ಅಪಾಯದಲ್ಲಿರುವುದು ಪ್ರಜಾಪ್ರಭುತ್ವವಲ್ಲ : ರಾಹುಲ್‌ ಗೆ ಅಮಿತ್‌ ಷಾ ಟಾಂಗ್

ನವದೆಹಲಿ: 

      ಪ್ರಜಾಪ್ರಭುತ್ವವಲ್ಲ. ಜಾತಿವಾದ, ಕುಟುಂಬವಾದ ಅಪಾಯದಲ್ಲಿರೋದು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಟಾಂಗ್ ಕೊಟ್ಟಿದ್ದಾರೆ.

    ಕೌಶಂಬಿ ಹಬ್ಬದ ಸಂದರ್ಭದಲ್ಲಿ ಉತ್ತರ ಪ್ರದೇಶದಲ್ಲಿ ಗೃಹ ಸಚಿವ ಅಮಿತ್ ಶಾ ಅವರು ಕೋಟ್ಯಂತರ ಮೌಲ್ಯದ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ಮಾಡಿದರು. ಉತ್ಸವವನ್ನು ಉದ್ಘಾಟಿಸಿದ ಬಳಿಕ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಅಮಿತ್ ಶಾ, ರಾಹುಲ್ ಗಾಂಧಿ ಅವರನ್ನು ಲೋಕಸಭಾ ಸದಸ್ಯತ್ವದಿಂದ ಅನರ್ಹಗೊಳಿಸಿದ ಬಗ್ಗೆ ಸಂಸತ್ತಿನ ಕಲಾಪಕ್ಕೆ ಅಡ್ಡಿಪಡಿಸಿದ ವಿರೋಧ ಪಕ್ಷಗಳನ್ನು ದೇಶ ಕ್ಷಮಿಸುವುದಿಲ್ಲ ಎಂದು ಪ್ರತಿಪಾದಿಸಿದರು.

    ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರೋಗ್ರೆಸ್ಸಿವ್ ಅಲೈಯನ್ಸ್ (ಸರ್ಕಾರ) ತಂದ ಕಾನೂನಿನ ಆಧಾರದ ಮೇಲೆ ಗಾಂಧಿ ಅವರನ್ನು ಸಂಸತ್ ಸದಸ್ಯತ್ವದಿಂದ ಅನರ್ಹಗೊಳಿಸಲಾಗಿದೆ ಎಂದು ಅಮಿತ್ ಶಾ ಹೇಳಿದರು. ಸಮಾಜದ ಎಲ್ಲಾ ವರ್ಗಗಳ ಸರ್ವತೋಮುಖ ಕಲ್ಯಾಣಕ್ಕಾಗಿ 2024ರಲ್ಲಿ ಮತ್ತೊಮ್ಮೆ ನರೇಂದ್ರ ಮೋದಿಯವರನ್ನು ಪ್ರಧಾನಿಯನ್ನಾಗಿ ಮಾಡಬೇಕೆಂದು ಶಾ ಜನರಿಗೆ ಕರೆ ನೀಡಿದರು.

 

    ಮಾನನಷ್ಟ ಮೊಕದ್ದಮೆಯಲ್ಲಿ ಸೂರತ್ ನ್ಯಾಯಾಲಯವು ಎರಡು ವರ್ಷಗಳ ಶಿಕ್ಷೆ ವಿಧಿಸಿದ ನಂತರ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಮಾರ್ಚ್ 24 ರಂದು ಲೋಕಸಭಾ ಸದಸ್ಯತ್ವದಿಂದ ಅನರ್ಹಗೊಳಿಸಲಾಯಿತು.

    ದೇಶದ ಬಜೆಟ್ ಅಧಿವೇಶನದ ಬಗ್ಗೆ ಚರ್ಚೆ ನಡೆಸದೆ ಸಂಸತ್ತಿನ ಕಲಾಪವನ್ನು ಅಂತ್ಯಗೊಳಿಸಿದ್ದು ಸ್ವಾತಂತ್ರ್ಯದ ಇತಿಹಾಸದಲ್ಲಿ ಎಂದೂ ನಡೆದಿರಲಿಲ್ಲ ಎಂದು ಅಮಿತ್ ಶಾ ಹೇಳಿದ್ದಾರೆ. ಪ್ರತಿಪಕ್ಷಗಳ ನಾಯಕರು ಸದನ ಕಲಾಪಕ್ಕೆ ಅವಕಾಶ ನೀಡಲಿಲ್ಲ. ಇದಕ್ಕೆ ಕಾರಣ ರಾಹುಲ್ ಗಾಂಧಿ ಅವರನ್ನು ಅನರ್ಹತೆ ಎಂದು ಅಮಿತ್ ಶಾ ಹೇಳಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap