ಅಮರಾವತಿ:
ಸಿಬಿಐ ಇನ್ನು ಮುಂದೆ ರಾಜ್ಯ ವ್ಯಾಪ್ತಿಯಲ್ಲಿ ಯಾವುದೇ ದಾಳಿ ನಡೆಸುವಂತಿಲ್ಲ; ಮಾತ್ರವಲ್ಲ ಯಾವುದೇ ಅಧಿಕೃತ ಕೆಲಸ ಕಾರ್ಯಗಳನ್ನು ನಡೆಸುವುದಕ್ಕೆ ರಾಜ್ಯ ಸರಕಾರದ ಪೂರ್ವಾನುಮತಿಯನ್ನು ಪಡೆಯಬೇಕಾಗುತ್ತದೆ ಎಂದು ಆಂಧ್ರ ಸರಕಾರ ಅಧಿಸೂಚನೆ ಹೊರಡಿಸಿದೆ.
ಸಿಬಿಐ ಮೂಲಕ ಕೇಂದ್ರದ ಮೋದಿ ಸರ್ಕಾರ ವಿರೋಧಿಗಳನ್ನು ಹಣಿಯುತ್ತಿದೆ ಎಂಬ ಆರೋಪಗಳ ನಡುವೆಯೇ ಕೇಂದ್ರ ಸರ್ಕಾರಕ್ಕೆ ಭರ್ಜರಿ ಟಾಂಗ್ ಕೊಟ್ಟಿರುವ ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಅವರು ಸಿಬಿಐ ನೀಡಲಾಗಿದ್ದ ತನಿಖಾಧಿಕಾರವನ್ನು ಹಿಂದಕ್ಕೆ ತೆಗೆದುಕೊಂಡಿದೆ.
ಎನ್‌ಡಿಎ ಮೈತ್ರಿಕೂಟದಿಂದ ಇತ್ತೀಚೆಗೆ ಹೊರಗೆ ಬಂದು ಬಿಜೆಪಿಯೇತರ ಪಕ್ಷಗಳ ಮೈತ್ರಿಕೂಟ ರಚಿಸಲು ಪ್ರಯತ್ನಿಸುತ್ತಿರುವ ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು ಕೇಂದ್ರದ ವಿರುದ್ಧ ಬಹಿರಂಗ ಸಮರಕ್ಕೆ ನಿಂತಿದ್ದಾರೆ. ರಾಜ್ಯದಲ್ಲಿನ ಯಾವುದೇ ಪ್ರಕರಣದ ವಿಚಾರಣೆ ನಡೆಸಲು ಸಿಬಿಐಗೆ ನೀಡಿರುವ ಸಾಮಾನ್ಯ ಸಮ್ಮತಿಯನ್ನು ಆಂಧ್ರಪ್ರದೇಶ ಸರ್ಕಾರಕ್ಕೆ ಹಿಂಪಡೆದುಕೊಂಡಿದೆ.
ಸರ್ಕಾರದ ಈ ನಿರ್ಣಯದಿಂದಾಗಿ ಆಂಧ್ರ ಪ್ರದೇಶದಲ್ಲಿ ಸಿಬಿಐನ ಅಧಿಕಾರಕ್ಕೆ ಕತ್ತರಿ ಬಿದ್ದಿದ್ದು, ಆಂಧ್ರ ಪ್ರದೇಶದಲ್ಲಿ ಸರ್ಕಾರಿ ಕಚೇರಿಗಳು ಮತ್ತು ಕೇಂದ್ರ ಸರ್ಕಾರಿ ಕಚೇರಿಗಳ ಮೇಲೆ ದಾಳಿ ನಡೆಸಲು ಅಥವಾ ತನಿಖೆ ನಡೆಸಲು ಸಿಬಿಐ ಅಧಿಕಾರಿಗಳು ರಾಜ್ಯ ಸರ್ಕಾರದ ಅನುಮತಿ ಪಡೆಯಬೇಕಾದ ಅನಿವಾರ್ಯತೆ ಸೃಷ್ಟಿಯಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
