ಮಂಡ್ಯ:
ರಾಜ್ಯದಲ್ಲಿ ಅವ್ಯಾಹತವಾಗಿ ನಡೆಯುತ್ತಿರುವ ಮೀಟರ್ ಬಡ್ಡಿ ದಂಧೆಗೆ ಮತ್ತೊಂದು ಬಲಿಯಾಗಿದೆ. ಮಂಡ್ಯ ಜಿಲ್ಲೆಯ ಕೆ.ಆರ್. ಪೇಟೆ ತಾಲೂಕಿನಲ್ಲಿ ಸಾಲ ನೀಡಿದವರ ಕಿರುಕುಳದಿಂದ ನೊಂದು ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.
ಮೀಟರ್ ಬಡ್ಡಿ ದಂಧೆಯನ್ನು ಮಟ್ಟಹಾಕಲು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಮಹತ್ವದ ಸಭೆ ನಡೆದ ದಿನವೇ ಈ ಘಟನೆ ನಡೆದಿದೆ. ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ವಳಗೆರೆ ಮೆಣಸ ಗ್ರಾಮದ ಯುವಕ ನವೀನ್ ಎಂಬಾತ ಖಾಸಗಿ ವ್ಯಕ್ತಿಗಳಿಂದ 30 ಲಕ್ಷ ರೂ. ಸಾಲ ಮಾಡಿದ್ದ. ಬಳಿಕ ಸಾಲಗಾರರ ಕಿರುಕುಳದಿಂದ ನೊಂದು ಇಂದು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಆರೋಪ ಮಾಡಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.