ಬಿಹಾರದಲ್ಲಿ ಕುಸಿತು ಮತ್ತೊಂದು ಸೇತುವೆ …..!

ಸಹರ್ಸಾ: 

    ಬಿಹಾರದಲ್ಲಿ ಸೇತುವೆ ಕುಸಿತ ಸರಣಿ ಮುಂದುವರೆದಿದ್ದು, ಬುಧವಾರ ಸಹರ್ಸಾ ಜಿಲ್ಲೆಯಲ್ಲಿ ಮತ್ತೊಂದು ಸೇತುವೆ ಕುಸಿದಿದೆ. ಇದರೊಂದಿಗೆ ಮೂರು ವಾರಗಳ ಅವಧಿಯಲ್ಲಿ ರಾಜ್ಯದಲ್ಲಿ 13 ಸೇತುವೆಗಳು ಕುಸಿದು ಬಿದ್ದಿವೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

    ಇಂದು ಬೆಳಗ್ಗೆ ಸಹರ್ಸಾ ಜಿಲ್ಲೆಯ ಮಹಿಷಿ ಗ್ರಾಮದಲ್ಲಿ ಸೇತುವೆ ಕುಸಿದಿದೆ. ಇದು ಸಣ್ಣ ಸೇತುವೆ ಅಥವಾ ಕಾಸ್‌ವೇ ಆಗಿರಬಹುದು. ಜಿಲ್ಲಾ ಅಧಿಕಾರಿಗಳು ಸ್ಥಳಕ್ಕೆ ತೆರಳಿದ್ದಾರೆ. ನಾವು ಘಟನೆಯ ಬಗ್ಗೆ ಹೆಚ್ಚಿನ ಮಾಹಿತಿ ಸಂಗ್ರಹಿಸಲು ಪ್ರಯತ್ನಿಸುತ್ತಿದ್ದೇವೆ” ಎಂದು ಹೆಚ್ಚುವರಿ ಜಿಲ್ಲಾಧಿಕಾರಿ(ಸಹರ್ಸಾ), ಜ್ಯೋತಿ ಕುಮಾರ್ ಅವರು ಹೇಳಿದ್ದಾರೆ.

    ಘಟನೆಯಲ್ಲಿ ಯಾವುದೇ ಗಾಯ ಅಥವಾ ಪ್ರಾಣಾಪಾಯ ಸಂಭವಿಸಿರುವ ಬಗ್ಗೆ ವರದಿಯಾಗಿಲ್ಲ. ಸಿವಾನ್, ಸರನ್, ಮಧುಬನಿ, ಅರಾರಿಯಾ, ಪೂರ್ವ ಚಂಪಾರಣ್ ಮತ್ತು ಕಿಶನ್‌ಗಂಜ್ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಇತ್ತೀಚಿಗೆ ಸಂಭವಿಸಿದ ಸೇತುವೆ ಕುಸಿತದ ಸರಣಿ ಘಟನೆಗಳಿಗೆ ಸಂಬಂಧಿಸಿದಂತೆ ಬಿಹಾರ ಸರ್ಕಾರ ಕನಿಷ್ಠ 15 ಎಂಜಿನಿಯರ್‌ಗಳನ್ನು ಅಮಾನತುಗೊಳಿಸಿದೆ.  

   ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಕಳೆದ ವಾರ ರಾಜ್ಯದ ಎಲ್ಲಾ ಹಳೆಯ ಸೇತುವೆಗಳ ಸಮೀಕ್ಷೆ ನಡೆಸಿ, ತಕ್ಷಣ ದುರಸ್ತಿ ಮಾಡಬೇಕಾದ ಸೇತುವೆಗಳನ್ನು ಗುರುತಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿ

Recent Articles

spot_img

Related Stories

Share via
Copy link