ಬೆಂಗಳೂರು :
ರಾಜ್ಯ ಸರ್ಕಾರವು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಸಮುದಾಯಕ್ಕೆ ಸಿಹಿಸುದ್ದಿ ನೀಡಿದ್ದು, ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ ಕಲ್ಯಾಣ ಮಿತ್ರ ಏಕಿಕೃತ ಎಸ್ ಸಿ, ಎಸ್ ಟಿ ಸಹಾಯವಾಣಿಗೆ ಸಿಎಂ ಬಸವರಾಜ ಬೊಮ್ಮಾಯಿ ಚಾಲನೆ ನೀಡಿದ್ದಾರೆ.
17ನೇ ದಿನವೂ ಮುಂದುವರಿದ ‘ಕೆಜಿಎಫ್ 2’ ಅಬ್ಬರ; ಯಶ್ ಎದುರು ಮಂಕಾದ ಅಜಯ್ ದೇವಗನ್, ಟೈಗರ್ ಸಿನಿಮಾ
ವಿಧಾನಸೌಧದ ಬ್ಯಾಂಕ್ವೆಂಟ್ ಹಾಲ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಲ್ಯಾಣ ಮಿತ್ರ ಏಕಿಕೃತ ಎಸ್ ಸಿ, ಎಸ್ ಟಿ ಸಹಾಯವಾಣಿಗೆ ಸಿಎಂ ಬಸವರಾಜ ಬೊಮ್ಮಾಯಿ ಚಾಲನೆ ನೀಡಿದ್ದಾರೆ. ಸಮಾಜ ಕಲ್ಯಾಣ ಇಲಾಖೆ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಸಚಿವಾಲಯದ ವ್ಯಾಪ್ತಿಯಲ್ಲಿ ಬರುವ ಎಲ್ಲ ಇಲಾಖೆಗಳು, ನಿಗಮ, ಮಂಡಳಿ, ಸಂಸ್ಥೆ, ಆಯೋಗಗಳ ಮೂಲಕ ಅನುಷ್ಠಾನ ಮಾಡಲಾಗುತ್ತಿರುವ ವಿವಿಧ ಕಾರ್ಯಕ್ರಮಗಳ ಬಗ್ಗೆ ಸಹಾಯವಾಣಿ 9482300400 ಮೂಲಕ ಪಡೆದುಕೊಳ್ಳಬಹುದು.