ಬೆಂಗಳೂರು:
ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯ ವಸತಿ ಶಾಲೆಗಳಿಗೆ ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ವಸತಿ ಶಾಲೆ ಎಂದು ಪುನರ್ ನಾಮಕರಣ ಮಾಡಿ ಸರ್ಕಾರದಿಂದ ಆದೇಶ ಹೊರಡಿಸಲಾಗಿದೆ.
ಸಮಾಜ ಕಲ್ಯಾಣ ಇಲಾಖೆಯಿಂದ ಪರಿಶಿಷ್ಟ ಜಾತಿಯ ಮಕ್ಕಳಿಗೆ ಒಂದರಿಂದ ಐದನೇ ತರಗತಿವರೆಗೆ ಶಿಕ್ಷಣ ನೀಡಲು 68 ವಸತಿ ಶಾಲೆಗಳನ್ನು ತೆರೆಯಲಾಗಿದೆ.
8500 ವಿದ್ಯಾರ್ಥಿಗಳು ಈ ಶಾಲೆಗಳಲ್ಲಿ ಓದುತ್ತಿದ್ದಾರೆ. ಈ ಶಾಲೆಗಳಿಗೆ ಅಂಬೇಡ್ಕರ್ ಹೆಸರನ್ನು ನಾಮಕರಣ ಮಾಡಲಾಗುವುದು.
ಅಂಬೇಡ್ಕರ್ ಅವರ ಹೋರಾಟ, ದೇಶಕ್ಕೆ ಅವರು ನೀಡಿದ ಕೊಡುಗೆ ಹಿನ್ನೆಲೆಯಲ್ಲಿ ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯ ವಸತಿ ಶಾಲೆಗಳಿಗೆ ಭಾರತರತ್ನ ಬಿ.ಆರ್. ಅಂಬೇಡ್ಕರ್ ವಸತಿ ಶಾಲೆ ಎಂದು ಪುನರ್ ನಾಮಕರಣ ಮಾಡಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
