆ ನೊಟೀಸ್ಗೆ ಅಲ್ಲು ಅರ್ಜುನ್ ಉತ್ತರ ನೀಡಿರಲಿಲ್ಲ ಎನ್ನಲಾಗಿದೆ. ಆದರೆ ಅಲ್ಲು ಅರ್ಜುನ್, ಪ್ರಕರಣವನ್ನು ರದ್ದು ಮಾಡುವಂತೆ ತೆಲಂಗಾಣ ಹೈಕೋರ್ಟ್ಗೆ ಮನವಿ ಸಲ್ಲಿಸಿದ್ದರು. ಆದರೆ ಅರ್ಜಿಯ ವಿಚಾರಣೆ ಇನ್ನೂ ನಡೆದಿಲ್ಲ.
ಈಗಾಗಲೇ ಇದೇ ಪ್ರಕರಣದಲ್ಲಿ ಸಂಧ್ಯಾ ಚಿತ್ರಮಂದಿರದ ಮಾಲೀಕ, ಚಿತ್ರಮಂದಿರದ ಮ್ಯಾನೇಜರ್ ಹಾಗೂ ಕಾಲ್ತುಳಿತ ನಡೆದ ದಿನ ಅಲ್ಲು ಅರ್ಜುನ್ ಜೊತೆಗೆ ಇದ್ದ ಕೆಲವು ಬೌನ್ಸರ್ಗಳನ್ನು ಸಹ ಈಗಾಗಲೇ ಬಂಧಿಸಲಾಗಿದೆ. ಅಲ್ಲು ಅರ್ಜುನ್ ವಿರುದ್ಧ 105, 118 (5) ಸೆಕ್ಷನ್ ಅಡಿಯಲ್ಲಿ ದೂರು ದಾಖಲಿಸಲಾಗಿದೆ.
ಅಲ್ಲು ಅರ್ಜುನ್ ಮನೆಗೆ ಹೋಗಿ, ಅವರ ಬೆಡ್ರೂಂ ಬಳಿಗೆ ಹೋಗಿ ಅಲ್ಲು ಅರ್ಜುನ್ ಅನ್ನು ಕರೆತರಲಾಗಿದೆ. ಅಲ್ಲು ಅರ್ಜುನ್ ಪೊಲೀಸ್ ಜೀಪು ಹತ್ತುವ ಮುಂಚೆ, ಈ ಬಗ್ಗೆ ಅಲ್ಲು ಅರ್ಜುನ್ ಪೊಲೀಸರು ತಮ್ಮನ್ನು ಬಂಧಿಸಿದ ವಿಧಾನದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಆ ನಂತರ ಅಲ್ಲು ಅರ್ಜುನ್ ಪೊಲೀಸ್ ಜೀಪು ಹತ್ತುವ ವೇಳೆ, ಅವರ ತಂದೆ ಅಲ್ಲು ಅರವಿಂದ್ ಸಹ ಪೊಲೀಸ್ ಜೀಪು ಹತ್ತಿದ್ದರು, ಆದರೆ ಪೊಲೀಸರು ಅವರನ್ನು ಕೆಳಗೆ ಇಳಿಸಿ, ಕೇವಲ ಅಲ್ಲು ಅರ್ಜುನ್ ಅನ್ನು ಮಾತ್ರವೇ ಬಂಧಿಸಿ ಕರೆದೊಯ್ದಿದ್ದಾರೆ.