ಕೊಪ್ಪಳ:
ಹೃದಯವೈಫಲ್ಯ ಮತ್ತಿತರ ಕಾರಣಗಳಿಂದ ತೀರಾ ಚಿಕ್ಕ ವಯಸ್ಸಿನ ಮಕ್ಕಳೂ ಕುಸಿದು ಬಿದ್ದು ಸಾವನ್ನಪ್ಪುತ್ತಿರುವ ಪ್ರಕರಣಗಳು ಹೆಚ್ಚುತ್ತಿವೆ. ಇದನ್ನು ಸಾಬೀತುಪಡಿಸುವಂತೆ ಕೊಪ್ಪಳದಲ್ಲಿ ಇನ್ನೊಂದು ಶಾಕಿಂಗ್ ಘಟನೆ ನಡೆದಿದೆ. ಅಂಗನವಾಡಿಯಲ್ಲಿ ಆಟ ಆಡುತ್ತಿದ್ದಾಗ ಕುಸಿದು ಬಿದ್ದು 5 ವರ್ಷದ ಬಾಲಕಿಯೊಬ್ಬಳು ಸಾವನ್ನಪ್ಪಿದ್ದಾಳೆ. ಈ ಘಟನೆ ಕೊಪ್ಪಳ ಜಿಲ್ಲೆಯ ತಾಲೂಕಿನ ತಾಲೂಕಿನ ಬಳೂಟಗಿ ಗ್ರಾಮದಲ್ಲಿ ನಡೆದಿದೆ.
ಆಟವಾಡುತ್ತಿದ್ದಾಗ ಅಲಿಯಾ ಮೊಹಮ್ಮದ್ ರಿಯಾಜ್ (5) ಎನ್ನುವ ಬಾಲಕಿ ಇದ್ದಕ್ಕಿದ್ದಂತೆ ಕುಸಿದು ಬಿದ್ದಿದ್ದಾಳೆ. ಕೂಡಲೇ ಬಾಲಕಿಯನ್ನು ದೊಟಿಹಾಳ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದರು. ಆಸ್ಪತ್ರೆಗೆ ಸಾಗಿಸುವ ವೇಳೆಯೇ ಅಲಿಯಾ ಮೊಹಮ್ಮದ್ ರಿಯಾಜ್ ಸಾವನ್ನಪ್ಪಿದ್ದಾಳೆ. ಮೆದುಳಿನಲ್ಲಿ ರಕ್ತ ಹೆಪ್ಪುಗಟ್ಟಿ ಬಾಲಕಿ ಸಾವನ್ನಪ್ಪಿದ್ದಾಳೆ ಎಂದು ವೈದ್ಯರು ಖಚಿತಪಡಿಸಿದ್ದಾರೆ.
ಇತ್ತೀಚೆಗೆ ಶಿವಮೊಗ್ಗದಲ್ಲಿ ಕಾಲೇಜು ವಿದ್ಯಾರ್ಥಿನಿಯೊಬ್ಬಳು ಕುಸಿದುಬಿದ್ದು ಸಾವನ್ನಪ್ಪಿದ್ದಳು. ಲೋ ಬಿಪಿಯಿಂದಾಗಿ ಕುಸಿದು ಬಿದ್ದು 13 ವರ್ಷದ ಬಾಲಕ ಮೃತಪಟ್ಟ ಘಟನೆ ನಂಜನಗೂಡು ತಾಲೂಕಿನ ತರಗನಹಳ್ಳಿಯಲ್ಲಿ ನಡೆದಿದೆ. ಇನ್ನಷ್ಟು ಇಂಥ ಘಟನೆಗಳು ರಾಜ್ಯದ, ದೇಶದ ನಾನಾ ಕಡೆಗಳಲ್ಲಿ ವರದಿಯಾಗುತ್ತಿವೆ. ಇಂಥ ಆಕಸ್ಮಿಕ ಸಾವುಗಳ ಅಧ್ಯಯನಕ್ಕಾಗಿ ತಜ್ಞರ ಸಮಿತಿ ರಚಿಸಲು ಇತ್ತೀಚೆಗೆ ಸಿಎಂ ಸಿದ್ದರಾಮಯ್ಯ ಮುಂದಾಗಿದ್ದಾರೆ.
ಪಾನಮತ್ತರಾಗಿ ಕಾರು ಚಲಾಯಿಸಿ ಮರಕ್ಕೆ ಡಿಕ್ಕಿ, ಇಬ್ಬರು ವಿದ್ಯಾರ್ಥಿಗಳು ಸಾವು
