40ನೇ ವಸಂತಕ್ಕೆ ಕಾಲಿಟ್ಟ ಅಲ್ಲು ಅರ್ಜುನ್‌: ರಶ್ಮಿಕಾ ಸೇರಿ ಗಣ್ಯರಿಂದ ಶುಭ ಹಾರೈಕೆ

ಹೈದರಾಬಾದ್:

ತೆಲುಗು ನಟ ಅಲ್ಲು ಅರ್ಜುನ್‌ ಅವರು ಇಂದು (ಶುಕ್ರವಾರ) 40ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಈ ಹಿನ್ನೆಲೆಯಲ್ಲಿ ಟ್ವಿಟರ್‌ನಲ್ಲಿ ಶುಭಾಶಯಗಳ ಮಹಾಪೂರವೇ ಹರಿದು ಬರುತ್ತಿದೆ.

ಅಂಕ ಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೆ ಜಿಗಿದ ರಾಹುಲ್ ಪಡೆ: ಆರೆಂಜ್, ಪರ್ಪಲ್ ಕ್ಯಾಪ್ ಯಾರ ಬಳಿ ಇದೆ?

ಅಲ್ಲು ಅರ್ಜುನ್ ಹುಟ್ಟುಹಬ್ಬದ ಅಂಗವಾಗಿ ಮೆಗಾಸ್ಟಾರ್ ಚಿರಂಜೀವಿ, ನಟಿ ರಶ್ಮಿಕಾ ಮಂದಣ್ಣ ಸೇರಿದಂತೆ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳಲ್ಲಿ ಶುಭ ಹಾರೈಸಿದ್ದಾರೆ.

‘ಜನ್ಮದಿನದ ಶುಭಾಶಯಗಳು ಬನ್ನಿ. (ಅಲ್ಲು ಅರ್ಜುನ್) ನಿಮ್ಮ ಕಠಿಣ ಪರಿಶ್ರಮ ಮತ್ತು ಬದ್ಧತೆ ನಿಮಗೆ ಯಶಸ್ಸನ್ನು ತಂದುಕೊಡುತ್ತದೆ ಶುಭವಾಗಲಿ’ ಎಂದು ಚಿರಂಜೀವಿ ಟ್ವೀಟ್ ಮಾಡಿದ್ದಾರೆ.

 ಏಪ್ರಿಲ್ 22ರಿಂದ ಪಿಯುಸಿ ಪರೀಕ್ಷೆ ಶುರು; ಇಲ್ಲಿದೆ ನೋಡಿ ವೇಳಾಪಟ್ಟಿ

‘ಹುಟ್ಟುಹಬ್ಬದ ಶುಭಾಶಯಗಳು ಅಲ್ಲು ಅರ್ಜುನ್ (ನನ್ನ ಪುಷ್ಪಾ…) ಜಗತ್ತು ಈಗಾಗಲೇ ನಿಮ್ಮನ್ನು ಪ್ರೀತಿಸುತ್ತಿದೆ. ಆದರೆ, ಈ ಜನ್ಮದಿನದಂದು ದೇಶದ ಪ್ರತಿ ಮೂಲೆಯಲ್ಲಿರುವ ಅಭಿಮಾನಿಗಳು ನಿಮ್ಮನ್ನು ಹೇಗೆ ಪ್ರೀತಿಸುತ್ತಾರೋ ಅದೇ ರೀತಿ ಜಗತ್ತು ನಿಮ್ಮನ್ನು ಪ್ರೀತಿಸುತ್ತದೆ ಎಂದು ನಾನು ಭಾವಿಸುತ್ತೇನೆ. ನಿಮ್ಮ ಮೇಲಿನ ಪ್ರೀತಿ ಮತ್ತು ಅಭಿಮಾನ ಸದಾ ಕಾಲ ಹೀಗೆ ಇರುತ್ತದೆ’ ಎಂದು ರಶ್ಮಿಕಾ ಟ್ವೀಟ್ ಮಾಡಿದ್ದಾರೆ.

 

ಇತ್ತೀಚಿಗೆ ಸುಕುಮಾರ್ ನಿರ್ದೇಶನದಲ್ಲಿ ಮೂಡಿಬಂದ ‘ಪುಷ್ಪ’ ಸಿನಿಮಾದಲ್ಲಿ ಅಲ್ಲು ಅರ್ಜುನ್, ರಶ್ಮಿಕಾ ಮಂದಣ್ಣ ಹಾಗೂ ಸಮಂತಾ ಅಭಿನಯಿಸಿ ಸೈ ಎನಿಸಿಕೊಂಡಿದ್ದಾರೆ. ಈ ಚಿತ್ರಕ್ಕೆ ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಬಾಕ್ಸ್‌ ಆಫೀಸ್‌ನಲ್ಲಿ ₹365 ಕೋಟಿಗೂ ಅಧಿಕ ಹಣ ಗಳಿಸಿ ದಾಖಲೆ ಮಾಡಿದೆ.

ರಾಜ್ಯದಲ್ಲಿ ಮತ್ತೊಂದು ಧರ್ಮ ಸಂಘರ್ಷ : ಹಿಂದೂಗಳ ತೀರ್ಥಯಾತ್ರೆಗೆ ಮುಸ್ಲಿಮರ ಬಸ್ ಗಳು ಬೇಡ ಅಭಿಯಾನ ಶುರು!

ಅಲಾ ವೈಕುಂಟಪುರಮುಲೋ ಸಿನಿಮಾದ ಯಶಸ್ಸು ಅಲ್ಲು ಅರ್ಜುನ್ ನಟನಾ ಪಯಣಕ್ಕೆ ಮೈಲುಗಲ್ಲು ಹಾಕಿತ್ತು. ನಂತರ ಬಂದ ‘ಪುಷ್ಪ’ ಸಿನಿಮಾ ಅವರನ್ನು ಟಾಲಿವುಡ್‌ನಲ್ಲಿ ನಂಬರ್‌ 1 ಸ್ಥಾನಕ್ಕೆ ಏರಿಸಿದೆ.

      ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link