ವಾಷಿಂಗ್ಟನ್
ವಾಷಿಂಗ್ಟನ್ ಡಿಸಿಯ ಯಹೂದಿ ವಸ್ತು ಸಂಗ್ರಹಾಲಯದ ಬಳಿ ನಡೆದ ಗುಂಡಿನ ದಾಳಿಯಲ್ಲಿ ಇಬ್ಬರು ಇಸ್ರೇಲಿ ರಾಯಭಾರ ಕಚೇರಿಯ ನೌಕರರು ಸಾವನ್ನಪ್ಪಿದ್ದಾರೆ ಎಂದು ಹೋಮ್‌ಲ್ಯಾಂಡ್ ಸೆಕ್ಯುರಿಟಿ ಉಲ್ಲೇಖಿಸಿ ಎಪಿ ವರದಿ ಮಾಡಿದೆ. ಅಧಿಕಾರಿಗಳು ಮತ್ತು ಮಾಧ್ಯಮ ವರದಿಗಳ ಪ್ರಕಾರ, ಬುಧವಾರ ರಾತ್ರಿ ವಾಷಿಂಗ್ಟನ್ ಡಿಸಿಯ ಯಹೂದಿ ವಸ್ತುಸಂಗ್ರಹಾಲಯದಲ್ಲಿ ಕಾರ್ಯಕ್ರಮವೊಂದು ನಡೆಯುತ್ತಿತ್ತು. ನಂತರ ಕೆಲವು ಅಪರಿಚಿತ ದುಷ್ಕರ್ಮಿಗಳು ಹೊರಗೆ ಗುಂಡು ಹಾರಿಸಿದ್ದಾರೆ. ಈ ಘಟನೆಯಲ್ಲಿ ಇಸ್ರೇಲಿ ರಾಯಭಾರ ಕಚೇರಿಯ ಇಬ್ಬರು ಸಿಬ್ಬಂದಿ ಸಾವನ್ನಪ್ಪಿದ್ದಾರೆ.
