ಮುಂಬೈ:
ಬಾಲಿವುಡ್ ನಟಿ ಮಲೈಕಾ ಅರೋರಾ ಅವರ ತಂದೆ ಆತ್ಮಹತ್ಯೆಗೆ ಶರಣಾಗಿದ್ದಾರೆಂದು ಬುಧವಾರ ತಿಳಿದುಬಂದಿದೆ.ಮಲೈಕಾ ಅವರ ತಂದೆ ಅನಿಲ್ ಅರೋರಾ ಅವರು, 6 ಅಂತಸ್ತಿನ ಕಟ್ಟಡದ ಮೇಲಿಂದ ಕೆಳಗೆ ಜಿಗಿದು ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ.
ಸುದ್ದಿ ತಿಳಿದ ಕೂಡಲೇ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಆತ್ಮಹತ್ಯೆ ಮಾಡಿಕೊಂಡಿರೋದನ್ನು ಖಚಿತಪಡಿಸಿದ್ದಾರೆ. ಆದರೆ ಘಟನಾ ಸ್ಥಳದಲ್ಲಿ ಯಾವುದೇ ಡೆತ್‌ನೋಟ್ ಪತ್ತೆಯಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ. ಬಹಳ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಕಾರಣ ಆತ್ಮಹತ್ಯೆಗೆ ಶರಣಾಗಿದ್ದಾರೆಂದು ಹೇಳಲಾಗುತ್ತಿದೆ.
ಮಲೈಕಾ 11 ವರ್ಷದವರಿದ್ದಾಗ ಅವರ ಷೋಷಕರು ವಿಚ್ಛೇದನ ಪಡೆದಿದ್ದರು. ಬಳಿಕ ಮಲೈಕಾ ತಾಯಿ ಜಾಯ್ಸ್ ಪಾಲಿಕಾರ್ಪ್, ಸಹೋದರಿ ಅಮೃತಾ ಅರೋರಾ ಅವರೊಂದಿಗೆ ವಾಸವಾಗಿದ್ದರು.