ಪುರಸಭೆ ಅಧಿಕಾರಿಗಳ ಕ್ರಮಕ್ಕೆ ಬೀದಿಬದಿ ವ್ಯಾಪಾರಿಗಳ ಆಕ್ರೋಶ

ಆನೇಕಲ್: ಚಂದಾಪುರ ಪುರಸಭಾ ವ್ಯಾಪ್ತಿಯಲ್ಲಿ ಪುಟ್ ಪಾತ್ ಮೇಲಿನ ಅಂಗಡಿಗಳನ್ನು ಏಕಾಏಕಿ ತೆರವುಗೊಳಿಸಿರುವುದನ್ನು ಖಂಡಿಸಿ ಬೀದಿ ಬದಿ ವ್ಯಾಪಾರಿಗಳ ಸಂಘ ಮತ್ತು ಸಿಐಟಿಯು ಸಂಘಟನೆ ವತಿಯಿಂದ ಚಂದಾಪುರ ಪುರಸಭೆ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದರು.
ಚಂದಾಪುರ ಪುರಸಭೆ ವ್ಯಾಪ್ತಿಯಲ್ಲಿ ಹಲವು ವರ್ಷಗಳಿಂದ ಬೀದಿ ಬದಿ ವ್ಯಾಪಾರಿಗಳು ಪುಟ್ ಪಾತ್ ಮೇಲೆ ವ್ಯಾಪಾರ ಮಾಡುತ್ತಿದ್ದಾರೆ. ಚಂದಾಪುರ ಪುರಸಭೆಯ ಚುನಾಯಿತ ಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಏಕಾ ಏಕಿ ಪುಟ್ ಪಾತ್ ಮೇಲಿನ ಅಂಗಡಿಗಳನ್ನು ತೆರವುಗೊಳಿಸಿದರೆ ಬೀದಿ ಬದಿ ವ್ಯಾಪಾರಿಗಳು ಎಲ್ಲಿಗೆ ಹೋಗಬೇಕೆಂದು ಪ್ರತಿಭಟನಾಕಾರರು ಪ್ರಶ್ನಿಸಿದರು‌.
ಬೀದಿಬದಿ ವ್ಯಾಪಾರಿಗಳಿಗೆ ಪುರಸಭೆ ವತಿಯಿಂದ ಗುರುತಿನ ಚೀಟಿ ನೀಡುವುದರ ಜೊತೆಗೆ ಜಾಗವನ್ನು ನೀಡಬೇಕು. ಹಾಗೆಯೇ ಸೂಕ್ತ ಭದ್ರತೆಯನ್ನು ನೀಡಬೇಕು ಮತ್ತು ನಷ್ಠಗೊಂಡ ಬೀದಿ ಬದಿ ವ್ಯಾಪಾರಿಗಳಿಗೆ ಸೂಕ್ತ ಪರಿಹಾರ ನೀಡಬೇಕು ಎಂದು ಸಿಐಟಿಯು ಮುಖಂಡ ಸುರೇಶ್ ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ಸಿಐಟಿಯು ಸಂಘಟನೆಯ ಸುರೇಶ್,  ಸುನೀಲ್ ಲಿಂಗರಾಜ್, ಬಸಮ್ಮ, ರುಕ್ಕಮ್ಮ, ರೇಣುಕಮ್ಮ, ಶಂಭಯ್ಯ ಮತ್ತು ಬೀದಿ ಬದಿ ವ್ಯಾಪಾರಿಗಳು ಭಾಗವಹಿಸಿದ್ದರು.
ಬಾಕ್ಸ್
ಚಂದಾಪುರ ಪುರಸಭೆ ಅಧಿಕಾರಿಗಳು ಕೂಡಲೇ ಬೀದಿ ಬದಿ ವ್ಯಾಪಾರಿಗಳಿಗೆ ಸೂಕ್ತ ಭದ್ರತೆ ನೀಡದಿದ್ದರೆ, ಮೇ 23 ರಂದು ಅಂತರ್ ರಾಷ್ಠೀಯ ಕ್ರೀಡಾಂಗಣದ ಶಂಕುಸ್ಥಾಪನೆ ಆಗಮಿಸುತ್ತಿರುವ ಮುಖ್ಯಮಂತ್ರಿಗಳಿಗೆ ಕಪ್ಪು ಪಟ್ಟಿ ಪ್ರದರ್ಶಿಸಲಾಗುವುದು ಎಂದು ಪ್ರತಿಭಟನಾಕಾರರು ಎಚ್ಚರಿಕೆ ನೀಡಿದರು.

Recent Articles

spot_img

Related Stories

Share via
Copy link