ಗಡಿ ವಿವಾದ : ಭಾರತದ ಪರ ಅಮೇರಿಕ ಬ್ಯಾಟಿಂಗ್‌…!

ನವದೆಹಲಿ: 

   ಅರುಣಾಚಲ ಪ್ರದೇಶ ಭಾರತದ ಅವಿಭಾಜ್ಯ ಅಂಗ. ಮೆಕ್ ಮಹೊನ್ ರೇಖೆಯೇ ಚೀನಾ ಮತ್ತು ಅರುಣಾಚಲ ಪ್ರದೇಶದ ನಡುವಿನ ಅಂತಾರಾಷ್ಟ್ರೀಯ ಗಡಿ ಎಂದು ಅಮೆರಿಕಾ ಹೇಳಿದೆ.

   ಅಮೆರಿಕದ ಉಭಯ ಪಕ್ಷೀಯ ಸೆನೆಟ್ ನಲ್ಲಿ ಸೆನೆಟರ್ ಜೆಫ್ ಮರ್ಕ್ಲಿ ಈ ನಿರ್ಣಯವನ್ನು ಪರಿಚಯಿಸಿದ್ದು ಸೆನೆಟರ್ ಜಾನ್ ಕಾರ್ನಿನ್ ನಿರ್ಣಯವನ್ನು ಸಹ ಪ್ರಾಯೋಜಿಸಿದರು. ಈ ವೇಳೆ ಇಂಡೋ-ಪೆಸಿಫಿಕ್‌ಗೆ ಚೀನಾ ಗಂಭೀರ ಬೆದರಿಕೆಗಳನ್ನು ಒಡ್ಡುತ್ತಿದೆ. ಅಂತಹ ಸಮಯದಲ್ಲಿ ನಮ್ಮ ಕಾರ್ಯತಂತ್ರದ ಪಾಲುದಾರ ದೇಶಗಳೊಂದಿಗೆ, ಅದರಲ್ಲೂ ವಿಶೇಷವಾಗಿ ಭಾರತದೊಂದಿಗೆ ಒಗ್ಗಟ್ಟಾಗಿ ನಿಲ್ಲುವುದು ನಿರ್ಣಾಯಕವಾಗಿದೆ ಎಂದು ಸೆನೆಟರ್ ಬಿಲ್ ಹ್ಯಾಗರ್ಟಿ ಹೇಳಿದ್ದಾರೆ.

   ಈ ಉಭಯಪಕ್ಷೀಯ ನಿರ್ಣಯವು ಅರುಣಾಚಲ ಪ್ರದೇಶವನ್ನು ಭಾರತದ ಅವಿಭಾಜ್ಯ ಅಂಗವೆಂದು ಗುರುತಿಸಲು ಸೆನೆಟ್‌ನ ಬೆಂಬಲವನ್ನು ವ್ಯಕ್ತಪಡಿಸುತ್ತದೆ. ವಾಸ್ತವಿಕ ನಿಯಂತ್ರಣ ರೇಖೆಯ ಉದ್ದಕ್ಕೂ ಯಥಾಸ್ಥಿತಿಯನ್ನು ಬದಲಾಯಿಸಲು ಚೀನಾದ ಮಿಲಿಟರಿ ಆಕ್ರಮಣವನ್ನು ಖಂಡಿಸುತ್ತದೆ. ಅಮೆರಿಕಾ-ಭಾರತದ ಕಾರ್ಯತಂತ್ರದ ಪಾಲುದಾರಿಕೆಯನ್ನು ಮತ್ತಷ್ಟು ಹೆಚ್ಚಿಸುತ್ತದೆ ಮತ್ತು ಕ್ವಾಡ್ ಫ್ರೀ ಮತ್ತು ಓಪನ್ ಇಂಡೋ-ಪೆಸಿಫಿಕ್ ಅನ್ನು ಬೆಂಬಲಿಸುತ್ತದೆ ಎಂದರು.

 

   ಈ ನಿರ್ಣಯವು ಭಾರತದ ರಾಜ್ಯವಾದ ಅರುಣಾಚಲ ಪ್ರದೇಶವನ್ನು ಭಾರತದ ಗಣರಾಜ್ಯದ ಭಾಗವಾಗಿ ನೋಡುತ್ತದೆ. ಪೀಪಲ್ಸ್ ರಿಪಬ್ಲಿಕ್ ಆಫ್ ಚೀನಾ ಅಲ್ಲ ಎಂದು ಈ ನಿರ್ಣಯವು ಸ್ಪಷ್ಟಪಡಿಸುತ್ತದೆ. ಅಲ್ಲದೆ ಭಾರತಕ್ಕೆ ಆಳವಾದ ಬೆಂಬಲ ಮತ್ತು ಸಹಾಯಕ್ಕೆ ಬದ್ಧವಾಗಿದೆ ಅಮೆರಿಕಾ ಬದ್ದವಾಗಿದೆ ಎಂದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link