ಪ್ರಮಾಣ ವಚನ ಸ್ವೀಕರಿಸಿದ ಅಮೃತಪಾಲ್ ಸಿಂಗ್ ಮತ್ತು ರಶೀದ್

ನವದೆಹಲಿ:

   ಜೈಲಿನಲ್ಲಿರುವ ಸಿಖ್ ಮೂಲಭೂತವಾದಿ ಧರ್ಮ ಬೋಧಕ ಅಮೃತ ಪಾಲ್ ಸಿಂಗ್ ಹಾಗೂ ಕಾಶ್ಮೀರಿ ನಾಯಕ ಶೇಖ್ ಅಬ್ದುಲ್ ರಶೀದ್ ಶುಕ್ರವಾರ ಲೋಕಸಭೆಯ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದಕ್ಕಾಗಿ ಸಂಸತ್ ಸಂಕೀರ್ಣ ಸುತ್ತಮುತ್ತಲಿನ ಪ್ರದೇಶದಲ್ಲಿ ಭಾರಿ ಪೊಲೀಸ್ ಬಿಗಿ ಭದ್ರತೆ ನಿಯೋಜಿಸಲಾಗಿತ್ತು.

   ಇಂಜಿನಿಯರ್ ರಶೀದ್ ಎಂದೇ ಜನಪ್ರಿಯರಾಗಿರುವ ರಶೀದ್ ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆಯಡಿ ದಾಖಲಾದ ಪ್ರಕರಣದಲ್ಲಿ ದೆಹಲಿಯ ತಿಹಾರ್ ಜೈಲಿನಲ್ಲಿದ್ದರೆ, ಸಿಂಗ್ ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ ಅಪರಾಧಗಳಿಗಾಗಿ ಅಸ್ಸಾಂನ ದಿಬ್ರುಗಢ್ ಜಿಲ್ಲೆಯ ಜೈಲಿನಲ್ಲಿದ್ದಾರೆ. 

   ಇಂದು ಬೆಳಗ್ಗೆ ಅವರಿಬ್ಬರನ್ನೂ ಭದ್ರತಾ ಸಿಬ್ಬಂದಿ ಸಂಸತ್ತಿನ ಸಂಕೀರ್ಣಕ್ಕೆ ಕರೆತಂದರು. ಎಲ್ಲಾ ವಿಧಿವಿಧಾನಗಳನ್ನು ಪೂರ್ಣಗೊಳಿಸಿದ ನಂತರ ಲೋಕಸಭೆಯ ಸ್ಪೀಕರ್ ಅವರ ಕೊಠಡಿಯಲ್ಲಿ ಪ್ರಮಾಣ ವಚನ ಸ್ವೀಕರಿಸಿದರು ಎಂದು ಮೂಲಗಳು ತಿಳಿಸಿವೆ. ಇತ್ತೀಚಿಗೆ ನಡೆದ ಚುನಾವಣೆಯಲ್ಲಿ 31 ವರ್ಷದ ಅಮೃತ್ ಪಾಲ್ ಸಿಂಗ್ ಪಂಜಾಬ್‌ನ ಖದೂರ್ ಸಾಹಿಬ್ ಮತ್ತು ರಶೀದ್ ಜಮ್ಮು -ಕಾಶ್ಮೀರದ ಬಾರಾಮುಲ್ಲಾದಿಂದ ಪಕ್ಷೇತರ ಅಭ್ಯರ್ಥಿಯಾಗಿ ಗೆದಿದ್ದರು.

   ಜೂನ್ 24 ಮತ್ತು 25 ರಂದು ಇತರ ವಿಜೇತ ಅಭ್ಯರ್ಥಿಗಳೊಂದಿಗೆ 18 ನೇ ಲೋಕಸಭೆಯ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಲು ಸಾಧ್ಯವಾಗಿರಲಿಲ್ಲ. ಪ್ರಮಾಣ ವಚನ ಸ್ವೀಕಾರಕ್ಕಾಗಿ ತಿಹಾರ್‌ನಿಂದ ಸಂಸತ್ತಿಗೆ ಪ್ರಯಾಣದ ಸಮಯವನ್ನು ಹೊರತುಪಡಿಸಿ ರಶೀದ್‌ಗೆ ಎರಡು ಗಂಟೆಗಳ ಪೆರೋಲ್ ಮತ್ತು ಅಮೃತ್ ಪಾಲ್ ಸಿಂಗ್‌ಗೆ ಜುಲೈ 5 ರಿಂದ ನಾಲ್ಕು ದಿನಗಳ ಕಸ್ಟಡಿ ಪೆರೋಲ್ ನೀಡಲಾಗಿದೆ.

Recent Articles

spot_img

Related Stories

Share via
Copy link
Powered by Social Snap