ಬೆಂಗಳೂರು:
ರಾಜ್ಯದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ನಿಧಾನವಾಗಿ ಏರಿಕೆ ಆಗ್ತಿದೆ. ಈ ಮಧ್ಯೆ BA.4 ಹಾಗೂ BA.5 ಎಂಬ ಒಮಿಕ್ರಾನ್‌ನ ಎರಡು ಉಪತಳಿಗಳು ಪತ್ತೆಯಾಗಿವೆ. ಈ ಕುರಿತು ಹೆಚ್ಚಿನ ಅಧ್ಯಯನಕ್ಕೆ ವೈರಾಲಜಿಸ್ಟ್ ಮುಂದಾಗಿದ್ದು, ಲಕ್ಷಣಗಳೇನು, ಎಷ್ಟು ಅಪಾಯಕಾರಿ ಎಂಬುದು ತಿಳಿಯಲಿದೆ.
ಒಮಿಕ್ರಾನ್ ನ BA.2 ಮೂರನೇ ಅಲೆಯಲ್ಲಿ ಹೆಚ್ಚು ಸೋಂಕು ಹರಡಲು ಕಾರಣವಾಗಿತ್ತು. ಈಗ ಒಮಿಕ್ರಾನ್‌ನ BA.4 ಹಾಗೂ BA.5 ಉಪತಳಿ ಪತ್ತೆಯಾಗಿದೆ. ಈ ಉಪತಳಿ BA.2ನ ಸೀಕ್ವೆನ್ಸ್‌ಗಿಂತ ವಿಭಿನ್ನ ಎಂದು ಹೇಳಲಾಗುತ್ತಿದೆ. ಒಮಿಕ್ರಾನ್ ಸೋಂಕಿತರಿಗೂ ಮತ್ತೆ ಸೋಂಕು ತಗುಲುವ ಸಾಧ್ಯತೆ ಇದೆಯಂತೆ. ನಾಲ್ಕನೇ ಅಲೆಯಲ್ಲಿ ಸೋಂಕು ಹೆಚ್ಚಳಕ್ಕೆ ಕಾರಣವಾಗುತ್ತಾ ಹೊಸ ಉಪತಳಿಗಳು? ಎಂಬ ಆತಂಕ ಮೂಡಿದೆ.
ಅನಧಿಕೃತವಾಗಿ ಮನೆ ನಿರ್ಮಿಸಿದವರಿಗೆ ಸಿಹಿ ಸುದ್ದಿ: ಅಕ್ರಮ-ಸಕ್ರಮ ಯೋಜನೆ ಜಾರಿಗೆ ಸರ್ಕಾರ ಚಿಂತನೆ
ರೂಪಾಂತರಿಯ ವಿವರ: ಡೆಲ್ಟಾ & ಸಬ್ ಲೈನ್ಸ್- 9.8%, ಈಟಾ,ಕಪ್ಪಾ,ಪಂಗೋ- 2.4%, ಒಮಿಕ್ರಾನ್- 87.8%, BA1.1.529- 17.6%, BA1 – 1.8%, BA2- 80.6%
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ