ರಾಜ್ಯಕ್ಕೆ ಇಂದು ಅಮಿತ್‌ ಷಾ ಆಗಮನ ….!

ಬೆಂಗಳೂರು

    ರಾಜ್ಯದಲ್ಲಿ ಲೋಕಸಭಾ ಚುನಾವಣಾ ಕಾವು ಜೋರಾಗಿದೆ. ಕರ್ನಾಟಕದಲ್ಲಿ ಮೊದಲ ಹಂತದ ಚುನಾವಣೆ ಏಪ್ರಿಲ್‌ 26 ರಂದು ನಡೆದಿದ್ದು, ಮೇ 07 ರಂದು ಎರಡನೇ ಹಂತದ ಮತದಾನ ನಡೆಯಲಿದೆ. ಈಗಾಗಲೇ ರಾಜ್ಯದಲ್ಲಿ 28 ಲೋಕಸಭಾ ಕ್ಷೇತ್ರಗಳನ್ನ ಗೆಲ್ಲುವ ನಿಟ್ಟಿನಲ್ಲಿ ಬಿಜೆಪಿ ಹಾಗೂ ಜೆಡಿಎಸ್‌ ಮೈತ್ರಿಯಾಗಿದ್ದು, ಮೋದಿ, ಅಮಿತ್‌ ಶಾ ಸೇರಿದಂತೆ ಹಲವು ಘಟಾನುಘಟಿ ನಾಯಕರು ರಾಜ್ಯದಲ್ಲಿ ಅಬ್ಬರದ ಪ್ರಚಾರವನ್ನ ನಡೆಸುತ್ತಿದ್ದು, ಇಂದು(ಬುಧವಾರ) ಅಮಿತ್‌ ಶಾ ರಾಜ್ಯಕ್ಕೆ ಆಗಮಿಸಲಿದ್ದಾರೆ.

    ಮೇ.7 ರಂದು ರಾಜ್ಯದಲ್ಲಿ ನಡೆಯಲಿರುವ ಎರಡನೇ ಹಂತದ ಲೋಕಸಭಾ ಚುನಾವಣೆ ಹಿನ್ನಲೆ ಕೆಲ ದಿನಗಳ ಹಿಂದೆಯಷ್ಟೇ ಪ್ರಧಾನಿ ನರೇಂದ್ರ ಮೋದಿಯವರು ರಾಜ್ಯಕ್ಕೆ ಆಗಮಿಸಿ ಬಿಜೆಪಿ ಅಭ್ಯರ್ಥಿಗಳ ಪರ ಭರ್ಜರಿ ಪ್ರಚಾರ ನಡೆಸಿದ್ರು, ಇದೀಗ ಮೋದಿ ಪ್ರಚಾರದ ಬಳಿಕ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಇಂದು ಮಧ್ಯಾಹ್ನ 3.20ಕ್ಕೆ ಹುಬ್ಬಳ್ಳಿಗೆ ಆಗಮಿಸಲಿದ್ದಾರೆ. 

    ಈಗಾಗಲೇ ಹಲವು ಬಾರೀ ರಾಜ್ಯಕ್ಕೆ ಆಗಮಿಸಿರುವ ಅಮಿತ್‌ ಶಾ ಅವರು ಇಂದು(ಬುಧವಾರ) ಹಾವೇರಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಪರ ಮತಯಾಚನೆ ಮಾಡಲಿದ್ದಾರೆ. ಅಮಿತ್‌ ಶಾ ಅವರು ರಾಣೆಬೆನ್ನೂರಿನ ಕುರಬಗಿರಿ ಕ್ರಾಸ್​ನಿಂದ ಅಶೋಕ ಸರ್ಕಲ್​ವರೆಗೆ ಬೃಹತ್ ರೋಡ್​ಶೋ ನಡೆಸಲಿದ್ದಾರೆ. ರೋಡ್ ​ಶೋ ಬಳಿಕ ಹುಬ್ಬಳ್ಳಿಗೆ ತೆರಳಲಿರುವ ಅಮಿತ್ ಶಾ ಅವರು ಸಂಜೆ 5.45ಕ್ಕೆ ಹುಬ್ಬಳ್ಳಿ ನೆಹರೂ ಮೈದಾನದಲ್ಲಿ ಸಾರ್ವಜನಿಕ ಸಭೆ ನಡೆಸಿ ಪ್ರಹ್ಲಾದ್ ಜೋಶಿ ಪರ ಮತಬೇಟೆ ನಡೆಸಲಿದ್ದಾರೆ.

    ಇನ್ನೂ ರಾಜ್ಯವನ್ನೇ ಬೆಚ್ಚಿಬಿಳಿಸಿದ್ದ ಹುಬ್ಬಳ್ಳಿಯ ಕಾಂಗ್ರೆಸ್‌ ಮುಖಂಡನ ಪುತ್ರಿ ನೇಹಾ ಹಿರೇಮಠ ನಿವಾಸಕ್ಕೆ ಅಮಿತ್‌ ಶಾ ಅವರು ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳುವ ಸಾಧ್ಯತೆಯಿದೆ. ನಳಿಕ ಅಮಿತ್‌ ಶಾ ಅವರು ರಾತ್ರಿ 7.10ಕ್ಕೆ ಹುಬ್ಬಳ್ಳಿ ಏರ್​ಪೋರ್ಟ್​ನಿಂದ ಹೈದರಾಬಾದ್​ಗೆ ತೆರಳಲಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿ

Recent Articles

spot_img

Related Stories

Share via
Copy link
Powered by Social Snap