ತುಮಕೂರು :
ತುಮಕೂರಿನಲ್ಲಿ ಮತ್ತೊಂದು ಖಾಸಗಿ ಬಸ್ ಅಪಘಾತವಾಗಿದ್ದು, ಟ್ಯಾಂಕರ್ ಲಾರಿಗೆ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ 10 ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ನಡೆದಿದೆ.
ಇಂದು ಬೆಳಗಿನ ಜಾವ 3.50 ರ ಸುಮಾರಿಗೆ ತುಮಕೂರು ಹೊರವಲಯದ ಅಂತರಸನಹಳ್ಳಿ ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ಘಟನೆ ಸಂಭವಿಸಿದೆ. ಹಿಂಬದಿಯಿಂದ ಬಂದು ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಹತ್ತಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.ಆದರೆ ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
ಖಾಸಗಿ ಬಸ್ ಸೊರಬದಿಂದ ಬೆಂಗಳೂರು ಕಡೆ ತೆರಳುತ್ತಿತ್ತು. ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲ. ತುಮಕೂರು ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ದಾಖಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ