ಬೆಂಗಳೂರು :
ವಿದ್ಯುತ್ ದರ, ತೈಲ ಬೆಲೆ ಏರಿಕೆಯಿಂದ ತತ್ತರಿಸಿರುವ ರಾಜ್ಯದ ಜನತೆಗೆ ಮತ್ತೊಂದು ಬೆಲೆ ಏರಿಕೆಯ ಬಿಸಿ ತಟ್ಟಲಿದ್ದು, ಶೀಘ್ರವೇ ನಂದಿನಿ ಹಾಲಿನ ದರ ಏರಿಕೆಯಾಗುವ ಸಾಧ್ಯತೆ ಇದೆ.
ರಾಜ್ಯದಲ್ಲಿ ಸದ್ಯದಲ್ಲೇ ನಂದಿನಿ ಹಾಲಿನ ದರ ಪ್ರತಿ ಲೀಟರ್ ಗೆ 5 ರೂ ಏರಿಕೆ ಮಾಡುವಂತೆ ರಾಜ್ಯ ಸರ್ಕಾರಕ್ಕೆ ಹಾಲು ಒಕ್ಕೂಟಗಳು ಕೆ ಪ್ರಸ್ತಾವನೆ ಸಲ್ಲಿಸಿದೆ.
ಬೆಂಗಳೂರಿನಲ್ಲಿ ಯುವಕನ ಕೊಲೆ: ಶಾಹಿದ್ ಹೆಸರಿನ ಮೂವರು ಆರೋಪಿಗಳು ಪೊಲೀಸರ ವಶಕ್ಕೆ!
ಕರ್ನಾಟಕ ಹಾಲು ಮಹಾಮಂಡಳಿ ನಂದಿನಿ ಹಾಲಿನ ದರ ಹೆಚ್ಚಳ ಮಾಡುವ ಬಗ್ಗೆ ಸಿದ್ಧತೆ ನಡೆಸಿದ್ದು, ಏಪ್ರಿಲ್ 10 ರಂದು ಈ ಸಂಬಂಧ ಸಿಎಂ ಬಸವರಾಜ ಬೊಮ್ಮಾಯಿ ಭೇಟಿಯಾಗಿ ಚರ್ಚೆ ನಡೆಸಲಿವೆ.
ಒಂದು ವೇಳೆ ರಾಜ್ಯ ಸರ್ಕಾರ ಕೆಎಂಎಫ್ ನಂದಿನ ಹಾಲಿನ ದರ ಏರಿಕೆ ಪ್ರಸ್ತಾವನೆಗೆ ಒಪ್ಪಿಗೆ ಸೂಚಿಸಿದ್ರೇ, ಏಪ್ರಿಲ್ 10 ರ ನಂತರ ಹಾಲಿನ ದರ ಪರಿಷ್ಕರಣೆಯಾಗುವ ಸಾಧ್ಯತೆ ಇದೆ. ಈಗಾಗಲೇ ಕೆಎಂಎಫ್ ಹಾಲಿನ ದರ ಏರಿಕೆಗೆ ಕೆಎಂಎಫ್ ಅಸ್ತು ಎಂದಿದೆ. ಈಗ ಹಾಲು ಒಕ್ಕೂಟಗಳಿಂದ ನಂದಿನ ಹಾಲಿನ ದರ ಏರಿಕೆಗೆ ಪ್ರಸ್ತಾವನೆ ಸಲ್ಲಿಸಲಾಗಿದ್ದು, ವಿದ್ಯುತ್ ದರ ಏರಿಕೆಯಂತೆ ಹಾಲಿನ ದರ ಏರಿಕೆ ಮಾಡುವಂತೆ ಒತ್ತಾಯ ಮಾಡಲಾಗಿದೆ.
ಹಿಜಾಬ್ ಬೆನ್ನಲ್ಲೇ ದಿನಕ್ಕೊಂದು ಧರ್ಮ ಯುದ್ಧ.. ದೇವಸ್ಥಾನ, ಮಸೀದಿ, ಚರ್ಚ್‌ಗಳಿಗೆ ಪೊಲೀಸ್ ನೋಟಿಸ್
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ