ನವದೆಹಲಿ:
ರಾಜ್ಯಸಭೆಯಲ್ಲಿ ಸಂವಿಧಾನದ ಮೇಲಿನ ಚರ್ಚೆಯ ವೇಳೆ ಡಾ.ಬಿ.ಆರ್ ಅಂಬೇಡ್ಕರ್ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿಕೆ ಇದೀಗ ರಾಜಕೀಯ ಕಾವು ಪಡೆದುಕೊಂಡಿದ್ದು. ಕಾಂಗ್ರೆಸ್ ನಂತರ ಈಗ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಕೂಡ ಕೆರಳಿದೆ. ಅಂಬೇಡ್ಕರ್ ಕುರಿತು ಹೇಳಿಕೆ ನೀಡಿರುವ ಗೃಹ ಸಚಿವ ಅಮಿತ್ ಶಾ ವಿರುದ್ಧ ಟಿಎಂಸಿ ಹಕ್ಕುಚುತ್ಯಿ ನೋಟಿಸ್ ನೀಡಿದೆ.
ಮೂಲಗಳ ಪ್ರಕಾರ, ಟಿಎಂಸಿ ನಾಯಕ ಡೆರೆಕ್ ಒ’ಬ್ರಿಯಾನ್ ಅವರು ರಾಜ್ಯಸಭೆಯಲ್ಲಿ ಕಾರ್ಯವಿಧಾನ ಮತ್ತು ವ್ಯವಹಾರದ ನಡವಳಿಕೆಯ ನಿಯಮಗಳ ನಿಯಮ 187ರ ಅಡಿಯಲ್ಲಿ ಶಾ ವಿರುದ್ಧ ವಿಶೇಷಾಧಿಕಾರ ಉಲ್ಲಂಘನೆಯ ನೋಟಿಸ್ ಅನ್ನು ಸಲ್ಲಿಸಿದ್ದಾರೆ.
ವಾಸ್ತವವಾಗಿ, ಸಂವಿಧಾನದ ಮೇಲಿನ ಚರ್ಚೆಯ ಸಂದರ್ಭದಲ್ಲಿ, ಅಮಿತ್ ಶಾ ಅವರು ರಾಜ್ಯಸಭೆಯಲ್ಲಿ ‘ಅದು ಈಗ ಫ್ಯಾಷನ್ ಆಗಿಬಿಟ್ಟಿದೆ. ಅಂಬೇಡ್ಕರ್, ಅಂಬೇಡ್ಕರ್, ಅಂಬೇಡ್ಕರ್. ಇಷ್ಟು ದೇವರ ನಾಮಸ್ಮರಣೆ ಮಾಡಿದ್ದರೆ ಏಳೇಳು ಜನ್ಮ ಸ್ವರ್ಗಕ್ಕೆ ಹೋಗುತ್ತಿದ್ದೆ. ಅಂಬೇಡ್ಕರ್ ಅವರ ಹೆಸರನ್ನು ನೂರು ಬಾರಿ ತೆಗೆದುಕೊಳ್ಳಿ, ಆದರೆ ಅಂಬೇಡ್ಕರ್ ಬಗ್ಗೆ ಕಾಂಗ್ರೆಸ್ ಪಕ್ಷಕ್ಕೆ ಏನು ಅನಿಸುತ್ತದೆ ಎಂಬುದನ್ನು ನಾನು ಹೇಳುತ್ತೇನೆ ಎಂದು ಹೇಳಿದ್ದರು.
ದೇಶದ ಮೊದಲ ಸಚಿವ ಸಂಪುಟಕ್ಕೆ ಅಂಬೇಡ್ಕರ್ ರಾಜೀನಾಮೆ ನೀಡಿದ್ದು ಏಕೆ? 370ನೇ ವಿಧಿ ಮತ್ತು ದೇಶದ ವಿದೇಶಾಂಗ ನೀತಿಯ ಬಗ್ಗೆ ಅಸಮಾಧಾನದ ಕಾರಣ ಅವರು ರಾಜೀನಾಮೆ ನೀಡಿದ್ದರು. ಈ ಕುರಿತು ಬಿ.ಸಿ.ರಾಯ್ ಅವರು ಪಂಡಿತ್ ನೆಹರೂ ಅವರಿಗೆ ಪತ್ರ ಬರೆದು ಅಂಬೇಡ್ಕರ್ ಮತ್ತು ರಾಜಾಜಿ ಸಂಪುಟದಿಂದ ಹೊರಹೊದರೆ ಏನಾಗುತ್ತದೆ? ಎಂದು ಪ್ರಶ್ನಿಸಿದ್ದರು. ಇದಕ್ಕೆ ಪ್ರತಿಕ್ರಿಯೆಯಾಗಿ ನೆಹರೂ ಅವರು ರಾಜಾಜಿಯವರ ನಿರ್ಗಮನವು ಸ್ವಲ್ಪಮಟ್ಟಿಗೆ ಪರಿಣಾಮ ಬೀರುತ್ತದೆ. ಆದರೆ ಅಂಬೇಡ್ಕರ್ ಅವರ ನಿರ್ಗಮನವು ಏನೂ ಆಗುವುದಿಲ್ಲ ಎಂದು ಬರೆದಿದ್ದರು.
ಅಂಬೇಡ್ಕರ್ ಬಗ್ಗೆ ಕಾಂಗ್ರೆಸ್ ಈ ರೀತಿಯ ಅಭಿಪ್ರಾಯಗಳನ್ನು ಹೊಂದಿದೆ ಎಂದು ಆರೋಪಿಸಿದರು. ಇಂದು ಅಂಬೇಡ್ಕರರನ್ನು ನಂಬುವ ಜನ ಸಾಕಷ್ಟು ಸಂಖ್ಯೆಯಲ್ಲಿ ಬಂದಿರುವುದರಿಂದ ಅಂಬೇಡ್ಕರ್-ಅಂಬೇಡ್ಕರ್ ಎಂದು ಹೇಳುತ್ತಿದ್ದಾರೆ. ಇತ್ತೀಚಿನ ದಿನಗಳಲ್ಲಿ ಕಾಂಗ್ರೆಸ್ ನಾಯಕರು ಮತ ಬ್ಯಾಂಕ್‌ಗಾಗಿ ಅಂಬೇಡ್ಕರ್ ಅವರ ಹೆಸರನ್ನು ಪದೇ ಪದೇ ಹೇಳುತ್ತಿದ್ದಾರೆ ಎಂದು ಹೇಳಿದ್ದರು.