
ಕೊರೊನಾ ಸೋಂಕಿನಿಂದ ಪೋಷಕರನ್ನು ಕಳೆದುಕೊಂಡ ವಿದ್ಯಾರ್ಥಿಗಳಿಗೆ ಶಿಕ್ಷಣ ಮುಂದುವರೆಸಲು ಅನುಕೂಲವಾಗುವಂತೆ ಆರ್ಥಿಕ ಸಹಾಯ ಮಾಡಲು ಆದಿತ್ಯ ಬಿರ್ಲಾ ಕ್ಯಾಪಿಟಲ್ ಫೌಂಡೇಷನ್ ವತಿಯಿಂದ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.
ಶಿವಮೊಗ್ಗ ಜಿಲ್ಲೆಯಲ್ಲಿ 1 ರಿಂದ 8 ನೇ ತರಗತಿ ವಿದ್ಯಾರ್ಥಿಗಳಿಗೆ 24,000ಗಳು, 9 ರಿಂದ 12 ನೇ ತರಗತಿ ವಿದ್ಯಾರ್ಥಿಗಳಿಗೆ 30,000 ರೂ. ಗಳು, ವೃತ್ತಿಪರ ಪದವಿ ಪೂರ್ವ ವಿದ್ಯಾರ್ಥಿಗಳಿಗೆ 60 ಸಾವಿರ ರೂ. ಹಾಗೂ ಸಾಮಾನ್ಯ ವೃತ್ತಿಪರ ಪದವಿ ಪೂರ್ವ ವಿದ್ಯಾರ್ಥಿಗಳಿಗೆ 36 ಸಾವಿರ ರೂ.ಗಳ ಆರ್ಥಿಕ ಧನಸಹಾಯ ನೀಡಲಾಗುತ್ತದೆ. ಅರ್ಹರು ಜನವರಿ 31 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಅರ್ಹ ವಿದ್ಯಾರ್ಥಿಗಳು https:\\www.buddy4study.com/page.adity-birla.capital.covid-scholarship-programme ವೆಬ್ ಸೈಟ್ ನಲ್ಲಿ ಅರ್ಜಿಸಲ್ಲಿಸಬಹುದು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
