ಬೆಂಗಳೂರು
ಕರ್ನಾಟಕದಲ್ಲಿ ಇನ್ನೇನು ವಿಧಾನಸಭಾ ಚುನಾವಣೆ ಹತ್ತಿರದಲ್ಲೇ ಇರುವುದರಿಂದ ಬಿಜೆಪಿ ರಾಷ್ಟ್ರೀಯ ನಾಯಕರು ಪದೇ ಪದೇ ರಾಜ್ಯಕ್ಕೆ ಭೇಟಿ ನೀಡುತ್ತಿದ್ದು, ಶತಾಯಗತಾಯ ಚುನಾವಣೆ ಗೆದ್ದು ಮತ್ತೆ ಅಧಿಕಾರ ಹಿಡಿಯಲು ಪ್ರಯತ್ನ ಮಾಡುತ್ತಿದ್ದಾರೆ.
ಇದೇ ಕಾರಣಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಫೆಬ್ರವರಿ 23 ರಂದು ಮತ್ತೆ ರಾಜ್ಯಕ್ಕೆ ಭೇಟಿ ನೀಡುತ್ತಿದ್ದು, ರಾಜಧಾನಿ ಬೆಂಗಳೂರು ಮತ್ತು ಬಳ್ಳಾರಿಯಲ್ಲಿ ಎರಡು ಪ್ರಮುಖ ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.
![](https://prajapragathi.com/wp-content/uploads/2023/02/Untitled-15-8.jpg)