ನಟಿ ಶಿಲ್ಪಾ ಶೆಟ್ಟಿಗೆ ಒಂದಾದ ಮೇಲೊಂದು ಸಂಕಷ್ಟ….!

ಬೆಂಗಳೂರು :

      ಬಾಲಿವುಡ್‌ ನಟಿ ಶಿಲ್ಪಾ ಶೆಟ್ಟಿಗೆ ಒಂದಾದ ಮೇಲೊಂದು ಸಂಕಷ್ಟ ಎದುರಾಗುತ್ತಿದೆ. ಜಾರಿ ನಿರ್ದೇಶನಾಲಯ 98 ಕೋಟಿ ರೂಪಾಯಿ ಮೌಲ್ಯದ ಆಸ್ತಿ ವಶ ಪಡಿಸಿಕೊಂಡ ಪ್ರಕರಣ ತನಿಖೆ ಹಂತದಲ್ಲೇ, ಮತ್ತೊಂದು ವೈಯಕ್ತಿಕ ಸಮಸ್ಯೆ ಎದುರಾಗಿದೆ. ಇದೀಗ ನಟಿ ಶಿಲ್ಪಾ ಶೆಟ್ಟಿ ತಂಗಿ ಶಮಿತಾ ಶೆಟ್ಟಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ವಿಚಿತ್ರ ಕಾಯಿಲೆಯಿಂದ ಬಳಲುತ್ತಿರುವ ನಟಿ ಶಮಿತಾ ಶೆಟ್ಟಿಗೆ ನುರಿತ ವೈದ್ಯರ ತಂಡ ಚಿಕಿತ್ಸೆ ನೀಡುತ್ತಿದೆ.

      ನಟಿ ಶಮಿತಾ ಶೆಟ್ಟಿ ಅವರು ಎಂಡೊಮೆಟ್ರಿಯೊಸಿಸ್ ಎನ್ನುವ ಸಮಸ್ಯೆಯಿಂದ ಬಳಲುತ್ತಿದ್ದು, ಸೂಕ್ತ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಬಗ್ಗೆ ಸ್ವತಃ ಶಮಿತಾ ಶೆಟ್ಟಿ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಅಭಿಮಾನಿಗಳಿಗೆ ತಿಳಿಸಿದ್ದು, ಎಲ್ಲಾ ಮಹಿಳೆಯರೂ ಈ ಬಗ್ಗೆ ಜಾಗೃತರಾಗಿ ಮತ್ತು ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಸಲಹೆ ನೀಡಿದ್ದಾರೆ.

     ತಮ್ಮ ಆರೋಗ್ಯದ ಬಗ್ಗೆ ವಿಡಿಯೋ ಮೂಲಕ ಮುಖ್ಯವಾದ ವಿಷಯ ಶೇರ್‌ ಮಾಡಿಕೊಂಡಿರುವ ಶಮಿತಾ ಶೆಟ್ಟಿ, ಆಸ್ಪತ್ರೆ ಬೆಡ್‌ನಿಂದಲೇ ವಿಡಿಯೋ ಮಾಡಿ ವಿವರಣೆ ನೀಡಿದ್ದಾರೆ. ಸುಮಾರು 40% ಮಹಿಳೆಯರು ಎಂಡೊಮೆಟ್ರಿಯೊಸಿಸ್‌ನಿಂದ ಬಳಲುತ್ತಿದ್ದಾರೆ ಎಂದು ನಿಮಗೆ ತಿಳಿದಿದೆಯೇ..? ನಮ್ಮಲ್ಲಿ ಹೆಚ್ಚಿನವರಿಗೆ ಈ ಕಾಯಿಲೆಯ ಬಗ್ಗೆ ತಿಳಿದಿಲ್ಲ. ನನ್ನನ್ನು ಕಾಡುತ್ತಿದ್ದ ನೋವಿನ ಮೂಲ ತಿಳಿದುಕೊಂಡು ಚಿಕಿತ್ಸೆ ನೀಡಿದ ಸ್ತ್ರೀವೈದ್ಯೆ ಡಾ.ನೀತಾ ವಾರ್ಟಿ ಮತ್ತು ನನ್ನ ಜಿಪಿ ಡಾ ಸುನೀತಾ ಬ್ಯಾನರ್ಜಿ ಇಬ್ಬರಿಗೂ ಧನ್ಯವಾದಗಳು.

     ಸದ್ಯ ಶಸ್ತ್ರಚಿಕಿತ್ಸೆಯಿಂದ ನಾನು ಈ ರೋಗದಿಂದ ಗುಣ ಮುಖಳಾಗುತ್ತಿದೇನೆ. ನನ್ನ ಆರೋಗ್ಯ ಮತ್ತಷ್ಟು ಸುಧಾರಿಸಲು ಎದುರು ನೀಡುತ್ತಿದ್ದೇನೆ. ಈಗೀಗ ನೋವಿಲ್ಲದ ದಿನಗಳನ್ನು ಕಳೆಯುತ್ತಿದ್ದೇನೆ. ಹೀಗಾಗಿ ಎಲ್ಲಾ ಮಹಿಳೆಯರೂ ಈ ಎಂಡೊಮೆಟ್ರಿಯೊಸಿಸ್ ಬಗ್ಗೆ ಜಾಗೃತರಾಗಿ ಮತ್ತು ಪರೀಕ್ಷೆ ಮಾಡಿಸಿಕೊಂಡು ಚಿಕಿತ್ಸೆ ಪಡೆಯಿರಿ ಎಂದು ಸಲಹೆ ನೀಡಿದ್ದಾರೆ. 

    ಸಾಮಾನ್ಯವಾಗಿ ಮಹಿಳೆಯರಲ್ಲಿ ಕಂಡು ಬರುವ ಎಂಡೊಮೆಟ್ರಿಯೊಸಿಸ್ ಕಾಯಿಲೆ ಗರ್ಭಕೋಶಕ್ಕೆ ಸಂಬಂಧಿಸಿದ್ದು, ಗರ್ಭಾಶಯದ ಒಳಪದರವನ್ನು ಹೋಲುವ ಅಂಗಾಂಶವು ಗರ್ಭಾಶಯದ ಹೊರಗೆ ಬೆಳೆಯಲು ಪ್ರಾರಂಭಿಸುತ್ತದೆ. ಇದರಿಂದ ಮೊದಮೊದಲು ಸೊಂಟ ನೋವು, ಹೊಟ್ಟೆ ನೋವು ಕಾಣಿಸಿಕೊಳ್ಳುತ್ತದೆ. ಇದನ್ನು ಕೂಡಲೇ ಪರೀಕ್ಷೆ ನಡೆಸಿ ಸೂಕ್ತ ಚಿಕಿತ್ಸೆ ಪಡೆದುಕೊಳ್ಳಬೇಕು. ಇಲ್ಲವಾದರೆ ಮಹಿಳೆಯರಿಗೆ ಗರ್ಭಿಣಿಯಾಗಲು ಕಷ್ಟವಾಗುತ್ತದೆ. ಹಾಗೂ ಮುಟ್ಟಿನ ಸಮಯದಲ್ಲಿ ಕಷ್ಟವಾಗುತ್ತದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿ

Recent Articles

spot_img

Related Stories

Share via
Copy link
Powered by Social Snap