ಚೆನ್ನೈ :
ಕರ್ನಾಟಕದಲ್ಲಿ ಸೇವೆ ಸಲ್ಲಿಸಿದ್ದ ಮಾಜಿ ಐಪಿಎಸ್ ಅಧಿಕಾರಿ, ತಮಿಳುನಾಡು ಬಿಜೆಪಿ ಉಪಾಧ್ಯಕ್ಷ ಅಣ್ಣಾಮಲೈ ಅವರು ಇಂದು ಅರಾವಕುರಿಚಿ ಕ್ಷೇತ್ರದಲ್ಲಿ ನಾಮಪತ್ರ ಸಲ್ಲಿಸಿದರು.
ಅಣ್ಣಾಮಲೈ ಅವರ ನಾಮಪತ್ರ ಸಲ್ಲಿಕೆ ಕಾರ್ಯಕ್ರಮದಲ್ಲಿ ಸಂಸದ, ಬಿಜೆಪಿ ಯುವ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ತೇಜಸ್ವಿ ಸೂರ್ಯ ಮತ್ತು ಸಚಿವ ಮುನಿರತ್ನ ಭಾಗವಹಿಸಿದ್ದರು.
ಕರ್ನಾಟಕದಲ್ಲಿ ಐಪಿಎಸ್ ಅಧಿಕಾರಿಯಾಗಿದ್ದ ಅಣ್ಣಾಮಲೈ ನಂತರ ರಾಜೀನಾಮೆ ನೀಡಿದ್ದರು. ಕಳೆದ ವರ್ಷ ಬಿಜೆಪಿಗೆ ಸೇರ್ಪಡೆಯಾಗಿದ್ದ ಅವರು ಪಕ್ಷ ಸಂಘಟನೆಗೆ ಕೆಲಸ ಮಾಡಿದ್ದರು. ಇದೀಗ ಅರಾವಕುರಿಚಿ ಕ್ಷೇತ್ರದಲ್ಲಿ ಅವರಿಗೆ ಬಿಜೆಪಿ ಟಿಕೆಟ್ ನೀಡಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ