ಬೆಂಗಳೂರು:
ಮಲ್ಲೇಶ್ವರ ಕ್ಷೇತ್ರ ವ್ಯಾಪ್ತಿಯ ವಾರ್ಡ್ 45ರ ಪಟೇಲ್ ಭೈರಹನುಮಯ್ಯ ಕೊಳೆಗೇರಿಯ ಫಲಾನುಭವಿಗಳಿಗೆ ಬಹುಮಹಡಿಯಲ್ಲಿ ಕಟ್ಟಲಾಗಿರುವ 60 ಮನೆಗಳನ್ನು ಹಸ್ತಾಂತರಿಸುವ ಪ್ರಕ್ರಿಯೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಗುರುವಾರ ಚಾಲನೆ ನೀಡಿದರು.
ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ರವರ 131ನೇ ಜಯಂತ್ಯುತ್ಸವದ ಅಂಗವಾಗಿ ಬಿಬಿಎಂಪಿ ವತಿಯಿಂದ ಯಶವಂತಪುರದ ಸಂವಿಧಾನ ವೃತ್ತದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ರೂ 5.5 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡಿರುವ 60 ಮನೆಗಳಿರುವ ಬಹುಮಹಡಿ ಕಟ್ಟಡದ ಉದ್ಘಾಟನೆ ನೆರವೇರಿಸಿದರು.
ಅಧ್ಯಕ್ಷತೆ ವಹಿಸಿದ್ದ ಕ್ಷೇತ್ರದ ಶಾಸಕರೂ ಆದ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರು ಮಾತನಾಡಿ, ಅಂಬೇಡ್ಕರ್ ಅವರು ಎಲ್ಲರಿಗೂ ಸಮಾನತೆ, ಬದುಕುವ ಅವಕಾಶಗಳು, ನಿಷ್ಪಕ್ಷಪಾತ ನ್ಯಾಯ ಸಿಗುವ ವ್ಯವಸ್ಥೆ ನಿರ್ಮಾಣವಾಗಬೇಕೆಂದು ಪ್ರತಿಪಾದಿಸಿದ ಅಗಾಧ ಜ್ಞಾನಿಯಾಗಿದ್ದರು. ಅವರು ಹಾಕಿಕೊಟ್ಟ ಮೇಲ್ಪಂಕ್ತಿಯಲ್ಲಿ ನಡೆದು ನಮ್ಮ ಸರ್ಕಾರವು ದುರ್ಬಲ ವರ್ಗದವರನ್ನು ಸಬಲೀಕರಿಸಲು ಒತ್ತು ಕೊಡುತ್ತಿದೆ ಎಂದರು.
ಡಾ.ಬಿ.ಆರ್.ಅಂಬೇಡ್ಕರ್ ಅವರ 131ನೇ ಜಯಂತಿ : ಸಂವಿಧಾನ ಶಿಲ್ಪಿಯನ್ನು ಸ್ಮರಿಸಿದ ಪ್ರಧಾನಿ ಮೋದಿ, ರಾಹುಲ್
ಎಲ್ಲರಿಗೂ ಗುಣಮಟ್ಟದ ಶಿಕ್ಷಣ ಒದಗಿಸಲು ಸರ್ಕಾರ ಹಲವು ಕ್ರಮಗಳನ್ನು ತೆಗೆದುಕೊಂಡಿದೆ. ಮಲ್ಲೇಶ್ವರ ಕ್ಷೇತ್ರದಲ್ಲಿರುವೆ ಎಲ್ಲಾ 13 ಸರ್ಕಾರಿ ಶಾಲೆಗಳಲ್ಲಿ ಉತ್ತಮ ಗುಣಮಟ್ಟದ ಶಿಕ್ಷಣ ಕೊಡಲಾಗುತ್ತಿದೆ. ಜೊತೆಗೆ ಸಂಸದರಾದ ಡಿ.ವಿ.ಸದಾನಂದ ಗೌಡರ ಒತ್ತಾಸೆಯಿಂದ ಜನೌಷಧಿ ಕೇಂದ್ರಗಳ ಸ್ಥಾಪನೆ ಮತ್ತಿತರ ಕ್ರಮಗಳ ಮೂಲಕ ಸಾರ್ವಜನಿಕ ಆರೋಗ್ಯ ಸೇವೆಗಳನ್ನು ಉತ್ತಮಗೊಳಿಸಲಾಗಿದೆ. ಮಲ್ಲೇಶ್ವರ ಕ್ಷೇತ್ರ ವ್ಯಾಪ್ತಿಯಲ್ಲಿ ಡಿಜಿಟಲ್ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಸ್ಥಾಪಿಸಲು ಯೋಜಿಸಲಾಗುತ್ತದೆ ಎಂದು ಅಶ್ವತ್ಥನಾರಾಯಣ ವಿವರಿಸಿದರು.
ಕಾಂಗ್ರೆಸ್ ಭವನದಲ್ಲಿ ಡಿ.ಕೆ. ಶಿವಕುಮಾರ್ ಅವರು ಅಂಬೇಡ್ಕರ್ ಜಯಂತಿ ಕುರಿತು ಮಾಧ್ಯಮಗಳಿಗೆ ನೀಡಿದ ಮಾಹಿತಿ
ಕರಿಮಂಡಿ ಕೊಳೆಗೇರಿಯಲ್ಲಿ 36 ಮನೆಗಳನ್ನು ಕಟ್ಟಲಾಗಿದೆ. ಸರ್ದಾರ್ ವಲ್ಲಭಬಾಯಿ ಪಟೇಲ್ (ಯಶವಂತಪುರ ಮಾರ್ಕೆಟ್ ಪಕ್ಕ) ಕೊಳೆಗೇರಿ ಪ್ರದೇಶದಲ್ಲಿ 35 ಮನೆಗಳನ್ನು ಕಟ್ಟಲಾಗಿದೆ., ಸಿದ್ಧಾರ್ಥ ಕೊಳೆಗೇರಿಯಲ್ಲಿ 100 ಒಂಟಿ ಮನೆಗಳನ್ನು ಕಟ್ಟಲಾಗಿದೆ. ಎನ್ಎಚ್ ಕಾಲೋನಿಯಲ್ಲಿ ನೂರಕ್ಕೂ ಹೆಚ್ಚು ಮನೆಗಳಿವೆ. ಈಗ ಪಟೇಲ್ ಭೈರಹನುಮಯ್ಯ ಕೊಳೆಗೇರಿಯಲ್ಲಿ 60 ಮನೆಗಳನ್ನು ಕಟ್ಟಲಾಗಿದ್ದು, ಇನ್ನೂ 60 ಮನೆಗಳಿರುವ ಕಟ್ಟಡ ನಿರ್ಮಾಣಕ್ಕೆ ಇಂದು ಚಾಲನೆ ಕೊಡಲಾಗಿದೆ ಎಂದರು.
ಬೆಂಗಳೂರು ಉತ್ತರ ಲೋಕಸಭಾ ಸಂಸದ ಡಿ.ವಿ.ಸದಾನಂದ ಗೌಡ ಅವರು ಮಾತನಾಡಿ, ಮಲ್ಲೇಶ್ವರ ಕ್ಷೇತ್ರದಲ್ಲಿ ಕೊಳೆಗೇರಿಗಳ ನಿರ್ಮೂಲನೆಗಾಗಿ ರಚನಾತ್ಮಕವಾಗಿ ನಡೆಯುತ್ತಿರುವ ಕಾರ್ಯಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ರಾಜ್ಯದ ಎಲ್ಲಾ 224 ಶಾಸಕರು ಹಾಗೂ ಇತರ ಜನಪ್ರತಿನಿಧಿಗಳು ಸಮಾಜದಲ್ಲಿ ನಿಜವಾದ ಪರಿವರ್ತನೆ ತರುವಂತಹ ಕಾರ್ಯಗಳನ್ನು ಮಾಡಬೇಕು ಎಂದು ಆಶಿಸಿದರು.
ಈಶ್ವರಪ್ಪ ಬಂಧನಕ್ಕೆ ಆಗ್ರಹಿಸಿ : ಸಿಎಂ ಬಸವರಾಜ ಬೊಮ್ಮಾಯಿ ಮನೆಗೆ ಮುತ್ತಿಗೆ ಹಾಕಲು ಹೊರಟ ವಿರೋಧ ಪಕ್ಷದ ನಾಯಕರು
ಕಾರ್ಯಕ್ರಮದ ಅಂಗವಾಗಿ ಸದಾನಂದ ಗೌಡರು ಪಟೇಲ್ ಭೈರಹನುಮಯ್ಯ ಕೊಳೆಗೇರಿ ಪ್ರದೇಶದಲ್ಲ್ಲಿ ಮನೆಗಳನ್ನು ನಿರ್ಮಿಸಲು ಬಿಬಿಎಂಪಿ ಗೆ ರೂ 30 ಕೋಟಿಗೂ ಹೆಚ್ಚು ಬೆಲೆಬಾಳುವ ಜಾಗವನ್ನು ದಾನವಾಗಿ ಕೊಟ್ಟ ಬಾಬು ಮಹಾದೇವಪ್ರಸಾದ್ ಅವರನ್ನು ಸನ್ಮಾನಿಸಿದರು.
ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿಯವರು ರೂ 15 ಕೋಟಿ ವೆಚ್ಚದಲ್ಲಿ ನಡೆಯಲಿರುವ ಯಶವಂತಪುರ ಮೇಲ್ಸೇತುವೆ ಅಗಲೀಕರಣ, ಮೈಸೂರು ಲ್ಯಾಂಪ್ಸ್ ಹತ್ತಿರ ರೈಲ್ವೆ ಕೆಳಸೇತುವೆ, ಮಲ್ಲೇಶ್ವರ 18ನೇ ಕ್ರಾಸ್ ನಿರ್ಮಲಾ ರಾಣಿ ಶಾಲೆ ಹತ್ತಿರ ರೈಲ್ವೆ ಕೆಳಸೇತುವೆ ನಿರ್ಮಾಣಗಳಿಗೆ ಶಂಕುಸ್ಥಾಪನೆ ಹಾಗೂ ಪಟೇಲ್ ಭೈರಹನುಮಯ್ಯ ಪ್ರದೇಶದಲ್ಲಿ ಇನ್ನೂ 60 ಮನೆಗಳ ಬಹುಮಹಡಿ ಕಟ್ಟಡ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿದರು.
ಸಚಿವರಾದ ಮುನಿರತ್ನ, ಮುರುಗೇಶ ನಿರಾಣಿ, ನಿಕಟಪೂರ್ವ ಬಿಬಿಎಂಪಿ ಸದಸ್ಯರಾದ ಜೈಪಾಲ್, ಮಂಜುನಾಥ್, ಹೇಮಲತಾ ಸತೀಶ್, ಸುಮಂಗಲಾ ಕೇಶವ್, ಬಿಜೆಪಿ ಮಹಿಳಾ ಮಂಡಲದ ಕಾವೇರಿ ಕೇದಾರನಾಥ್, ನಾರಾಯಣಗೌಡ, ವೇಲು, ವೆಂಕಟೇಶ್, ಬಾಬು. ಬಿಬಿಎಂಪಿ ಜಂಟಿ ಆಯುಕ್ತ ಶ್ರೀನಿವಾಸ್, ಎಂಜಿನಿಯರ್ ಗಳಾದ ಜಯಶಂಕರ್, ಸುಷ್ಮಾ ಮತ್ತಿತರರು ಇದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ