ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣ : NIA ಯಿಂದ ಮತ್ತೊಂದು ಚಾರ್ಜ್‌ ಶೀಟ್‌ ಸಲ್ಲಿಕೆ

ಬೆಂಗಳೂರು

    ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣ ಸಂಬಂಧ ರಾಷ್ಟ್ರೀಯ ತನಿಖಾದಳ  ಮಂಗಳವಾರ ಆರೋಪಿಗಳಿಬ್ಬರ ವಿರುದ್ಧ ಮತ್ತೊಂದು ಚಾರ್ಜ್​ಶೀಟ್  ಸಲ್ಲಿಕೆ ಮಾಡಿದೆ. ಇದರಲ್ಲಿ ಗಂಭೀರ ಆರೋಪಗಳನ್ನು ಹೊರಿಸಲಾಗಿದೆ. ಆರೋಪಿಗಳಾದ ಅಬ್ದುಲ್ ಮತೀನ್ ಅಹ್ಮದ್ ತಾಹಾ ಮತ್ತು ಮಸ್ಸಾವೀರ್ ಹುಸೇನ್ ಶಾಜಿಬ್ ವಿರುದ್ಧ ಈ ಹಿಂದೆಯೂ ಎನ್​ಐಎ ಚಾರ್ಜ್​ಶೀಟ್ ಸಲ್ಲಿಸಿತ್ತು. ಇದೀಗ ಮತ್ತೊಂದು ಚಾರ್ಜ್​ಶೀಟ್ ಸಲ್ಲಿಕೆ ಮಾಡಿದೆ. 

   ಆರೋಪಿಗಳಾದ ಅಬ್ದುಲ್ ಮತೀನ್ ಅಹ್ಮದ್ ತಾಹಾ ಮತ್ತು ಮಸ್ಸಾವೀರ್ ಹುಸೇನ್ ಮುಸ್ಲಿಂ ಯುವಕರನ್ನು ಮೂಲಭೂತವಾದಿ ಚಟುವಟಿಕೆಗಳಿಗೆ ಸೆಳೆಯುತ್ತಿದ್ದರಲ್ಲದೆ, ಪ್ರಚೋದನೆ ನೀಡುತ್ತಿದ್ದರು. ಭಯೋತ್ಪಾದಕರಿಗೆ ಹಣಕಾಸು ನೆರವನ್ನೂ ನೀಡುತ್ತಿದ್ದರು ಎಂದು ಚಾರ್ಜ್​​ಶೀಟ್​ನಲ್ಲಿ ಉಲ್ಲೇಖಿಸಲಾಗಿದೆ. ಇವರಿಬ್ಬರೂ ಶಿವಮೊಗ್ಗ ಜಿಲ್ಲೆಯ ನಿವಾಸಿಗಳಾಗಿದ್ದಾರೆ.

    ಇಬ್ಬರು ಆರೋಪಿಗಳ ವಿರುದ್ಧ ಎನ್‌ಐಎ ಸಲ್ಲಿಸಿರುವ ಮೂರನೇ ಪೂರಕ ಚಾರ್ಜ್‌ಶೀಟ್‌ (ದೋಷಾರೋಪ ಪಟ್ಟಿ) ಇದಾಗಿದೆ. ಇದರೊಂದಿಗೆ ಪ್ರಕರಣದಲ್ಲಿ ಈವರೆಗೆ 10 ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಿದಂತಾಗಿದೆ. ಆರಂಭದಲ್ಲಿ ಕರ್ನಾಟಕ ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿದ್ದರು. ನಂತರ 2022 ರ ನವೆಂಬರ್​​ನಲ್ಲಿ ಎನ್ಐಎ ತನಿಖೆ ಕೈಗೆತ್ತಿಕೊಂಡಿತ್ತು. ನಂತರ, ಘಟನೆಯು ನಿಷೇಧಿತ ಭಯೋತ್ಪಾದಕ ಸಂಘಟನೆ ಇಸ್ಲಾಮಿಕ್ ಸ್ಟೇಟ್ (ಐಎಸ್/ಐಎಸ್ಐಎಸ್) ನ ಭಾರತ ವಿರೋಧಿ ಚಟುವಟಿಕೆಗಳಿಗೆ ಸಂಬಂಧಿಸಿದೆ ಎಂದು ಅದು ತಿಳಿಸಿತ್ತು. 

   ಆರೋಪಿಗಳು ಭಯೋತ್ಪಾದನೆಯನ್ನು ಹರಡಲು ಮತ್ತು ರಾಷ್ಟ್ರವನ್ನು ಅಸ್ಥಿರಗೊಳಿಸುವ ಐಎಸ್ ಪಿತೂರಿಯ ಭಾಗವಾಗಿ ಮೂಲಭೂತವಾದಿ ಚಟುವಟಿಕೆಗಳು, ಭಯೋತ್ಪಾದನೆಗೆ ಯುವಕರನ್ನು ಸೆಳೆಯುವುದು, ಭಯೋತ್ಪಾದನೆಗೆ ಹಣಕಾಸು ನೆರವು ನೀಡುವುದು, ಸ್ಫೋಟ ಕೃತ್ಯ ಎಸಗುವುದು ಮತ್ತು ಭಾರತೀಯ ರಾಷ್ಟ್ರಧ್ವಜದ ದಹನದಂತಹ ಹಿಂಸಾತ್ಮಕ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದಾರೆ ಎಂದು ಎನ್​ಐಎ ತಿಳಿಸಿದೆ.

Recent Articles

spot_img

Related Stories

Share via
Copy link