ನವದೆಹಲಿ
ನಾನು ಯಾರ ದಯೆಯಿಂದಲೂ ಇಲ್ಲಿ ಬಂದಿಲ್ಲ. ಏಳು ಬಾರಿ ಚುನಾವಣೆಗಳನ್ನು ಗೆಲ್ಲುವ ಮೂಲಕ ಅಧಿಕಾರವನ್ನು ಗಳಿಸಿದ್ದೇನೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಇಂದು ರಾಜ್ಯಸಭೆ ಅಧಿವೇಶನದಲ್ಲಿ ಹೇಳಿದ್ದಾರೆ. ರಾಜ್ಯಸಭೆಯಲ್ಲಿ ಗೃಹ ಸಚಿವಾಲಯದ ಕಾರ್ಯವೈಖರಿಯ ಕುರಿತ ಚರ್ಚೆಯ ಸಂದರ್ಭದಲ್ಲಿ ಅಮಿತ್ ಶಾ ಈ ಹೇಳಿಕೆ ನೀಡಿದ್ದಾರೆ.
ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಸಾಕೇತ್ ಗೋಖಲೆ ಅವರು ಸಿಬಿಐ ಬಗ್ಗೆ ಪ್ರಶ್ನೆಗಳನ್ನು ಎತ್ತಿದಾಗ ಬಿಸಿ ಚರ್ಚೆ ನಡೆಯಿತು. ಇದಕ್ಕೆ ಪ್ರತಿಕ್ರಿಯೆಯಾಗಿ, ಸಿಬಿಐ ಗೃಹ ಸಚಿವಾಲಯದ ವ್ಯಾಪ್ತಿಗೆ ಬರುವುದಿಲ್ಲ ಎಂದು ಅಮಿತ್ ಶಾ ಸ್ಪಷ್ಟಪಡಿಸಿದ್ದಾರೆ. ಸಾಕೇತ್ ಗೋಖಲೆ ಅವರ ಬಗ್ಗೆ ವೈಯಕ್ತಿಕ ಹೇಳಿಕೆ ನೀಡಿದಾಗ ಅಮಿತ್ ಶಾ “ನಾನು ಯಾರ ದಯೆಯಿಂದ ಅಥವಾ ಯಾವುದೇ ಸಿದ್ಧಾಂತವನ್ನು ವಿರೋಧಿಸಿ ಇಲ್ಲಿಗೆ ಬಂದಿಲ್ಲ. ಭಯಪಡುವ ಪ್ರಶ್ನೆಯೇ ಇಲ್ಲ. ನಾನು 7 ಬಾರಿ ಚುನಾವಣೆಯಲ್ಲಿ ಗೆದ್ದಿದ್ದೇನೆ” ಎಂದಿದ್ದಾರೆ.
