ಬಲಿಗಾಗಿ ಕಾಯುತ್ತಿವೆಯಾ ಬೆಂಗಳೂರು ಕಟ್ಟಡಗಳು : ವಾಲಿದ ಮತ್ತೊಂದು ಕಟ್ಟಡ….!

ಬೆಂಗಳೂರು

   ನಗರದ ಬಾಬುಸಾಪಾಳ್ಯದಲ್ಲಿ ಕಟ್ಟಡ ಕುಸಿದು ದೊಡ್ಡ ದುರಂತವೇ ಸಂಭವಿಸಿತ್ತು. ಇದುವರೆಗೂ 8 ಜನ ಕಾರ್ಮಿಕರು ಸಾವನ್ನಪ್ಪಿದ್ದರೆ, 8 ಜನರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗಾಯಗೊಂಡವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಈ ಮಧ್ಯೆ ಸಿಲಿಕಾನ್​ ಸಿಟಿಯಲ್ಲಿ 6 ಅಂತಸ್ತಿನ ನಿರ್ಮಾಣ ಹಂತದ ಮತ್ತೊಂದು ಕಟ್ಟಡ ವಾಲಿದ್ದು, ಬಲಿ ಪಡೆಯಲು ಸಿದ್ಧವಾಗಿದೆಯಾ ಎಂಬ ಅನುಮಾನಗಳು ಹುಟ್ಟಿಕೊಂಡಿದೆ.

  ಗ್ರೌಂಡ್​ ಫ್ಲೋರ್ ಸೇರಿದಂತೆ ನಾಲು ಅಂತಸ್ತಿನ ಕಟ್ಟಡಕ್ಕೆ ಮಾಲೀಕ ಪುಟ್ಟಪ್ಪ ಅನುಮತಿ ಪಡೆದಿದ್ದ. ಆದರೆ ನಿಯಮ‌ ಮೀರಿ ಆರಂತಸ್ತಿನ ಕಟ್ಟಡ ನಿರ್ಮಾಣ ಮಾಡಿದ್ದಾರೆ. ಬಿಬಿಎಂಪಿ ಅಧಿಕಾರಿಗಳ ನೋಟಿಸ್​ಗೆ ಉತ್ತರ ನೀಡಿರುವ ಮಾಲೀಕ ಕಟ್ಟಡ ಸ್ವಂತ ಖರ್ಚಿನಲ್ಲಿ ತೆರವು ಮಾಡೋದಾಗಿ ಪತ್ರ ಬರೆದಿದ್ದಾರೆ. ಸದ್ಯ ವಾಲಿದ ಕಟ್ಟಡ ತೆರವಿಗೆ ಬಿಬಿಎಂಪಿ ಅಧಿಕಾರಿಗಳು ಸೂಚನೆ ನೀಡಿದ್ದಾರೆ. ಬಾಣಸವಾಡಿ ಉಪ ವಿಭಾಗದ ಎಸಿಪಿ ಉಮಾಶಂಕರ್ ಸ್ಥಳಕ್ಕೆ ಭೇಟಿ ನೀಡಿದ್ದಾರೆ.
   ಬಾಬುಸಾಪಾಳ್ಯದಲ್ಲಿ 6 ಅಂತಸ್ತಿನ ಕಟ್ಟಡ ಕುಸಿದಿದ್ರಿಂದ ನಿರಂತರ ಶೋಧ ನಡೆಸಲಾಗುತ್ತಿದೆ. ಕಟ್ಟಡದ ಅವಶೇಷಗಳಡಿ ಮತ್ತಷ್ಟು ಜನರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಹೀಗಾಗಿ ಎನ್​ಡಿಆರ್​ಎಫ್​ ತಂಡದದಿಂದ ಶೋಧ ನಡೆಸಲಾಗುತ್ತಿದೆ. ಅನಧಿಕೃತವಾಗಿ ಕಟ್ಟಡ ನಿರ್ಮಾಣ ಮಾಡಿದ್ದೇ ದುರಂತಕ್ಕೆ ಕಾರಣ ಅಂತಾ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಕಟ್ಟಡ ಕುಸಿತ ದುರಂತ ಪ್ರದೇಶಕ್ಕೆ ಸಿಎಂ ಸಿದ್ದರಾಮಯ್ಯ ಇಂದು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಮೃತ ಕುಟುಂಬಗಳಿಗೆ ತಲಾ 5 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದ್ದಾರೆ. ಇನ್ನು ಗಾಯಾಳುಗಳಿಗೆ ಸರ್ಕಾರದಿಂದ ವೈದ್ಯಕೀಯ ವೆಚ್ಚ ಭರಿಸಲಾಗುತ್ತೆ ಎಂದು ಹೇಳಿದ್ದಾರೆ.
   ಇನ್ನು ಪ್ರಕರಣದಲ್ಲಿ ಕಟ್ಟಡದ ಮಾಲೀಕ ಮುನಿರಾಜು ರೆಡ್ಡಿ, ಪುತ್ರ ಆರೋಪಿ ಭುವನ್ ರೆಡ್ಡಿ ಹಾಗೂ ಕಾಂಟ್ರ್ಯಾಕ್ಟರ್ ಮುನಿಯಪ್ಪನನ್ನು ಹೆಣ್ಣೂರು ಪೊಲೀಸರು ಬಂಧಿಸಿದ್ದಾರೆ. ಬಿಎನ್​ಎಸ್ ಕಾಯ್ದೆ 105, 125(A), 125(B) , 270, 3(5) ಹಾಗೂ ಬಿಬಿಎಂಪಿ ಆ್ಯಕ್ಟ್ 326, 327, 328, ರೇರಾ ಕಾಯ್ದೆಗಳ ಉಲ್ಲಂಘನೆ ಸೆಕ್ಷನ್ 3 ರಡಿ ಎಫ್​ಐಆರ್​ ದಾಖಲಿಸಲಾಗಿದೆ.

Recent Articles

spot_img

Related Stories

Share via
Copy link