ಮೂರು ದಿನದ ಪ್ರವಾಸಕ್ಕಾಗಿ ರಾಜ್ಯಕ್ಕೆ ಅಮಿತ್‌ ಷಾ ಆಗಮನ..!

ಬೆಂಗಳೂರು: 

      ಕೇಂದ್ರ ಗೃಹ ಸಚಿವ ಅಮಿತ್ ಶಾ ಇಂದು ಬೆಂಗಳೂರಿಗೆ ಆಗಮಿಸಿದ್ದಾರೆ, ಎಚ್ ಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಅವರನ್ನು ಸಿಎಂ ಬಸವರಾಜ ಬೊಮ್ಮಾಯಿ ಸ್ವಾಗತಿಸಿದ್ದು  ನಾಳೆ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ. 

    ಅಮಿತ್ ಶಾ ಅವರನ್ನು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಉಪಹಾರಕ್ಕೆ ಆಹ್ವಾನಿಸಿ, ಬಿಎಸ್ ವೈ ಸರ್ಕಾರಿ ನಿವಾಸ ಕಾವೇರಿಗೆ ಬೆಳೆಗ್ಗೆ 9.30 ಕ್ಕೆ ಆಗಮಿಸಲಿದ್ದಾರೆ. ಶಾ ಜೊತೆ ಸಿಎಂ‌ ಬಸವರಾಜ ಬೊಮ್ಮಾಯಿ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಕೂಡಾ ಇರಲಿದ್ದಾರೆ. ಈ ವೇಳೆ ಸದ್ಯದ ರಾಜಕೀಯ ಬೆಳವಣಿಗೆ ಹಾಗೂ ಪಕ್ಷದ ಆಂತರಿಕ ವಿಚಾರಗಳ ಬಗ್ಗೆ ಚರ್ಚೆ ನಡೆಸುವ ಸಾಧ್ಯತೆಯೂ ಇದೆ. ಬಳಿಕ ದಕ್ಷಿಣ ರಾಜ್ಯಗಳು/ ಕೇಂದ್ರಾಅಡಳಿತ ಪ್ರದೇಶಗಳಿಗೆ ಮಾಕವಸ್ತು ಕಳ್ಳಸಾಗಣೆ ಮತ್ತು ರಾಷ್ಟ್ರೀಯ ಭದ್ರತೆ ವಿಷಯದ ಕುರಿತ ವಿಚಾರ ಸಂಕಿರಣದಲ್ಲಿ ಅಮಿತ್‌ ಶಾ ಪಾಲ್ಗೊಳ್ಳಲಿದ್ದಾರೆ.

     ಅಮಿತ್‌ ಶಾ ಅವರು ಬೆಂಗಳೂರಿನ ಕಮ್ಮಘಟ್ಟ ಗ್ರಾಮದಲ್ಲಿ ಶೇಖರ್‌ ಸಮೃದ್ಧಿ ಸೌಧದ ಶಂಕುಸ್ಥಾಪನೆ ನೆರವೇರಿಸಲಿದ್ದು, ಸಹಕಾರ ಸಚಿವಾಲಯದ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಉದ್ಘಾಟಿಸಲಿದ್ದಾರೆ. ಚುನಾವಣೆ ಸನಿಹದಲ್ಲಿರುವುದರಿಂದ ಅಮಿತ್‌ ಶಾ ಅವರು ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳಿಗೆ ಭೇಟಿ ನೀಡುತ್ತಿದ್ದು, ಪಕ್ಷದ ಪ್ರಚಾರ ಕಾರ್ಯಗಳಲ್ಲಿ ಪಾಲ್ಗೊಳ್ಳುತ್ತಿದ್ದಾರೆ.

ವಿಧಾನಸೌಧದಲ್ಲಿ ಮೂರು ಪ್ರತಿಮೆ ಲೋಕಾರ್ಪಣೆ 

      ಮಾರ್ಚ್ 24 ರಂದು ವಿಧಾನಸೌಧದ ಮುಂಭಾಗದಲ್ಲಿ ಕೆಂಪೇಗೌಡ (ಬೆಂಗಳೂರು ಸಂಸ್ಥಾಪಕ) ಮತ್ತು ಬಸವೇಶ್ವರ (ಲಿಂಗಾಯತ ಸಮಾಜ ಸುಧಾರಕ) ಸೇರಿದಂತೆ ಮೂರು ಪ್ರತಿಮೆಗಳನ್ನು ಅಮಿತ್‌ ಶಾ ಅನಾವರಣಗೊಳಿಸಲಿದ್ದಾರೆ. ಈ ವಿಷಯವನ್ನು ಇಂದು ಹುಬ್ಬಳ್ಳಿಯಲ್ಲಿ ಬಸವರಾಜ ಬೊಮ್ಮಾಯಿ ಖಚಿತಪಡಿಸಿದ್ದಾರೆ.

    ಮಾರ್ಚ್ 24 ಮತ್ತು 26 ರಂದು ಅಮಿತ್‌ ಶಾ ಕರ್ನಾಟಕದಲ್ಲಿ ಇರಲಿದ್ದಾರೆ. ಮಾರ್ಚ್ 25 ರಂದು ಪ್ರಧಾನಿ ನರೇಂದ್ರ ಮೋದಿ ಕೂಡ ಕರ್ನಾಟಕಕ್ಕೆ ಆಗಮಿಸಲಿದ್ದಾರೆ. ರಾಜ್ಯದ ವಿವಿಧೆಡೆ ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್‌ ಶಾ ಅವರು ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ. ಮಾರ್ಚ್‌ 25ರಂದು ಪ್ರಧಾನಿ ನರೇಂದ್ರ ಮೋದಿಯವರು ಬೆಂಗಳೂರಿನಲ್ಲಿ ವೈಟ್‌ಫೀಲ್ಡ್‌ ಮೆಟ್ರೋ ಹಳಿಯನ್ನು ಉದ್ಘಾಟಿಸಲಿದ್ದಾರೆ. ಬಳಿಕ ದಾವಣಗೆರೆಗೆ ಭೇಟಿ ನೀಡಲಿದ್ದು, ಬಿಜೆಪಿ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ.

     ಸಂಜೆ 6.30 ಕ್ಕೆ ವಿಧಾನಸೌಧ ಮುಂಭಾಗ ಬಸವೇಶ್ವರ ಮತ್ತು ಕೆಂಪೇಗೌಡ ಪ್ರತಿಮೆ ಉದ್ಘಾಟನೆ ಹಾಗೂ ಬೆಂಗಳೂರು ಹಬ್ಬ ಉದ್ಘಾಟನೆಯನ್ನು ಶಾ ನೆರವೇರಿಸಲಿದ್ದಾರೆ. ರಾತ್ರಿ 8.30ಕ್ಕೆ ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಬಿಜೆಪಿ ರಾಜ್ಯ ಕೋರ್ ಕಮಿಟಿ ಸಭೆಯಲ್ಲಿ ಭಾಗಿಯಾಗಿದ್ದಾರೆ. 26 ರಂದು ರಾತ್ರಿ ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಷಾ ವಾಸ್ತವ್ಯ ಹೂಡಲಿದ್ದು,‌ 27 ರಂದು ಬೆಳಗ್ಗೆ 9 ಗಂಟೆಗೆ ದೆಹಲಿಗೆ ವಾಪಸ್ ಆಗಲಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap