ಬೆಂಗಳೂರು :
ರಾಜ್ಯ ಸರ್ಕಾರವು ಶಾಲಾ ಮಕ್ಕಳಿಗೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ತಿಂಗಳಲ್ಲಿ ಒಂದು ದಿನ ಮಕ್ಕಳಿಗೆ ಸಿರಿಧಾನ್ಯ ಬಿಸಿಯೂಟ ನೀಡಲಾಗುವುದು ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ತಿಳಿಸಿದ್ದಾರೆ.
ಸದನದಲ್ಲಿ ಈ ಕುರಿತು ಮಾಹಿತಿ ನೀಡಿದ ಸಚಿವರು, ಕರ್ನಾಟಕ ಹಾಲು ಮಹಾಮಂಡಲ ಸಹಯೋಗದಲ್ಲಿ ತಿಂಗಳಲ್ಲಿ ಒಂದು ದಿನ ರಾಜ್ಯದ ಶಾಲಾ ಮಕ್ಕಳಿಗೆ ಸಿರಿಧಾನ್ಯದ ಬಿಸಿಯೂಟ ನೀಡಲು ಉದ್ದೇಶಿಸಲಾಗಿದೆ.ಇದಕ್ಕಾಗಿ ಬಜೆಟ್‌ನಲ್ಲಿ10 ಕೋಟಿ ರು. ಮೀಸಲಿಡಿಸಲಾಗಿದೆ ಎಂದು ಹೇಳಿದ್ದಾರೆ.
ಇನ್ನು ರಾಜ್ಯ ಸರ್ಕಾರವು ಸಿರಿಧಾನ್ಯ ಕೃಷಿ ಪ್ರೋತ್ಸಾಹಕ್ಕೆ ಪ್ರೋತ್ಸಾಹಧನ ನೀಡುತ್ತಿದ್ದು, ಒಂದು ಹೆಕ್ಟೇರ್‌ಗೆ ಕನಿಷ್ಠ 10,000 ರೂ. ನಿಂದ 20,000 ರೂ. ಪ್ರೋತ್ಸಾಹಧನ ನೀಡಲಾಗುವುದು. ರಾಜ್ಯದ ನಾಲ್ಕು ಭಾಗದಲ್ಲಿ ಸಿರಿಧಾನ್ಯ ಮೇಳ ಆಯೋಜಿಸಿ ರೈತರಿಗೆ ಸಿರಿಧಾನ್ಯ ಕೃಷಿ ಬಗ್ಗೆ ಜಾಗೃತಿ ಹಾಗೂ ಉತ್ತೇಜನ ನೀಡಲಾಗುವುದು ಎಂದು ತಿಳಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
