ಬೀದರ್:
ಕರ್ನಾಟಕದಲ್ಲಿ ಚುನಾವಣೆ ಹತ್ತಿರವಾಗುತ್ತಿರುವ ಬೆನ್ನಲೆ ಎಲ್ಲಾ ಪಕ್ಷಗಳ ರಾಷ್ಟ್ರೀಯ ನಾಯಕರು ರಾಜ್ಯ ಪ್ರವಾಸಕ್ಕೆ ಬರುತ್ತಿರುವುದು ಸಾಮಾನ್ಯ ಆದರೆ ಇದರಲ್ಲಿ ತುಸು ಹೆಚ್ಚೆಂದರೆ ಬಿಜೆಪಿ ನಾಯಕರು ತಿಂಗಳಿಗೆ ಏನಿಲ್ಲಾ ಎಂದರೂ 3-4 ಬಾರಿ ಬಂದು ಹೋಗಿ ಮಾಡುತ್ತಿರುವುದು ಏಕೆ ಕಳೇದ ಬಾರಿ ಚುನಾವಣೆಯಲ್ಲಿ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದರೂ ವಾಮ ಮಾರ್ಗದಲ್ಲಿ ಅಧಿಕಾರ ಹಿಡಿದ ಬಿಜೆಪಿಗೆ ಈ ಬಾರಿ ಆ ಪರಿಸ್ಥಿತಿ ಬರಬಾರದು ಎಂಬ ಉದ್ದೇಶವೇನಾದರು ಇರಬಹುದೇನೋ ಇದರ ಸತ್ಯಾಸತ್ಯತೆಯನ್ನು ದೇವರೆ ಬಲ್ಲ .
ಇಂದು ಪ್ರಧಾನ ಮಂತ್ರಿಯವರು ಕರ್ನಾಟಕದಲ್ಲಿ ಮಿಂಚಿನ ಸಂಚಾರಮಾಡಲಿದ್ದು ಹ ಲವು ಕಾಮಗಾರಿಗಳ ಶಿಲಾನ್ಯಾಸ , ಉದ್ಘಾಟನೆ ಮತ್ತು ತಮ್ಮ ಪಕ್ಷದ ಕೆಲ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ ಮತ್ತು ಇವರನ್ನೆ ಹಿಂಬಾಲಿಸುತ್ತಾ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮಾರ್ಚ್ 3ರಂದು ಬೀದರ್ ಜಿಲ್ಲೆಗೆ ಭೇಟಿ ನೀಡಲಿದ್ದು, ಈ ವೇಳೆ ಬಸವಕಲ್ಯಾಣದ ಅನುಭವ ಮಂಟಪದಲ್ಲಿ ವಿಜಯ ಸಂಕಲ್ಪ ಯಾತ್ರೆಗೆ ಚಾಲನೆ ನೀಡಲಿದ್ದಾರೆಂದು ತಿಳಿದುಬಂದಿದೆ.
ಈ ಕುರಿತು ಪಶುಸಂಗೋಪನಾ ಸಚಿವ ಹಾಗೂ ಬಿಜೆಪಿ ವಿಜಯ ಸಂಕಲ್ಪ ಯಾತ್ರೆಯ ಜಿಲ್ಲಾ ಸಂಚಾಲಕ ಪ್ರಭು ಚೌಹಾಣ್ ಅವರು ಮಾಹಿತಿ ನೀಡಿದರು.
ಮಾರ್ಚ್ 3ರ ಬೆಳಗ್ಗೆ 11 ಗಂಟೆಗೆ ಬಸವಕಲ್ಯಾಣದ ಅನುಭವ ಮಂಟಪದಲ್ಲಿ ವಿಜಯ ಸಂಕಲ್ಪ ಯಾತ್ರೆಗೆ ಅಮಿತ್ ಶಾ ಚಾಲನೆ ನೀಡಲಿದ್ದಾರೆ. ಬಳಿಕ ಮಧ್ಯಾಹ್ನ 12ಕ್ಕೆ ಬಸವೇಶ್ವರ ಮೈದಾನದಲ್ಲಿ ಬೃಹತ್ ಸಾರ್ವಜನಿಕ ಸಭೆ ನಡೆಯಲಿದೆ” ಎಂದು ಹೇಳಿದರು.
“ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ, ಪಕ್ಷದ ರಾಜ್ಯಾಧ್ಯಕ್ಷ ನಳಿನ ಕುಮಾರ ಕಟೀಲ್, ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್, ಸಚಿವರಾದ ಶ್ರೀರಾಮುಲು, ಹಾಲಪ್ಪಾ ಆಚಾರ್ ಸೇರಿದಂತೆ ರಾಜ್ಯದ ಪ್ರಮುಖ ನಾಯಕರು ಆಗಮಿಸುವ ನಿರೀಕ್ಷೆಯಿದೆ. ಜಿಲ್ಲೆಯ ಎಲ್ಲ ಮುಖಂಡರು ಭಾಗವಹಿಸುವರು. ಕಾರ್ಯಕ್ರಮದಲ್ಲಿ ಸುಮಾರು 50 ಸಾವಿರ ಮಂದಿ ಸೇರಲಿದ್ದಾರೆ” ಎಂದು ಮಾಹಿತಿ ನೀಡಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ